ಚಿಕ್ಕಮಗಳೂರು: ಭಾರೀ ಮಳೆಗೆ ಮನೆ ಮೇಲೆ ಮರ ಬಿದ್ದು ತಾಯಿ-ಮಗಳು ಸಾವು

ರಾಜ್ಯದಲ್ಲಿ ವರುಣಾರ್ಭಟ ಮುಂದುವರಿಯುತ್ತಿರುವಂತೆ ಮಳೆ ಸಂಬಂಧಿ ಅವಘಡಗಳು ಹೆಚ್ಚಾಗುತ್ತಿದೆ.
ಮನೆಯ ಮೇಲೆ ಭಾರೀ ಗಾತ್ರದ ಮರ ಬಿದ್ದು ತಾಯಿ ಮಗಳು ಸಾವು
ಮನೆಯ ಮೇಲೆ ಭಾರೀ ಗಾತ್ರದ ಮರ ಬಿದ್ದು ತಾಯಿ ಮಗಳು ಸಾವು
Updated on

ಮೂಡಿಗೆರೆ(ಚಿಕ್ಕಮಗಳೂರು): ರಾಜ್ಯದಲ್ಲಿ ವರುಣಾರ್ಭಟ ಮುಂದುವರಿಯುತ್ತಿರುವಂತೆ ಮಳೆ ಸಂಬಂಧಿ ಅವಘಡಗಳು ಹೆಚ್ಚಾಗುತ್ತಿದೆ.

ಚಿಕ್ಕಮಗಳೂರಿನ ಮೂಡಿಗೆರೆ ತಾಲ್ಲೂಕಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಗೆ ಮನೆಯ ಮೇಲೆ ಮರ ಬಿದ್ದು ತಾಯಿ ಮತ್ತು ಮಗಳು ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕೆ.ತಲಗೂರು ಗ್ರಾಮದಲ್ಲಿ ಕಳೆದ ರಾತ್ರಿ ಈ ದುರ್ಘಟನೆ ಸಂಭವಿಸಿದ್ದು ಮೃತರನ್ನು 55 ವರ್ಷದ ಚಂದ್ರಮ್ಮ ಹಾಗೂ ಅವರ ಮಗಳು 37 ವರ್ಷದ ಸರಿತಾ ಎಂದು ಗುರುತಿಸಲಾಗಿದೆ.

ಭಾರೀ ಮಳೆಯಿಂದಾಗಿ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಹಿಳೆಯರ ಸಾವಿನಿಂದ ಭೀತಿಗೊಂಡಿರುವ ತಾಲ್ಲೂಕು ಆಡಳಿತ ಮೂಡಿಗೆರೆ ತಾಲ್ಲೂಕಿನ ಎಲ್ಲಾ ಶಾಲೆ-ಕಾಲೇಜುಗಳಿಗೆ ಇಂದು ರಜೆ ಘೋಷಿಸಿದೆ, ರಜೆ ಘೋಷಿಸಿ ತಹಶಿಲ್ದಾರ್ ನಾಗರಾಜ್ ಆದೇಶ ಹೊರಡಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com