ಮೆಟ್ರೋ ರೈಲು
ಮೆಟ್ರೋ ರೈಲು

ಲಾಲ್ ಬಾಗ್ ಫ್ಲವರ್ ಶೋ ನೋಡುಗರಿಗೆ ಮೆಟ್ರೋದಿಂದ 30 ರೂ. ಟಿಕೆಟ್ ಬಿಡುಗಡೆ

ಸ್ವಾತಂತ್ರ್ಯೋತ್ಸವ ವೇಳೆ ಬೆಂಗಳೂರಿನ ಸೌಂದರ್ಯವನ್ನು ಹೆಚ್ಚಿಸುವ ಲಾಲ್‌ ಬಾಗ್‌ನ ಫಲಪುಪ್ಪ ಪ್ರದರ್ಶನಕ್ಕೆ ಭೇಟಿ ನೀಡುವವರಿಗೆ ನಮ್ಮ ಮೆಟ್ರೋ ಸಿಹಿ ಸುದ್ದಿ ನೀಡಿದ್ದು, ಲಾಲ್ ಬಾಗ್ ನಿಂದ ನಗರದ ಯಾವುದೇ...
Published on

ಬೆಂಗಳೂರು: ಸ್ವಾತಂತ್ರ್ಯೋತ್ಸವ ವೇಳೆ ಬೆಂಗಳೂರಿನ ಸೌಂದರ್ಯವನ್ನು ಹೆಚ್ಚಿಸುವ ಲಾಲ್‌ ಬಾಗ್‌ನ ಫಲಪುಪ್ಪ ಪ್ರದರ್ಶನಕ್ಕೆ ಭೇಟಿ ನೀಡುವವರಿಗೆ ನಮ್ಮ ಮೆಟ್ರೋ ಸಿಹಿ ಸುದ್ದಿ ನೀಡಿದ್ದು, ಲಾಲ್ ಬಾಗ್ ನಿಂದ ನಗರದ ಯಾವುದೇ ಮೆಟ್ರೋ ಸ್ಟೇಷನ್ ಗೆ ಪ್ರಯಾಣಿಸಲು 30 ರೂಪಾಯಿಗಳ ವಿಶೇಷ ಟಿಕೆಟ್ ಬಿಡುಗಡೆ ಮಾಡಿದೆ.

ಬೆಂಗಳೂರಿನ ಲಾಲ್ ಬಾಗ್ ನಲ್ಲಿ ಏರ್ಪಡಿಸಲಾಗಿರುವ ಫಲಪುಪ್ಪ ಪ್ರದರ್ಶನಕ್ಕೆ ಬರುವ ಸಾರ್ವಜನಿಕರ ಅನುಕೂಲಕ್ಕಾಗಿ ಆಗಸ್ಟ್ 13 ರಿಂದ ಆಗಸ್ಟ್ 15 ರ ವರೆಗೆ ನಮ್ಮ ಮೆಟ್ರೋದಲ್ಲಿ ರಿಟರ್ನ್ ಜರ್ನಿಗಾಗಿ 30 ರೂಪಾಯಿಗೆ ಪೇಪರ್ ಟಿಕೆಟ್ ಗಳನ್ನು ನೀಡಲಾಗುತ್ತಿದೆ ಎಂದು ಬಿಎಂಆರ್ ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.

ಶನಿವಾರದಿಂದ ಸೋಮವಾರದವರೆಗೆ ಮೂರು ದಿನಗಳ ಕಾಲ ಬೆಳಗ್ಗೆ 10 ರಿಂದ ರಾತ್ರಿ 8 ಗಂಟೆಯವರೆಗೆ ಲಾಲ್ ಬಾಗ್ ಮೆಟ್ರೋ ನಿಲ್ದಾಣದಿಂದ ಇತರೆ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ಟಿಕೆಟ್ ದರವನ್ನು 30 ರೂಪಾಯಿ ನಿಗದಿಪಡಿಸಲಾಗಿದೆ. ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಈ ಟಿಕೆಟ್ ಖರೀದಿಸಬಹುದು ಎಂದು ಬಿಎಂಆರ್ ಸಿಎಲ್ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com