ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯಕ್ಕೆ ನೂತನ ಉಪ ಕುಲಪತಿ ನೇಮಕ: ಶೋಧನಾ ಸಮಿತಿ ರಚನೆ

ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯಕ್ಕೆ ನೂತನ ಉಪ ಕುಲಪತಿ ಆಯ್ಕೆಗೆ ನಾಲ್ವರು ಸದಸ್ಯರ ಶೋಧನಾ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯು ಮೂವರು ಸಂಭಾವ್ಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದ್ದು, ಅಂತಿಮ ನಿರ್ಧಾರ ಕೈಗೊಳ್ಳಲು ಅಭ್ಯರ್ಥಿಗಳ ಪಟ್ಟಿಯನ್ನು ರಾಜ್ಯಪಾರ ತಾವರ್ ಚಂದ್ ಗೆಹ್ಲೊಟ್ ಅವರಿಗೆ ಸಲ್ಲಿಸಲಿದೆ.
ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯ
ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯ
Updated on

ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯ (VTU) ನೂತನ ಉಪ ಕುಲಪತಿ ಆಯ್ಕೆಗೆ ನಾಲ್ವರು ಸದಸ್ಯರ ಶೋಧನಾ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯು ಮೂವರು ಸಂಭಾವ್ಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದ್ದು, ಅಂತಿಮ ನಿರ್ಧಾರ ಕೈಗೊಳ್ಳಲು ಅಭ್ಯರ್ಥಿಗಳ ಪಟ್ಟಿಯನ್ನು ರಾಜ್ಯಪಾರ ತಾವರ್ ಚಂದ್ ಗೆಹ್ಲೊಟ್ ಅವರಿಗೆ ಸಲ್ಲಿಸಲಿದೆ.

ಈಗಿರುವ ಉಪ ಕುಲಪತಿಗಳ ಸೇವಾವಧಿ ಸೆಪ್ಟೆಂಬರ್ 30ಕ್ಕೆ ಕೊನೆಗೊಳ್ಳಲಿದೆ. ನಂತರ ನೂತನ ಉಪ ಕುಲಪತಿಗಳ ಹೆಸರನ್ನು ರಾಜ್ಯಪಾಲರು ಘೋಷಿಸಲಿದ್ದಾರೆ. ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯದ ಉಪ ಕುಲಪತಿಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಿ ರಾಜ್ಯಪಾಲ ಸಚಿವಾಲಯ ಮೊನ್ನೆ ಆಗಸ್ಟ್ 8ರಂದು ಅಧಿಸೂಚನೆ ಹೊರಡಿಸಿತ್ತು.

ಅಧಿಸೂಚನೆಯ ಪ್ರಕಾರ, ಆಕಾಂಕ್ಷಿಗಳು ಯುಜಿಸಿ ಕಾಲಕಾಲಕ್ಕೆ ನಿಗದಿಪಡಿಸಿದ ವಿಧಾನದಲ್ಲಿ ಎಂಜಿನಿಯರಿಂಗ್ ಮತ್ತು ಪಿಎಚ್‌ಡಿಯಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು. ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಕನಿಷ್ಠ 10 ವರ್ಷಗಳ ಅನುಭವವನ್ನು ಹೊಂದಿರಬೇಕು. ಪ್ರತಿಷ್ಠಿತ ಸಂಶೋಧನೆ ಅಥವಾ ಶೈಕ್ಷಣಿಕ ಆಡಳಿತ ಸಂಸ್ಥೆಯಲ್ಲಿ ಹತ್ತು ವರ್ಷಗಳ ಅನುಭವವನ್ನು ಹೊಂದಿರಬೇಕು. ಅರ್ಜಿ ಸಲ್ಲಿಕೆಗೆ ಆಗಸ್ಟ್ 29 ಕೊನೆಯ ದಿನವಾಗಿರುತ್ತದೆ.

ನಾಲ್ಕು ಸದಸ್ಯರ ಶೋಧನಾ ಸಮಿತಿಯು ಇಂಜಿನಿಯರಿಂಗ್ ಕ್ಷೇತ್ರದಲ್ಲಿ ಅಗಾಧ ಅನುಭವ ಮತ್ತು ಕೊಡುಗೆಗಳನ್ನು ಹೊಂದಿರುವ ಮೂರು ಪ್ರಸಿದ್ಧ ಶಿಕ್ಷಣತಜ್ಞರನ್ನು ಅಖೈರು ಮಾಡುವ ನಿರೀಕ್ಷೆಯಿದೆ. ವಿವಾದಗಳು ಮತ್ತು ಪ್ರಕರಣಗಳಲ್ಲಿ ತೊಡಗಿರುವ ಆರೋಪಗಳನ್ನು ಎದುರಿಸುತ್ತಿರುವ ಅರ್ಜಿದಾರರನ್ನು ಪರಿಗಣಿಸುವ ಸಾಧ್ಯತೆಯಿಲ್ಲ. ಯಾವುದೇ ಅರ್ಜಿಯನ್ನು ಸ್ವೀಕರಿಸುವ ಅಥವಾ ತಿರಸ್ಕರಿಸುವ ಎಲ್ಲಾ ಹಕ್ಕುಗಳನ್ನು ಶೋಧನಾ ಸಮಿತಿಯು ಹೊಂದಿದೆ ಎಂದು ಮೂಲಗಳು ತಿಳಿಸಿವೆ.

ನಾಲ್ವರು ಸದಸ್ಯರ ವಿಸಿ ಶೋಧನಾ ಸಮಿತಿಗೆ ಮಧ್ಯಪ್ರದೇಶ ತಾಂತ್ರಿಕ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ.ಸುನೀಲ್ ಕುಮಾರ್ ಅಧ್ಯಕ್ಷರಾಗುವ ಸಾಧ್ಯತೆ ಇದೆ. ವಿಟಿಯು ಮಾಜಿ ರಿಜಿಸ್ಟ್ರಾರ್ ಎಂಎಸ್ ಶಿವಕುಮಾರ್, ಜಿತೇಂದ್ರ ನಾಯಕ್, ವಿಟಿಯು ಕಾರ್ಯಕಾರಿ ಮಂಡಳಿ ಸದಸ್ಯ ಕೃಪಾಶಂಕರ್. VTU ಅಕಾಡೆಮಿಕ್ ಸೆನೆಟ್ ಸದಸ್ಯ. ಸಮಿತಿಯು ಮೂರು ಅಭ್ಯರ್ಥಿಗಳನ್ನು ಪರಿಶೀಲಿಸಲು ಮತ್ತು ಅಂತಿಮಗೊಳಿಸಲು ಸೆಪ್ಟೆಂಬರ್‌ನಲ್ಲಿ ಸಭೆಗಳನ್ನು ನಡೆಸುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com