ರಾಜ್ಯ

ರಾಯಚೂರಿನಲ್ಲಿ ಕ್ಯಾಂಟರ್ ಗೂಡ್ಸ್ ವಾಹನ- ಬೈಕ್ ಅಪಘಾತ: ಮೂವರು ಸ್ಥಳದಲ್ಲೇ ಸಾವು

ರಾಯಚೂರಿನಲ್ಲಿ ಕ್ಯಾಂಟರ್ ಗೂಡ್ಸ್ ವಾಹನ- ಬೈಕ್ ಅಪಘಾತ: ಮೂವರು ಸ್ಥಳದಲ್ಲೇ ಸಾವು
ಅಪಘಾತ
Published On :

ರಾಯಚೂರು: ಕ್ಯಾಂಟರ್ ಗೂಡ್ಸ್ ವಾಹನ ಮತ್ತು ದ್ವಿಚಕ್ರ ವಾಹನ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ದ್ವಿಚಕ್ರವಾಹನದಲ್ಲಿ ಇದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕ್ರಾಸ್ ಬಳಿ ಮಂಗಳವಾರ ನಡೆದಿದೆ.

ರಸ್ತೆ ಅಪಘಾತದಲ್ಲಿ ಸಾವಿಗೀಡಾದವರನ್ನು ಬಸವರಾಜ್ ಮಾಸಳಿ (45) ಭೀಮವ್ವ ಮಾಸಳಿ (50) ಹಾಗೂ ನರೇಶ್ ಎಂದು ಗುರುತಿಸಲಾಗಿದೆ ಮೃತರು ಮೃತರು ಸಿರವಾರ ತಾಲೂಕಿನ ಕಲ್ಲೂರು ಗ್ರಾಮದ ನಿವಾಸಿಗಳಾಗಿದ್ದಾರೆ.

ಮೃತ ಬಸವರಾಜ್, ಆತನ ಮಗ ನರೇಶ್ ಹಾಗೂ ಅತ್ತಿಗೆ ಭೀಮವ್ವ ಅವರು ಬೈಕಿನಲ್ಲಿ ತೆರಳುತ್ತಿದ್ದರು. ಬೈಕ್ ನಲ್ಲಿ ಬಸವರಾಜ್ ಮಗ ಹಾಗೂ ಅತ್ತಿಗೆ ಮೂವರು ಕಲ್ಲೂರಿನಿಂದ ಕುರ್ಡಿ ಗ್ರಾಮಕ್ಕೆ ಹೊರಟಿದ್ದ ಮೂವರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಕುರ್ಡಿ ಸಮೀಪಹಳ್ಳಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ಯಾಂಟರ್ ನ ಚಾಲಕ ಘಟನೆ ನಡೆದ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಸ್ಥಳಕ್ಕೆ ಸಿರವಾರ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.