ಜಗ್ಗೇಶ್ ನಿರ್ಮಾಣದ 'ವಂದೇ ಮಾತರಂ' ಆಲ್ಬಮ್ ಶ್ಲಾಘಿಸಿದ ಪ್ರಧಾನಿ ಮೋದಿ

ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ನಟ, ನಿರ್ದೇಶಕ ಸಂತೋಷ್ ಆನಂದರಾಮ್ ನಿರ್ದೇಶನದಲ್ಲಿ ರಾಜ್ಯಸಭಾ ಸದಸ್ಯ ಜಗ್ಗೇಶ್ ನಿರ್ಮಾಣ ಮಾಡಿದ 'ವಂದೇ ಮಾತರಂ' ಆಲ್ಬಮ್ ನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. 
ವಿಶೇಷ ಆಲ್ಬಮ್
ವಿಶೇಷ ಆಲ್ಬಮ್
Updated on

ಬೆಂಗಳೂರು: ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ನಟ, ನಿರ್ದೇಶಕ ಸಂತೋಷ್ ಆನಂದರಾಮ್ ನಿರ್ದೇಶನದಲ್ಲಿ ರಾಜ್ಯಸಭಾ ಸದಸ್ಯ ಜಗ್ಗೇಶ್ ನಿರ್ಮಾಣ ಮಾಡಿದ 'ವಂದೇ ಮಾತರಂ' ಆಲ್ಬಮ್ ನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. 

ಈ ವಿಡಿಯೋವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಈ ಟ್ವೀಟ್ ಗೆ ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆಗೈದ ರಾಜ್ಯದ ಅಪ್ರತಿಮ ಸಾಧಕರ ಅತ್ಯುತ್ತಮ ಪ್ರಯತ್ನ ಎಂದು ಕನ್ನಡದಲ್ಲಿಯೇ ಶೀರ್ಷಿಕೆ ನೀಡಿ ಪ್ರಧಾನಿ ಮೋದಿ ರಿಟ್ವೀಟ್ ಮಾಡಿದ್ದಾರೆ. 

ವಿಜಯ್ ಪ್ರಕಾಶ್ ಹಾಡಿರುವ ಈ ಹಾಡಿನಲ್ಲಿ ಸಾಲು ಮರದ ತಿಮ್ಮಕ್ಕ, ಜೋಗತಿ ಮಂಜಮ್ಮ, ಸಾಹಿತಿ ಎಸ್. ಎಲ್. ಬೈರಪ್ಪ, ಕ್ರಿಕೆಟಿಗ ವೆಂಕಟೇಶ್ ಪ್ರಸಾದ್,  ನಟರಾದ ಶಿವರಾಜ್ ಕುಮಾರ್, ರವಿಚಂದ್ರನ್, ಸುದೀಪ್, ಜಗ್ಗೇಶ್, ರಮೇಶ್ ಅರವಿಂದ್, ಅನಂತ್ ನಾಗ್ ಮತ್ತಿತರಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com