ಸಿಎಂ ಬೊಮ್ಮಾಯಿಯವರನ್ನು ಭೇಟಿ ಮಾಡಿದ ರಾಘವೇಂದ್ರ ರಾಜ್ ಕುಮಾರ್, ಅಶ್ವಿನಿ ಪುನೀತ್ ರಾಜ್ ಕುಮಾರ್
ರಾಜ್ಯ
ಕಂಠೀರವ ಸ್ಟುಡಿಯೊದಲ್ಲಿ ಡಾ ರಾಜ್ ಕುಮಾರ್, ಪಾರ್ವತಮ್ಮ, ಪುನೀತ್ ಸಮಾಧಿ ಸ್ಥಳ ಅಭಿವೃದ್ಧಿ: ಕುಟುಂಬ ಸದಸ್ಯರಿಂದ ಸಿಎಂ ಭೇಟಿ
ಕಂಠೀರವ ಸ್ಟೂಡಿಯೋದಲ್ಲಿರುವ ವರನಟ ಡಾ. ರಾಜ್‌ಕುಮಾರ್, ಪಾರ್ವತಮ್ಮ, ಪುನೀತ್ ರಾಜ್ ಕುಮಾರ್ ಸಮಾಧಿ ಸ್ಥಳವನ್ನು ಅಭಿವೃದ್ಧಿಪಡಿಸುವ ವಿಚಾರವಾಗಿ ಡಾ. ರಾಜ್ ಕುಟುಂಬದ ಸದಸ್ಯರು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಬುಧವಾರ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ಬೆಂಗಳೂರು : ಕಂಠೀರವ ಸ್ಟೂಡಿಯೋದಲ್ಲಿರುವ ವರನಟ ಡಾ. ರಾಜ್‌ಕುಮಾರ್, ಪಾರ್ವತಮ್ಮ, ಪುನೀತ್ ರಾಜ್ ಕುಮಾರ್ ಸಮಾಧಿ ಸ್ಥಳವನ್ನು ಅಭಿವೃದ್ಧಿಪಡಿಸುವ ವಿಚಾರವಾಗಿ ಡಾ. ರಾಜ್ ಕುಟುಂಬದ ಸದಸ್ಯರು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಬುಧವಾರ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ನಟ ರಾಘವೇಂದ್ರ ರಾಜಕುಮಾರ್, ಅಶ್ವಿನಿ ಪುನಿತ್ ರಾಜಕುಮಾರ್, ಯುವ ರಾಜಕುಮಾರ್ ಈ ಸಂದರ್ಭದಲ್ಲಿ ಸಿಎಂ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಕಂಠೀರವ ಸ್ಟುಡಿಯೊದಲ್ಲಿ ಒಂದೇ ಸ್ಥಳದಲ್ಲಿ ಮೂವರ ಸಮಾಧಿ ಅಭಿವೃದ್ಧಿ ವಿಚಾರವಾಗಿ ಚರ್ಚೆ ನಡೆಸಿದ್ಧಾರೆ. ರಾಜ್ ಕುಟುಂಬದವರು ಸಿದ್ದಪಡಿಸಿದ ಪಿಪಿಟಿಯನ್ನು ಸಿಎಂ ಬೊಮ್ಮಾಯಿ ವೀಕ್ಷಿಸಿದರು.
ಯೋಜನೆಗೆ ಆಗಬಹುದಾದ ಖರ್ಚುವೆಚ್ಚಗಳ ಬಗ್ಗೆ ಲೆಕ್ಕಾಚಾರಗಳನ್ನು ಲೋಕೋಪಯೋಗಿ ಇಲಾಖೆಯಿಂದ ತರಿಸಲು ಸಿಎಂ ಸೂಚನೆ ನೀಡಿದರು. ಇಲಾಖೆಯಿಂದ ಯೋಜನೆಯ ರೂಪರೇಷೆ ತಯಾರದ ಬಳಿಕ ಮತ್ತೊಂದು ಸುತ್ತಿನ ಸಭೆ ನಡೆಸೋಣ ಎಂದು ಇದೇ ಸಂದರ್ಭದಲ್ಲಿ ರಾಜ್ ಕುಮಾರ್ ಕುಟುಂಬ ಸದಸ್ಯರಿಗೆ ಸಿಎಂ ಹೇಳಿದ್ದಾರೆ.


