ಕೋಲಾರದ ಮುಳಬಾಗಿಲು ಬಳಿ ಖಾಸಗಿ ಬಸ್ ಅಪಘಾತ: ದಂಪತಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ ಸಂಭವಿಸಿದ ತೀವ್ರ ಅಪಘಾತದಲ್ಲಿ ಆಂಧ್ರ ಪ್ರದೇಶ  ಮೂಲದ ದಂಪತಿ ಮೃತಪಟ್ಟಿದ್ದಾರೆ.
ಅಪಘಾತದ ನಂತರದ ದೃಶ್ಯ
ಅಪಘಾತದ ನಂತರದ ದೃಶ್ಯ
Updated on

ಕೋಲಾರ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ ಸಂಭವಿಸಿದ ತೀವ್ರ ಅಪಘಾತದಲ್ಲಿ ಆಂಧ್ರ ಪ್ರದೇಶ  ಮೂಲದ ದಂಪತಿ ಮೃತಪಟ್ಟಿದ್ದಾರೆ. ಬಸ್ಸು ಗುಂಟೂರಿನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿತ್ತು. 

ಇಂದು ಬುಧವಾರ ಮುಂಜಾನೆ 5.30ರ ಸುಮಾರಿಗೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ವಿರೂಪಾಕ್ಷಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ದುರ್ಘಟನೆ ನಡೆದಿದೆ. ಬಸ್ ನಲ್ಲಿದ್ದ 15ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.

ವೇಮುರಿ ಹೆಸರಿನ ಖಾಸಗಿ ಬಸ್ ವಿಜಯವಾಡದಿಂದ ಬೆಂಗಳೂರಿಗೆ ಬರುತ್ತಿತ್ತು. ನಸುಕಿನ ಜಾವ ನಿದ್ದೆ ಮಂಪರಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಬಸ್ಸು ಪಲ್ಟಿಯಾಗಿರಬಹುದು ಎಂದು ಹೇಳಲಾಗುತ್ತಿದೆ. ಗಾಯಾಳುಗಳನ್ನು ಮುಳಬಾಗಿಲು ಸರ್ಕಾರಿ ಆಸ್ಪತ್ರೆ ಹಾಗೂ ಕೋಲಾರ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. 

ಮುಳಬಾಗಿಲು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಗಾಯಾಳುಗಳನ್ನು ಆಂಬ್ಯುಲೆನ್ಸ್ ನಲ್ಲಿ ಕಳುಹಿಸುವ ವ್ಯವಸ್ಥೆ ಮಾಡಿದ್ದು, ತನಿಖೆ ಕೈಗೊಂಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com