ಸ್ವಾತಂತ್ರ್ಯ ದಿನಾಚರಣೆ: ಮಾಣಿಕ್ ಷಾ ಪರೇಡ್ ಮೈದಾನದಿಂದ ಟಿಪ್ಪು, ರಾಣಿ ಚೆನ್ಮಮ್ಮ ಹೆಸರು ನಾಪತ್ತೆ; ಕಾಂಗ್ರೆಸ್ ತೀವ್ರ ಕಿಡಿ!

ಬೆಂಗಳೂರಿನ ಮಾಣೆಕ್ಷಾ ಪರೇಡ್ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆದ ಒಂದು ದಿನದ ನಂತರ, ಮೈದಾನದ ದ್ವಾರಗಳಿಂದ ಕಿತ್ತೂರು ರಾಣಿ ಚನ್ನಮ್ಮ ಮತ್ತು ಟಿಪ್ಪು ಸುಲ್ತಾನ್ ಹೆಸರನ್ನು ತೆಗೆದುಹಾಕಲಾಗಿದೆ.
ಮಾಣಿಕ್ ಷಾ ಪರೇಡ್ ಮೈದಾನ
ಮಾಣಿಕ್ ಷಾ ಪರೇಡ್ ಮೈದಾನ
Updated on

ಬೆಂಗಳೂರು: ಬೆಂಗಳೂರಿನ ಮಾಣೆಕ್ಷಾ ಪರೇಡ್ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆದ ಒಂದು ದಿನದ ನಂತರ, ಮೈದಾನದ ದ್ವಾರಗಳಿಂದ ಕಿತ್ತೂರು ರಾಣಿ ಚನ್ನಮ್ಮ ಮತ್ತು ಟಿಪ್ಪು ಸುಲ್ತಾನ್ ಹೆಸರನ್ನು ತೆಗೆದುಹಾಕಲಾಗಿದೆ.

ಹೌದು.. 76ನೇ ಸ್ವಾತಂತ್ರ್ಯ ದಿನಾಚರಣೆ ಬಳಿಕ ಮಾಣಿಕ್ ಷಾ ಪರೇಡ್ ಮೈದಾನದ ದ್ವಾರಗಳಲ್ಲಿದ್ದ ಕಿತ್ತೂರು ರಾಣಿ ಚನ್ನಮ್ಮ ಮತ್ತು ಟಿಪ್ಪು ಸುಲ್ತಾನ್ ಹೆಸರು ನಾಪತ್ತೆಯಾಗಿದೆ. ಈ ಬಗ್ಗೆ ಕಾಂಗ್ರೆಸ್ ಕಿಡಿಕಾರಿದ್ದು, ಕರ್ನಾಟಕದ ಇತಿಹಾಸದ ಪ್ರಮುಖ ಭಾಗವಾಗಿರುವ ವ್ಯಕ್ತಿಗಳ ಹೆಸರುಗಳನ್ನು ತೆಗೆಯುವ ಮೂಲಕ ಜಿಲ್ಲಾಡಳಿತ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಎರಡೂ ಪಕ್ಷಗಳು (ಬಿಬಿಎಂಪಿ) ಅವಮಾನ ಮಾಡಿದೆ ಎಂದು ಕಿಡಿಕಾರಿದೆ.

ಹಿಂದಿನ ವರ್ಷಗಳ ಆಚರಣೆಗಳು ಮತ್ತು ಈ ವರ್ಷದ ಫೋಟೋಗಳನ್ನು ಹಂಚಿಕೊಂಡ ಅನೇಕ ಕಾಂಗ್ರೆಸ್ ನಾಯಕರು ಇದು ಸರ್ಕಾರದ 'ದುಷ್ಕೃತ್ಯ' ಎಂದು ಆರೋಪಿಸಿದ್ದಾರೆ. ಈ ಕುರಿತು ಮಾಜಿ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿ ಪೂರ್ವಜರ ಪಾತ್ರವಿಲ್ಲ. ಇಂದಿನ ಬಿಜೆಪಿ ನಾಯಕರು ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಲು ಹವಣಿಸುತ್ತಿದ್ದಾರೆ. ಬ್ರಿಟಿಷರ ವಿರುದ್ಧ ಹೋರಾಡಿದ ರಾಣಿ ಚನ್ನಮ್ಮ ಮತ್ತು ಟಿಪ್ಪು ಸುಲ್ತಾನ್ ಅವರ ಹೆಸರನ್ನು ತೆಗೆದುಹಾಕಿರುವುದು ಖಂಡನೀಯ ಎಂದು ಹೇಳಿದ್ದಾರೆ.

ಬಿಬಿಎಂಪಿ ಕೌನ್ಸಿಲ್‌ನ ಮಾಜಿ ವಿರೋಧ ಪಕ್ಷದ ನಾಯಕ ಅಬ್ದುಲ್ ವಾಜಿದ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, 'ಇದಕ್ಕೆ ಜಿಲ್ಲಾಡಳಿತ ಮತ್ತು ಬಿಬಿಎಂಪಿ ಎರಡೂ ಕಾರಣ. ಸರ್ಕಾರದ ಒತ್ತಡಕ್ಕೆ ಮಣಿದು ಗೋಡೆಗೆ ಬಣ್ಣ ಬಳಿದು ಹೆಸರುಗಳನ್ನು ತೆಗೆದು ಹಾಕಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಹೇಳಿದ್ದಾರೆ.

ಇನ್ನು ಕಾರ್ಯಕ್ರಮಕ್ಕೆ ಮೈದಾನವನ್ನು ಸಿದ್ಧಪಡಿಸುವ ಜವಾಬ್ದಾರಿ ಬಿಬಿಎಂಪಿ ಮೇಲಿದೆ ಎಂದು ಪೂರ್ವ ವಲಯದ ಜಂಟಿ ಆಯುಕ್ತ ಆರ್.ಶಿಲ್ಪಾ ಹೇಳಿದರೆ, ಜಿಲ್ಲಾಡಳಿತದ ಅಧಿಕಾರಿಯೊಬ್ಬರು ಘಟನೆಯ ಬಗ್ಗೆ ತನಗೆ ತಿಳಿದಿಲ್ಲ ಮತ್ತು ಈ ಬಗ್ಗೆ ಪರಿಶೀಲಿಸುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com