ದೇವಾಲಯ, ಮಠ, ಟ್ರಸ್ಟ್ ಗಳಿಗೆ ಅನುದಾನ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ: ಧಾರ್ಮಿಕ ದತ್ತಿ ಇಲಾಖೆಯ ಆದೇಶದಲ್ಲಿ ಏನಿದೆ?

ಚುನಾವಣೆ ಹೊಸ್ತಿಲಿನಲ್ಲಿರುವ ಕರ್ನಾಟಕ ರಾಜ್ಯದಲ್ಲಿ ವಿವಿಧ ಸಮುದಾಯಗಳಿಗೆ ಸೇರಿದ ಮಠಗಳು,ದೇವಾಲಯ, ಟ್ರಸ್ಟ್ ಗಳಿಗೆ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಈ ಮೂಲಕ ಬಿಜೆಪಿ ಸರ್ಕಾರ ಮಠ-ಮಾನ್ಯಗಳಿಗೆ ಪ್ರಾಮುಖ್ಯತೆ ಕೊಡುತ್ತಿದೆ ಎಂದು ಮತ್ತೊಮ್ಮೆ ಸಾಬೀತುಪಡಿಸಿದೆ.
ಧಾರ್ಮಿಕ ದತ್ತಿ ಇಲಾಖೆ
ಧಾರ್ಮಿಕ ದತ್ತಿ ಇಲಾಖೆ

ಬೆಂಗಳೂರು: ಚುನಾವಣೆ ಹೊಸ್ತಿಲಿನಲ್ಲಿರುವ ಕರ್ನಾಟಕ ರಾಜ್ಯದಲ್ಲಿ ವಿವಿಧ ಸಮುದಾಯಗಳಿಗೆ ಸೇರಿದ ಮಠಗಳು,ದೇವಾಲಯಗಳು, ಟ್ರಸ್ಟ್ ಗಳಿಗೆ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಈ ಮೂಲಕ ಬಿಜೆಪಿ ಸರ್ಕಾರ ಮಠ-ಮಾನ್ಯಗಳಿಗೆ ಪ್ರಾಮುಖ್ಯತೆ ಕೊಡುತ್ತಿದೆ ಎಂದು ಮತ್ತೊಮ್ಮೆ ಸಾಬೀತುಪಡಿಸಿದೆ.

ಮುಜರಾಯಿ ಇಲಾಖೆ ಒಟ್ಟು 142.59 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಿದ್ದು, ಅವುಗಳಲ್ಲಿ 178 ಮಠಗಳು, 59 ದೇವಸ್ಥಾನಗಳು, 26 ಸಂಘ-ಸಂಸ್ಥೆಗಳು ಸೇರಿವೆ. ಸಮಾಜಮುಖಿ ಚಟುವಟಿಕೆಗಳು, ಅಭಿವೃದ್ಧಿ, ಜೀರ್ಣೋದ್ಧಾರ ಕಾರ್ಯಗಳಿಗೆ ಈ ಹಣ ಬಳಸಿಕೊಳ್ಳಲು ಅವಕಾಶವಿದೆ. 178 ಮಠಗಳಿಗೆ 108.24 ಕೋಟಿ ರೂ, 59 ದೇವಸ್ಥಾನಗಳಿಗೆ 21.35 ಕೋಟಿ ರೂಪಾಯಿ, 26 ಸಂಘ-ಸಂಸ್ಥೆಗಳು ಹಾಗೂ ಟ್ರಸ್ಟ್​ಗಳಿಗೆ 13 ಕೋಟಿ ರೂಪಾಯಿ ಅನುದಾನ ಘೋಷಿಸಲಾಗಿದೆ. ಆರ್ಥಿಕ ಇಲಾಖೆಯ ಸಹಮತದ ಮೇರೆಗೆ  148.59 ಕೋಟಿ ರೂಪಾಯಿ ಅನುದಾನಕ್ಕೆ ಸರ್ಕಾರವು ಆಡಳಿತಾತ್ಮಕ ಮಂಜೂರಾತಿ ನೀಡಿದೆ.

ಷರತ್ತು ವಿಧಿಸಿರುವ ಸರ್ಕಾರ: ಸರ್ಕಾರ ಬಿಡುಗಡೆ ಮಾಡಿರುವ ಅನುದಾನಗಳನ್ನು ಬಳಸಿಕೊಳ್ಳಲು ಇದೇ ಸಂದರ್ಭದಲ್ಲಿ ಷರತ್ತು ವಿಧಿಸಲಾಗಿದೆ. ಮಂಜುರಾದ ಅನುದಾನವನ್ನು ‘ಖಜಾನೆ-2’ ಮೂಲಕ ಜಿಲ್ಲಾಧಿಕಾರಿಗಳ ಡಿಡಿಒಒ ಸಂಕೇತಕ್ಕೆ ಅಪ್​ಲೋಡ್ ಮಾಡಬೇಕು. ಸಂಬಂಧಿಸಿದ ಜಿಲ್ಲಾಧಿಕಾರಿಗಳು ತಹಶೀಲ್ದಾರ್​ರ ಮೂಲಕ ನಿಯಮಾನುಸಾರ ಪ್ರಸ್ತಾವನೆ ಪಡೆದು, ಅನುದಾನ ಮಂಜೂರಾತಿಗೆ ಒಪ್ಪಿಗೆ ನೀಡಬೇಕು. ತಹಶೀಲ್ದಾರ್​ ಅವರೇ ಅನುದಾನದ ಮೊತ್ತವನ್ನು ಡ್ರಾ ಮಾಡಿ ಸಂಸ್ಥೆಗಳಿಗೆ ಕೊಡಬೇಕು ಎಂಬ ನಿಯಮವನ್ನು ಹೇರಲಾಗಿದೆ. 

ಅನುದಾನ ಪಡೆದುಕೊಂಡ ಸಂಸ್ಥೆಯು ನಿಯಮಾನುಸಾರ ‘ಮುಂಗಡ ರಸೀದಿ’ (Advance Receipt) ಪಡೆದು ಸಾದಿಲ್ವಾರು ಬಿಲ್​ಗೆ ಲಗತ್ತಿಸಿ ಸಂಸ್ಥೆಯ ಹೆಸರಿಗೆ ಖಜಾನೆಯ ಚೆಕ್ ನೀಡಬೇಕು. ಉದ್ದೇಶಿತ ಕಾಮಗಾರಿಗಳ ಅಂದಾಜುಪಟ್ಟಿಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರದಿಂದ ತಾಂತ್ರಿಕ ಮತ್ತು ಆಡಳಿತಾತ್ಮಕ ಅನುಮೋದನೆ ಪಡೆದುಕೊಳ್ಳಬೇಕು.

ಅನುದಾನ ಬಳಕೆ ಬಗ್ಗೆ ಪ್ರತಿ ಮೂರು ತಿಂಗಳಿಗೆ ಒಮ್ಮೆ ಮುಜರಾಯಿ ಇಲಾಖೆಯು ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಈ ಅನುದಾನ ಬಳಕೆಯಲ್ಲಿ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ ಹಾಗೂ ಇತರ ನಿಯಮಗಳು ಅನ್ವಯವಾಗುತ್ತವೆ ಎಂದು ಧಾರ್ಮಿಕ ದತ್ತಿ ಇಲಾಖೆಯ ಆದೇಶದಲ್ಲಿ ವಿವರಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com