ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯಲ್ಲಿ ಅಪರೂಪದ ಶಸ್ತ್ರ ಚಿಕಿತ್ಸೆ; ಕಣ್ಣಿನ ಕೆಳಗೆ ಸಿಲುಕಿದ್ದ ಟೂತ್ ಬ್ರಶ್ ತುಂಡು ತೆಗೆದ ವೈದ್ಯರು!

ೆಅಪರೂಪದ ಶಸ್ತ್ರ ಚಿಕಿತ್ಸೆವೊಂದರಲ್ಲಿ ಹುಬ್ಬಳ್ಳಿಯ ಕಿಮ್ಸ್ ವೈದ್ಯರು 28 ವರ್ಷದ ಮಹಿಳೆಯೊಬ್ಬರ ಕಣ್ಣಿನ ಕೆಳಗೆ ಸಿಲುಕಿದ್ದ ಮುರಿದ ಟೂತ್ ಬ್ರಶ್ ವೊಂದನ್ನು ಹೊರ ತೆಗೆದಿದ್ದಾರೆ. ಮೂರು ದಿನಗಳ ಹಿಂದೆ ಮುರಿದ 7 ಇಂಚಿನ ಟೂತ್ ಬ್ರಶ್ ಕಣ್ಣಿನ ಕೆಳಗೆ ಸಿಲುಕಿತ್ತು. 
7 ಸೆಂಟಿ ಮೀಟರ್ ಉದ್ದದ ಮುರಿದ ಟೂಶ್ ಬ್ರಶ್ ಹೊರ ತೆಗೆದ ವೈದ್ಯರು
7 ಸೆಂಟಿ ಮೀಟರ್ ಉದ್ದದ ಮುರಿದ ಟೂಶ್ ಬ್ರಶ್ ಹೊರ ತೆಗೆದ ವೈದ್ಯರು
Updated on

ಹುಬ್ಬಳ್ಳಿ: ಅಪರೂಪದ ಶಸ್ತ್ರ ಚಿಕಿತ್ಸೆವೊಂದರಲ್ಲಿ ಹುಬ್ಬಳ್ಳಿಯ ಕಿಮ್ಸ್ ವೈದ್ಯರು 28 ವರ್ಷದ ಮಹಿಳೆಯೊಬ್ಬರ ಕಣ್ಣಿನ ಕೆಳಗೆ ಸಿಲುಕಿದ್ದ ಮುರಿದ ಟೂತ್ ಬ್ರಶ್ ವೊಂದನ್ನು ಹೊರ ತೆಗೆದಿದ್ದಾರೆ. ಮೂರು ದಿನಗಳ ಹಿಂದೆ ಮುರಿದ 7 ಇಂಚಿನ ಟೂತ್ ಬ್ರಶ್ ಕಣ್ಣಿನ ಕೆಳಗೆ ಸಿಲುಕಿತ್ತು. ವೈದ್ಯರು ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನಡೆಸುವ ಮೂಲಕ ಮುರಿದ ಪ್ಲಾಸ್ಟಿಕ್ ಟೂತ್ ಬ್ರಶ್ ನ್ನು ಹೊರ ತೆಗೆದಿದ್ದಾರೆ.

ಹಾವೇರಿ ಜಿಲ್ಲೆ ಹಾನಗಲ್ ಬಳಿಯ ಹಿರೂರು ಗ್ರಾಮದ ಗೃಹಿಣಿ ವಿನೋದಾ ತಳವರ್ (28) ಅವರ ನಾಲ್ಕು ವರ್ಷದ ಮಗಳು ಆಗಸ್ಟ್ 14 ರಂದು ಬೆಳಗ್ಗೆ ಹಲ್ಲು ಉಜ್ಜುವಾಗ ಇದ್ದಕ್ಕಿದ್ದಂತೆ ಟೂತ್ ಬ್ರಶ್ , ಆಕೆಯ ತಾಯಿಯ ಎಡಗಣ್ಣಿನ ಕೆಳಗೆ ಸಿಲುಕಿದೆ. ನಂತರ ಕುಟುಂಬ ಸದಸ್ಯರು ಅದನ್ನು ತೆಗೆಯಲು ಪ್ರಯತ್ನಿಸಿದಾಗ ಮುರಿದಿದೆ.

ಕೂಡಲೇ ಅವರು ಮಹಿಳೆಯನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿನ ವೈದ್ಯರು ಪ್ರಥಮ ಚಿಕಿತ್ಸೆ ನೀಡಿದ ಬಳಿಕ ರೋಗಿಯನ್ನು ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲು ಶಿಫಾರಸು ಮಾಡಿದ್ದಾರೆ. ಕಿಮ್ಸ್ ಆಸ್ಪತ್ರೆಯಲ್ಲಿ ಭಾನುವಾರ ಮಹಿಳೆಯನ್ನು ದಾಖಲಿಸಲಾಗಿತ್ತು. ವೈದ್ಯರು ಮುಖದ ಸಿಟಿ ಸ್ಕ್ಯಾನ್, ಸಿಟಿ ಆಂಜಿಯೋಗ್ರಾಮ್ ಮಾಡಿದಾಗ ಕಣ್ಣಿನ ಕೆಳಗೆ ಬ್ರಶ್ ಸಿಲುಕಿರುವುದು  ತಿಳಿದುಬಂದಿದೆ. 

ಸ್ಕ್ಯಾನ್ ವರದಿ ತನಿಖೆ ವೇಳೆ ಎಡಗಣ್ಣು ಸಂಪೂರ್ಣವಾಗಿ ಹಾನಿಯಾಗಿರುವುದು ಕಂಡುಬಂದಿತ್ತು. ನಂತರ ನೇತ್ರಶಾಸ್ತ್ರ ವಿಭಾಗದ ಸಹಯೋಗದೊಂದಿಗೆ ಕೂಡಲೇ ಶಸ್ತ್ರ ಚಿಕಿತ್ಸೆ ಮಾಡಲು ನಿರ್ಧರಿಸಿದ್ದಾಗಿ ಹಿರಿಯ ವೈದ್ಯರೊಬ್ಬರು ತಿಳಿಸಿದರು. ಸಂಪೂರ್ಣ ಅಧ್ಯಯನ ನಂತರ, ಬುಧವಾರ ಶಸ್ತ್ರಚಿಕಿತ್ಸೆ ನಡೆಸಲು ನಿರ್ಧರಿಸಲಾಯಿತು. ಡಾ. ಮಂಜುನಾಥ್ ವಿಜಯಪುರ, ಡಾ. ವಸಂತ್ ಕಟ್ಟಿಮನಿ, ಡಾ. ಅನುರಾಧ ನಾಗನಗೌಡರ್, ಡಾ. ಸ್ಫೂರ್ತಿ ಶೆಟ್ಟಿ ಮತ್ತು ಅರವಳಿಕೆ ಮತ್ತು ನೇತ್ರಶಾಸ್ತ್ರ ವಿಭಾಗದ ಸಿಬ್ಬಂದಿಯ ನೆರವಿನಿಂದ ಬುಧವಾರ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ. 

ಎರಡು ತಿಂಗಳ ಹಿಂದೆ ಇದೇ ರೀತಿಯಾಗಿ ಶಸ್ತ್ರ ಚಿಕಿತ್ಸೆ ನಡೆಸಿ ಹಳಿಯಾಳದ ವ್ಯಕ್ತಿಯೊಬ್ಬರ ಮ್ಯಾಕ್ಸಿಯೋಫೆಶಿಯಲ್ ಪ್ರದೇಶದಲ್ಲಿ ಸಿಲುಕಿದ್ದ 6 ಸೆಂಟಿ ಮೀಟರ್ ಚಾಕುವನ್ನು ಹೊರ ತೆಗೆಯಲಾಗಿತ್ತು. ಅದೇ ರೀತಿಯಲ್ಲಿ ಈ ಬಾರಿ ಅಪರೂಪದ ಶಸ್ತ್ರ ಚಿಕಿತ್ಸೆ ನಡೆಸಿ, 7 ಸೆಂಟಿ ಮೀಟರ್ ನಷ್ಟು ಉದ್ದದ ಮುರಿದು ಟೂತ್ ಬ್ರಶ್ ಚೂರೊಂದನ್ನು ಹೊರತೆಗೆಯಲಾಗಿದೆ. ಶಸ್ತ್ರ ಚಿಕಿತ್ಸೆ ನಂತರ ರೋಗಿ ಆರೋಗ್ಯವಾಗಿದ್ದು, ಮೂರ್ನಾಲ್ಕು ದಿನಗಳಲ್ಲಿ ಅವರನ್ನು ಮನೆಗೆ ಕಳುಹಿಸಲಾಗುವುದು ಎಂದು ಕಿಮ್ಸ್ ಆಸ್ಪತ್ರೆಯ ವೈದ್ಯ ಡಾ. ಮಂಜುನಾಥ್ ವಿಜಯಪುರ ತಿಳಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com