ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 935 ಸೇರಿ ರಾಜ್ಯದಲ್ಲಿ 1535 ಮಂದಿಗೆ ಪಾಸಿಟಿವ್; 3 ಸಾವು
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1573 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,38,398ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಮೂವರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40162ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 935 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1856779ಕ್ಕೆ ಏರಿಕೆಯಾಗಿದೆ. ಆದರೆ ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
ರಾಜ್ಯದಲ್ಲಿ ಇಂದು 1100 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 3988417ಕ್ಕೆ ಏರಿಕೆಯಾಗಿದೆ. ಇನ್ನು 9777 ಸಕ್ರಿಯ ಪ್ರಕರಣಗಳಿವೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ