ರಂಭಾಪುರಿ ಶ್ರೀಗಳ ಮುಂದೆ ಲಿಂಗಾಯಿತ ಧರ್ಮದ ಕುರಿತು ಚರ್ಚಿಸಿದ್ದೆ ಅಷ್ಟೆ, ಪಶ್ಚಾತಾಪಪಟ್ಟಿಲ್ಲ: ಸಿದ್ದರಾಮಯ್ಯ

ಬಾಳೆಹೊನ್ನೂರು ಪೀಠದ ರಂಭಾಪುರಿ ಶ್ರೀಗಳೊಂದಿಗೆ ಲಿಂಗಾಯಿತ ಧರ್ಮದ ಈ ಹಿಂದಿನ ಘಟನೆಗಳ ಕುರಿತು ಚರ್ಚಿಸಿದ್ದೆ ಹೊರತು ಪಶ್ಚಾತಾಪದ ಮಾತುಗಳನ್ನಾಡಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಹಾಸನ: ಬಾಳೆಹೊನ್ನೂರು ಪೀಠದ ರಂಭಾಪುರಿ ಶ್ರೀಗಳೊಂದಿಗೆ ಲಿಂಗಾಯಿತ ಧರ್ಮದ ಈ ಹಿಂದಿನ ಘಟನೆಗಳ ಕುರಿತು ಚರ್ಚಿಸಿದ್ದೆ ಹೊರತು ಪಶ್ಚಾತಾಪದ ಮಾತುಗಳನ್ನಾಡಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. 

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ವೀರಶೈವ ಮತ್ತು ಲಿಂಗಾಯತ ಧರ್ಮದ ಬಗ್ಗೆ ಎಂದಿಗೂ ಚರ್ಚಿಸುವುದಿಲ್ಲ ಎಂದು ಹೇಳಿದ್ದಾರೆ.

ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹಿಂದುತ್ವ ಎಂಬುದು ಬಿಜೆಪಿ ಮತ್ತು ಅದರ ನಾಯಕರ ಹಿಡನ್ ಅಜೆಂಡಾವಾಗಿದ್ದು, ಹಿಂದೂ ರಾಷ್ಟ್ರವನ್ನು ಮಾಡಲು ವ್ಯರ್ಥ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಜನರು ಪಕ್ಷ ಮತ್ತು ಜಾತಿಯನ್ನು ಮೀರಿ ಎಲ್ಲ ಧರ್ಮಗಳನ್ನು ಗೌರವಿಸುವ ಮೂಲಕ ಸಂವಿಧಾನದ ಮೌಲ್ಯಗಳನ್ನು ಗೌರವಿಸಬೇಕು. ಜಾತಿಯ ತಾರತಮ್ಯವನ್ನು ಕಾಂಗ್ರೆಸ್ ಬಲವಾಗಿ ವಿರೋಧಿಸುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು. 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದರೂ ಆದರೆ ಅಲ್ಪಸಂಖ್ಯಾತ ಸಂತ್ರಸ್ತರ ಕುಟುಂಬಗಳಿಗೆ ಸಾಂತ್ವನ ಹೇಳುವ ಮನಸ್ಸು ಮಾಡಿಲ್ಲ. ರಾಜ್ಯದಲ್ಲಿ ಮಳೆ ಪೀಡಿತ ಪ್ರದೇಶಗಳಲ್ಲಿ ಪ್ರವಾಸ ಮಾಡುವಾಗ ಬಿಜೆಪಿ ಕಾರ್ಯಕರ್ತರು ತಮ್ಮ ವಿರುದ್ಧ ನಡೆಸುತ್ತಿರುವ ಪ್ರತಿಭಟನೆ ರಾಜಕೀಯ ಪ್ರೇರಿತವಾಗಿದ್ದು, ರಾಜ್ಯದಲ್ಲಿನ ವಿರೋಧ ಪಕ್ಷದ ನಾಯಕನಿಗೆ ಭದ್ರತೆ ನೀಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಹೇಳಿದರು. ರಾಜ್ಯದಲ್ಲಿ ಮಳೆ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕ್ರಮಗಳನ್ನು ಕೈಗೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಆರೋಪಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com