

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 720 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,40,831ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಎರಡು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40,168ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 273 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,58,017ಕ್ಕೆ ಏರಿಕೆಯಾಗಿದೆ. ಆದರೆ ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
ರಾಜ್ಯದಲ್ಲಿ ಇಂದು 662 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,90,113ಕ್ಕೆ ಏರಿಕೆಯಾಗಿದೆ. ಇನ್ನು 10,508 ಸಕ್ರಿಯ ಪ್ರಕರಣಗಳಿವೆ.