ಹೊಸಕೋಟೆ ಬಳಿ ಕಾರು ಭೀಕರ ಅಪಘಾತ: ಅಕ್ಕ-ತಮ್ಮ ಸಾವು
ಹೊಸಕೋಟೆ: ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಅಕ್ಕ-ತಮ್ಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಅಟ್ಟೂರು ಗ್ರಾಮದಲ್ಲಿ ಸೋಮವಾರ ನಸುಕಿನ ಜಾವ ಸಂಭವಿಸಿದೆ.ಮೃತರನ್ನು ಬೆಂಗಳೂರಿನ ಶಾಜಿಯಾ ಬಾನು(26ವ) ಮತ್ತು ಇಬ್ರಾಹಿಂ ಸಾಬ್ (16ವ) ಎಂದು ಗುರುತಿಸಲಾಗಿದೆ.
ಅಪಘಾತ ಹೇಗಾಯಿತು?: ಹೊಸಕೋಟೆಯ ಅಟ್ಟೂರು ಬಳಿ ಡಾಬಾವೊಂದರ ಹತ್ತಿರ ಹೋಗುತ್ತಿದ್ದಾಗ ಲಾರಿ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದಾನೆ. ಆಗ ಹಿಂಬದಿಯಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆಯಿತು. ಅಪಘಾತದಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.
ಅಪಘಾತ ಸಂಭವಿಸಿ ಕಾರಿನಲ್ಲಿದ್ದವರು ಮೃತಪಟ್ಟಿದ್ದಾರೆ ಎಂದು ಗೊತ್ತಾಗುತ್ತಲೇ ಸ್ಥಳದಿಂದ ಲಾರಿ ಚಾಲಕ ಪರಾರಿಯಾಗಿದ್ದಾನೆ.
ಕಾರಿನಲ್ಲಿ ಒಂದೇ ಕುಟುಂಬದ 9 ಮಂದಿ ಪ್ರಯಾಣಿಸುತ್ತಿದ್ದರು. ಅವರು ಮುರುಗಮಲ್ಲ ದರ್ಗಾಕ್ಕೆ ಹೋಗಿ ಚಿಂತಾಮಣಿಯಿಂದ ಬೈಲನರಸಾಪುರಕ್ಕೆ ಬಂದು ಅಲ್ಲಿ ಚಹಾ ಕುಡಿದು ಕೋಲಾರ ಹೆದ್ದಾರಿ ಮೂಲಕ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದ್ದು ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಅಜ್ಜಗೊಂಡನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದೆ. ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ