ಸೆಪ್ಟೆಂಬರ್ 6 ರಂದು ಮೈಸೂರು ಮೇಯರ್, ಉಪ ಮೇಯರ್ ಚುನಾವಣೆ

ಮೈಸೂರು ಮಹಾನಗರ ಪಾಲಿಕೆ ಮೇಯರ್ ಮತ್ತು ಉಪ ಮೇಯರ್ ಸ್ಥಾನ ರಾಜ್ಯ ಸರ್ಕಾರ ಮೀಸಲಾತಿ ಪ್ರಕಟಿಸಿದ ಬೆನ್ನಲ್ಲೇ ಚುನಾವಣೆ ಘೋಷಣೆಯಾಗಿದ್ದು,...
ಮೈಸೂರು ಮಹಾನಗರ ಪಾಲಿಕೆ
ಮೈಸೂರು ಮಹಾನಗರ ಪಾಲಿಕೆ

ಮೈಸೂರು: ಮೈಸೂರು ಮಹಾನಗರ ಪಾಲಿಕೆ ಮೇಯರ್ ಮತ್ತು ಉಪ ಮೇಯರ್ ಸ್ಥಾನ ರಾಜ್ಯ ಸರ್ಕಾರ ಮೀಸಲಾತಿ ಪ್ರಕಟಿಸಿದ ಬೆನ್ನಲ್ಲೇ ಚುನಾವಣೆ ಘೋಷಣೆಯಾಗಿದ್ದು, ಸೆಪ್ಟೆಂಬರ್ 6 ರಂದು ಮೇಯರ್ ಮತ್ತು ಉಪ ಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ಸೆಪ್ಟಂಬರ್ ಸೆ.6ರಂದು ಮೈಸೂರು ಮಹಾನಗರಪಾಲಿಕೆಯ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣದಲ್ಲಿ ಚುನಾವಣೆ ನಡೆಯಲಿದೆ ಎಂದು ಪ್ರಾದೇಶಿಕ ಆಯುಕ್ತರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ನಾಡಹಬ್ಬ ಮೈಸೂರು ದಸರಾ ವೇಳೆಗೆ ಹೊಸ‌ ಮೇಯರ್ ಆಯ್ಕೆಯಾಗುವುದು ಖಚಿತವಾಗಿದೆ.

ಮೇಯರ್ ಚುನಾವಣೆ ಜೊತೆಗೆ ನಾಲ್ಕು ಸ್ಥಾಯಿ ಸಮಿತಿಗಳಿಗೂ ಅಂದೇ ಚುನಾವಣೆ ನಡೆಯಲಿದೆ.

ಕಳೆದ 6 ತಿಂಗಳಿಂದ ಬಾಕಿ ಉಳಿದಿದ್ದ ಮೇಯರ್, ಉಪಮೇಯರ್ ಚುನಾವಣೆ ರಾಜ್ಯ ಸರ್ಕಾರ ನಿನ್ನೆ ಮೀಸಲಾತಿ ಪ್ರಕಟಿಸಿದ್ದು  ಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ, ಉಪಮೇಯರ್ ಹಿಂದುಳಿದ‌ ವರ್ಗಗಳ‌ ಮಹಿಳೆಗೆ ಮೀಸಲಿರಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com