ಹೊರ್ತಿ- ರೇವಣ್ಣ ಸಿದ್ದೇಶ್ವರ ಏತ ನೀರಾವರಿ ಯೋಜನೆಗೆ ಸಚಿವ ಸಂಪುಟ ಅನುಮೋದನೆ: ಗೋವಿಂದ ಕಾರಜೋಳ

ವಿಜಯಪುರ ಹಾಗೂ ಇಂಡಿ ತಾಲ್ಲೂಕಿನ ರೈತರಿಗೆ ವರದಾನವಾಗಲಿರುವ ಹೊರ್ತಿ- ರೇವಣ್ಣ ಸಿದ್ದೇಶ್ವರ ಏತ ನೀರಾವರಿ ಯೋಜನೆಗೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.
ಗೋವಿಂದ ಕಾರಜೋಳ
ಗೋವಿಂದ ಕಾರಜೋಳ

ಬೆಂಗಳೂರು: ವಿಜಯಪುರ ಹಾಗೂ ಇಂಡಿ ತಾಲ್ಲೂಕಿನ ರೈತರಿಗೆ ವರದಾನವಾಗಲಿರುವ ಹೊರ್ತಿ- ರೇವಣ್ಣ ಸಿದ್ದೇಶ್ವರ ಏತ ನೀರಾವರಿ ಯೋಜನೆಗೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಈ ಯೋಜನೆಯಡಿ ಆಲಮಟ್ಟಿ ಜಲಾಶಯದ ಹಿನ್ನೀರಿನಲ್ಲಿ ಪ್ರತ್ಯೇಕವಾಗಿ 3, 245 ಟಿಎಂಸಿ ನೀರನ್ನು ಲಿಫ್ಟ್ ಮಾಡಿ ಪೈವ್ ಲೈನ್ ಅಳವಡಿಕೆಯೊಂದಿಗೆ  ಇಂಡಿ ಮತ್ತು ವಿಜಯಪುರ ತಾಲ್ಲೂಕಿನ  28 ಸಾವಿರ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲು ಯೋಜಿಸಲಾಗಿದೆ.

2,638 ಕೋಟಿ ರೂಪಾಯಿ ಅಂದಾಜು ವೆಚ್ಚದ ಈ ಯೋಜನೆಗೆ ರಾಜ್ಯ ಸಚಿವ ಸಂಪುಟ ಇಂದು ತನ್ನ ಅನುಮೋದನೆ ನೀಡಿದ್ದು, ಮೂರು ಹಂತಗಳಲ್ಲಿ ಯೋಜನೆ ಕೈಗೆತ್ತಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. 

ಮೊದಲ ಹಂತದಲ್ಲಿ 760 ಕೋಟಿ, ಎರಡನೇ ಹಂತದಲ್ಲಿ 939 ಕೋಟಿ ಹಾಗೂ ಮೂರನೇ ಹಂತದಲ್ಲಿ 939 ಕೋಟಿ ರೂ. ವೆಚ್ಚದಲ್ಲಿ ಯೋಜನೆ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com