ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ- ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆಯಿರುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆಯಿರುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ 4 ದಿನ ಯೆಲ್ಲೂ ಆಲರ್ಟ್ ಘೋಷಿಸಲಾಗಿದ್ದು, ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ, ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲೂ ಮಳೆಯಾಗುವ ಸಂಭವವಿದೆ.

ದಕ್ಷಿಣ ಒಳನಾಡಿನ ರಾಮನಗರ, ಹಾಸನ, ಚಿಕ್ಕಮಗಳೂರು, ಉತ್ತರ ಒಳನಾಡಿನ ರಾಯಚೂರು, ಕೊಪ್ಪಳ, ಬೆಳಗಾವಿ ಸೇರಿದಂತೆ ಕರಾವಳಿ ಭಾಗದಲ್ಲಿ 4 ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನಾಳೆ ಕೂಡಾ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು  ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com