ಪದವಿ ಪೂರ್ವ ಕಾಲೇಜು 'ಮದ್ಯಂತರ ರಜೆ' ವಿಸ್ತರಣೆ: ಅಕ್ಟೋಬರ್ 14ರಿಂದ ಕಾಲೇಜು ಆರಂಭ

ರಾಜ್ಯ ಸರ್ಕಾರ 2022-23ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಕಾಲೇಜುಗಳ (Pre-University College) ಮಧ್ಯಂತರ ರಜೆಯನ್ನು ವಿಸ್ತರಣೆ ಮಾಡಿ ಆದೇಶಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಬೆಂಗಳೂರು: ರಾಜ್ಯ ಸರ್ಕಾರ 2022-23ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಕಾಲೇಜುಗಳ (Pre-University College) ಮಧ್ಯಂತರ ರಜೆಯನ್ನು ವಿಸ್ತರಣೆ ಮಾಡಿ ಆದೇಶಿಸಿದೆ. 

ಈ ಕುರಿತಂತೆ ಶಿಕ್ಷಣ ಇಲಾಖೆ ಮಾಹಿತಿ ನೀಡಿದ್ದು, 2022-23ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಕಾಲೇಜುಗಳ ಮಧ್ಯಂತರ ರಜೆಯನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದ್ದು, ಅಕ್ಟೋಬರ್ 14ರಿಂದ ಕಾಲೇಜುಗಳನ್ನು ಪುನರಾರಂಭಿಸಲು ಸೂಚಿಸಲಾಗಿದೆ.

ಈ ಸಂಬಂಧ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದ್ದು, ಪದವಿಪೂರ್ವ ಶಿಕ್ಷಣ ಇಲಾಖೆಯ 2022-23ನೇ ಶೈಕ್ಷಣಿಕ ಸಾಲಿನ ದಾಖಲಾತಿ ಮಾರ್ಗಸೂಚಿಯಲ್ಲಿ ಮಧ್ಯಂತರ ರಜೆಯನ್ನು ದಿನಾಂಕ 01-10-2022 ರಿಂದ 12-10-2022ರವರೆಗೆ ನಿಗದಿ ಪಡಿಸಲಾಗಿತ್ತು ಎಂದು ತಿಳಿಸಿದೆ.

ಇದೀಗ ದಿನಾಂಕ 13-10-2022ರಂದು ಒಂದು ದಿನ ಹೆಚ್ಚುವರಿಯಾಗಿ ರಜೆಯನ್ನು ವಿಸ್ತರಿಸಲಾಗಿದೆ. ಹೀಗಾಗಿ ಎಲ್ಲಾ ಪದವಿ ಪೂರ್ವ ಕಾಲೇಜುಗಳನ್ನು ದಿನಾಂಕ 14-10-2022ರಿಂದ ಮರು ಪ್ರಾರಂಭಿಸುವಂತೆ ಸೂಚಿಸಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com