ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ: ಹೈಕೋರ್ಟ್ ಆದೇಶ ಪ್ರಶ್ಮಿಸಿ ಸುಪ್ರೀಂಗೆ ಮೇಲ್ಮನವಿ

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವಕ್ಕೆ ಅವಕಾಶ ನೀಡಿರುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅಂಜುಮನ್ ಇಸ್ಲಾಂ ಸಂಘಟನೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ
Updated on

ಬೆಂಗಳೂರು: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವಕ್ಕೆ ಅವಕಾಶ ನೀಡಿರುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅಂಜುಮನ್ ಇಸ್ಲಾಂ ಸಂಘಟನೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ಹುಬ್ಬಳ್ಳಿ-ಧಾರವಾಡ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಣೆಗೆ ಅನುಮತಿ ನೀಡಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಮಂಗಳವಾರ ರಾತ್ರಿ  ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ.

ಹೈಕೋರ್ಟ್ ಆದೇಶದ ಮೇರೆಗೆ ಹುಬ್ಬಳ್ಳಿ-ಧಾರವಾಡದ ಈದ್ಗಾ ಮೈದಾನದಲ್ಲಿ ಬುಧವಾರ ಗಣಪತಿ ಮೂರ್ತಿ ಪ್ರತಿಷ್ಠಾಪಿಸಲಾಗಿದೆ. ಮಂಗಳವಾರ ತಡರಾತ್ರಿ ನಡೆದ ವಿಚಾರಣೆಯಲ್ಲಿ ಕರ್ನಾಟಕ ಹೈಕೋರ್ಟ್ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿಗೆ ಅನುಮತಿ ನೀಡುವ ಅಧಿಕಾರಿಗಳ ನಿರ್ಧಾರವನ್ನು ಎತ್ತಿ ಹಿಡಿದಿದೆ.

ಅಂಜುಮನ್-ಇ-ಇಸ್ಲಾಂ ಸಲ್ಲಿಸಿದ್ದ ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ ಮತ್ತು ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಣೆಗೆ ಅನುಮತಿ ನೀಡುವ ಸಂಬಂಧಿತ ಅಧಿಕಾರಿಗಳ ನಿರ್ಧಾರದಲ್ಲಿ ಹಸ್ತಕ್ಷೇಪ ಮಾಡಲು ನಿರಾಕರಿಸಿದೆ.

ವಿವಾದದ ನೆಲೆಯು ಪ್ರತಿವಾದಿ ಅಧಿಕಾರಿಗಳಿಗೆ ಸೇರಿದೆ ಮತ್ತು ಅವರು ಅಲ್ಲಿ ನಿಯಮಿತ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂದು ನ್ಯಾಯಾಲಯ ಗಮನಿಸಿದೆ. ಅರ್ಜಿದಾರರು ಕೋರಿರುವ ಮಧ್ಯಂತರ ಪರಿಹಾರದ ಪ್ರಾರ್ಥನೆ ಅರ್ಹವಾಗಿಲ್ಲ ಮತ್ತು ಅದನ್ನು ತಿರಸ್ಕರಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಕೆಲವು ಹಿಂದೂ ಸಂಘಟನೆಗಳು ಈ ಆಸ್ತಿಯಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲು ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಲು ಅರ್ಜಿ ಸಲ್ಲಿಸಿದ್ದವು. ಧಾರವಾಡ ಮಹಾನಗರ ಪಾಲಿಕೆ ಆಯುಕ್ತರು ಕೆಲವು ಷರತ್ತುಗಳ ಅಡಿಯಲ್ಲಿ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಲು ಅನುಮತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com