ಮತದಾರರ ಮಾಹಿತಿ ಕಳವು ಪ್ರಕರಣ: ಚಿಲುಮೆ ಸಂಸ್ಥೆಯ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು

ಮತದಾರರ ಮಾಹಿತಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಮತ್ತಿಬ್ಬರು ಆರೋಪಿಗಳಾದ ಮಾರುತಿ ಗೌಡ ಮತ್ತು ಅಭಿಷೇಕ್ ಅವರನ್ನು ಬಂಧಿಸಿದ, ಪೊಲೀಸರು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಇದೀಗ ವಶಕ್ಕೆ ಪಡೆದುಕೊಂಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮತದಾರರ ಮಾಹಿತಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಮತ್ತಿಬ್ಬರು ಆರೋಪಿಗಳಾದ ಮಾರುತಿ ಗೌಡ ಮತ್ತು ಅಭಿಷೇಕ್ ಅವರನ್ನು ಬಂಧಿಸಿದ, ಪೊಲೀಸರು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಇದೀಗ ವಶಕ್ಕೆ ಪಡೆದುಕೊಂಡಿದ್ದಾರೆ.

ಹಲಸೂರು ಗೇಟ್ ಪೊಲೀಸರು ಗುರುವಾರ ಚಿಲುಮೆ ಚಿಲುಮೆಯ ಐವರು ಸಿಬ್ಬಂದಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ಹಲಸೂರು ಗೇಟ್ ಪೊಲೀಸ್ ಅಧಿಕಾರಿಗಳು ಮಾತನಾಡಿ, ಮಾರುತಿ ಗೌಡ ಮತ್ತು ಅಭಿಷೇಕ್ ಪ್ರಮುಖ ಆರೋಪಿ ರವಿಕುಮಾರ್‌ಗೆ ಮತದಾರರ ದತ್ತಾಂಶವನ್ನು ತಿದ್ದಲು ಮತ್ತು ಬೂತ್ ಮಟ್ಟದ ಅಧಿಕಾರಿಗಳಂತೆ ವೇಷ ಹಾಕಲು ಸಹಾಯ ಮಾಡಿರುವುದು ತನಿಖೆಯಿಂದ ತಿಳಿದುಬಂದಿದೆ, ಆರೋಪಿಗಳು ನಕಲಿ ಬೂತ್ ಮಟ್ಟದ ಸಮಿತಿ ಕಾರ್ಡ್‌ಗಳನ್ನು ಹೊಂದಿದ್ದರು. ನ್ಯಾಯಾಲಯವು ಮಾರುತಿ ಗೌಡ ಮತ್ತು ಅಭಿಷೇಕ್'ರನ್ನು ಆರು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿದೆ ಎಂದು ಹೇಳಿದ್ದಾರೆ.

ಆರೋಪಿಗಳಾದ ಧರ್ಮೇಶ್, ರೇಣುಕಾ ಪ್ರಸಾದ್ ಮತ್ತು ಅನಿಲ್ ಕುಮಾರ್ ಅವರನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯ 8 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿತ್ತು. ಇದು ಗುರುವಾರಕ್ಕೆ ಕೊನೆಗೊಂಡ ಹಿನ್ನೆಲೆಯಲ್ಲಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಹಗರಣದ ಹಿನ್ನೆಲೆಯಲ್ಲಿ ನಾಲ್ವರು ಬಿಬಿಎಂಪಿ ಕಂದಾಯ ಅಧಿಕಾರಿಗಳಾದ ವಿಬಿ ಭೀಮಾಶಂಕರ್ (ಚಿಕ್ಕಪೇಟೆ), ಸುಹೇಲ್ ಅಹಮದ್ (ಶಿವಾಜಿನಗರ), ಕೆ ಚಂದ್ರಶೇಖರ್ (ಮಹದೇವಪುರ), ಮಹೇಶ್ (ಆರ್ ಆರ್ ನಗರ) ಅವರನ್ನು ಅಮಾನತುಗೊಳಿಸಲಾಗಿದೆ.

ನಕಲಿ ಗುರುತಿನ ಚೀಟಿ ನೀಡುವ ಮೂಲಕ ಎನ್‌ಜಿಒಗೆ ಸಹಾಯ ಮಾಡಿದ ಆರೋಪದ ಮೇಲೆ ಹಲಸೂರು ಗೇಟ್ ಪೊಲೀಸರು ಅವರನ್ನು ಬಂಧನಕ್ಕೊಳಪಡಿಸಿದರು.

ಈ ಘಟನೆಯಿಂದಾಗಿ ಬಿಬಿಎಂಪಿ ಆಡಳಿತದ ವಿಶೇಷ ಆಯುಕ್ತ ಎಸ್ ರಂಗಪ್ಪ ಮತ್ತು ಬೆಂಗಳೂರು ನಗರ ಡಿಸಿ ಕೆ ಶ್ರೀನಿವಾಸ್ ಅವರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ.

ಮತದಾರರ ಪಟ್ಟಿ ಪರಿಷ್ಕರಿಸಲು ಗಡುವು ವಿಸ್ತರಿಸಿದ ಚುನಾವಣಾ ಆಯೋಗ
ಭಾರತೀಯ ಚುನಾವಣಾ ಆಯೋಗವು ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ಶಿವಾಜಿನಗರ, ಚಿಕ್ಕಪೇಟೆ ಮತ್ತು ಮಹದೇವಪುರಕ್ಕೆ ಸಂಬಂಧಿಸಿದ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸುವ ಕೊನೆಯ ದಿನಾಂಕವನ್ನು ಡಿಸೆಂಬರ್ 24 ರವರೆಗೆ ವಿಸ್ತರಿಸಿದೆ.

ನಿಗದಿತ ನಿರ್ದೇಶನಗಳು ಮತ್ತು ನಿಯಮಗಳ ಪ್ರಕಾರ ಮನೆ-ಮನೆ ಸಮೀಕ್ಷೆಯನ್ನು ಪೂರ್ಣಗೊಳಿಸಲು ಚುನಾವಣಾ ಆಯೋಗವು ರಾಜ್ಯ ಚುನಾವಣಾ ಆಯೋಗಕ್ಕೆ ತಿಳಿಸಿದೆ.

ಈ ಸಂಬಂಧ ಆಯೋಗವು ರಾಜ್ಯ ಚುನಾವಣಾ ಸಮಿತಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳೊಂದಿಗೆ ಗುರುವಾರ ಸಭೆ ನಡೆಸಿ ಪರಿಶೀಲನೆ ನಡೆಸಿದ್ದು, ಈ ವೇಳೆ ನವೆಂಬರ್ 9 ರಿಂದ ಡಿಸೆಂಬರ್ 1 ರವರೆಗೆ 28 ​​ವಿಧಾನಸಭಾ ಕ್ಷೇತ್ರಗಳಲ್ಲಿ ಕೇವಲ ಶೇಕಡಾ 23 ರಷ್ಟು ಪೂರ್ಣಗೊಂಡಿರುವುದು ತಿಳಿದುಬಂದಿತ್ತು. ಈ ಹಿನ್ನೆಲೆಯಲ್ಲಿ ಪ್ರಕ್ರಿಯೆಯನ್ನು ವೇಗಗೊಳಿಸಲು ಆಯೋಗವು ರಾಜ್ಯ ಚುನಾವಣಾ ಸಮಿತಿಗೆ ಸೂಚಿಸಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com