ಕೆಜಿಎಫ್ ಹಾಡಿನ ಬಳಕೆ ವಿವಾದ: ರಾಹುಲ್ ಗಾಂಧಿ ಸೇರಿ ಮೂವರಿಗೆ ಹೈಕೋರ್ಟ್ ನೋಟಿಸ್

ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಕಾಂಗ್ರೆಸ್ ಕೆಜಿಎಫ್-2 ಚಿತ್ರದ ಹಕ್ಕುಸ್ವಾಮ್ಯ ಹಾಡುಗಳನ್ನು ಬಳಸಿದ್ದಕ್ಕಾಗಿ ಎಂಆರ್‌ಟಿ ಮ್ಯೂಸಿಕ್ ಸಲ್ಲಿಸಿದ ನ್ಯಾಯಾಂಗ ನಿಂದನೆ ಅರ್ಜಿಯ ಕುರಿತು ಕರ್ನಾಟಕ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೇರಿದಂತೆ ಮೂವರಿಗೆ ನೋಟಿಸ್ ಜಾರಿ ಮಾಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಕಾಂಗ್ರೆಸ್ ಕೆಜಿಎಫ್-2 ಚಿತ್ರದ ಹಕ್ಕುಸ್ವಾಮ್ಯ ಹಾಡುಗಳನ್ನು ಬಳಸಿದ್ದಕ್ಕಾಗಿ ಎಂಆರ್‌ಟಿ ಮ್ಯೂಸಿಕ್ ಸಲ್ಲಿಸಿದ ನ್ಯಾಯಾಂಗ ನಿಂದನೆ ಅರ್ಜಿಯ ಕುರಿತು ಕರ್ನಾಟಕ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೇರಿದಂತೆ ಮೂವರಿಗೆ ನೋಟಿಸ್ ಜಾರಿ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರಿದ್ದ ವಿಭಾಗೀಯ ಪೀಠವು ಪಕ್ಷದ ಸಂವಹನ, ಪ್ರಚಾರ ಮತ್ತು ಮಾಧ್ಯಮದ ಉಸ್ತುವಾರಿ ವಹಿಸಿರುವ ಜೈರಾಮ್ ರಮೇಶ್, ಸಾಮಾಜಿಕ ಮಾಧ್ಯಮ ಮತ್ತು ಡಿಜಿಟಲ್ ವೇದಿಕೆಗಳ ಮುಖ್ಯಸ್ಥೆ ಸುಪ್ರಿಯಾ ಶ್ರೀನತೆ ಮತ್ತು ರಾಹುಲ್ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿದೆ.

ಹಕ್ಕು ಸ್ವಾಮ್ಯ ಉಲ್ಲಂಘಿಸಿ ಬಳಸಿಕೊಂಡಿದ್ದ ಕೆಜಿಎಫ್-2 ಚಿತ್ರದ ಹಾಡಿನ ಸಂಗೀತವನ್ನು ಕಾಂಗ್ರೆಸ್‌ನ ಎಲ್ಲ ಸಾಮಾಜಿಕ ಜಾಲತಾಣಗಳ ಖಾತೆಯಿಂದ ತೆರವುಗೊಳಿಸುವುದಾಗಿ ಹೈಕೋರ್ಟ್‌ಗೆ ಭರವಸೆ ನೀಡಿದ್ದ ಹೊರತಾಗಿಯೂ ಈವರೆಗೂ ತೆಗೆದುಹಾಕಿಲ್ಲ. ಈ ಮೂಲಕ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಲಾಗಿದೆ ಎಂದು ಆಕ್ಷೇಪಿಸಿ ಹಾಡುಗಳ ಹಕ್ಕು ಸ್ವಾಮ್ಯ ಹೊಂದಿರುವ ಎಂಆರ್‌ಟಿ ಮ್ಯೂಸಿಕ್‌ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ.

ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಿದ ನ್ಯಾಯಪೀಠ, ನ್ಯಾಯಾಂಗ ನಿಂದನೆ ಅರ್ಜಿಯಲ್ಲಿ ಆರೋಪಿತರನ್ನಾಗಿ ಮಾಡಲಾಗಿರುವ ರಾಹುಲ್‌ ಗಾಂಧಿ, ಜೈರಾಮ್ ರಮೇಶ್‌ ಹಾಗೂ ಸುಪ್ರಿಯಾ ಅವರಿಗೆ ನೋಟಿಸ್‌ ಜಾರಿಗೊಳಿಸಿ, ವಿಚಾರಣೆಯನ್ನು ಜ.12ಕ್ಕೆ ಮುಂದೂಡಿತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com