ಕರ್ನಾಟಕ ಯುವ ನೀತಿಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ, ಕೌಶಲ್ಯ ತರಬೇತಿಗೆ ಒತ್ತು

ಎಲ್ಲ ಕ್ಷೇತ್ರಗಳಲ್ಲಿ ಯುವಕರನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಯುವ ನೀತಿಗೆ ರಾಜ್ಯ ಸಚಿವ ಸಂಪುಟ ನಿನ್ನೆ ಗುರುವಾರ ಅನುಮೋದನೆ ನೀಡಿದೆ.
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ
Updated on

ಬೆಂಗಳೂರು: ಎಲ್ಲ ಕ್ಷೇತ್ರಗಳಲ್ಲಿ ಯುವಕರನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಯುವ ನೀತಿಗೆ ರಾಜ್ಯ ಸಚಿವ ಸಂಪುಟ ನಿನ್ನೆ ಗುರುವಾರ ಅನುಮೋದನೆ ನೀಡಿದೆ. ಹೆಚ್ಚುತ್ತಿರುವ ಯುವಕರ ನಿರುದ್ಯೋಗ ಸಮಸ್ಯೆಯನ್ನು ಪರಿಹರಿಸಲು ಮತ್ತು ಯುವಕರಲ್ಲಿ ಅಪೌಷ್ಟಿಕತೆ, ಮಾನಸಿಕ ಆರೋಗ್ಯ ಮತ್ತು ವ್ಯಸನದ ಸಮಸ್ಯೆಗಳನ್ನು ನಿಭಾಯಿಸಲು ಕೌಶಲ್ಯ ತರಬೇತಿಯನ್ನು ನೀಡಲು ಈ ನೀತಿಯು ಒತ್ತು ನೀಡುತ್ತದೆ.

ಯುವಜನ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ಮಾತನಾಡಿ, ಪ್ರಥಮ ಬಾರಿಗೆ ಇಂತಹ ಸಮಗ್ರ ನೀತಿಯನ್ನು ರೂಪಿಸಲಾಗಿದೆ. ಯುವಕರು ಎದುರಿಸುತ್ತಿರುವ ಪ್ರಚಲಿತ ಸಮಸ್ಯೆಗಳ ಮೇಲೆ ನೀತಿಯು ಒತ್ತು ನೀಡುತ್ತದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023ರಲ್ಲಿ ಯುವ ಬಜೆಟ್ ಮಂಡಿಸಲಿದ್ದಾರೆ ಎಂದು ಹೇಳಿದರು. ತಾಲೂಕು ಮಟ್ಟದಲ್ಲಿ ಯುವಕರಿಗಾಗಿ ಪ್ರತ್ಯೇಕ ನಿರ್ದೇಶನಾಲಯವನ್ನು ಸಹ ನೀತಿ ಶಿಫಾರಸು ಮಾಡಿದೆ ಎಂದು ಹೇಳಿದರು. 

ಕಳೆದ ಅಕ್ಟೋಬರ್ 2021 ರಲ್ಲಿ, ಕರ್ನಾಟಕ ಯುವ ನೀತಿಯನ್ನು ರೂಪಿಸಲು ರಾಜ್ಯ ಸರ್ಕಾರವು 13 ಸದಸ್ಯರ ತಜ್ಞರ ಸಮಿತಿಯನ್ನು ರಚಿಸಿತ್ತು.

15-29 ವಯಸ್ಸಿನ ಗುಂಪಿನ ಮೇಲೆ ಕೇಂದ್ರೀಕರಿಸಿ: ತಂಡ 
ಸಮಿತಿಯು ಶಿಕ್ಷಣ, ತರಬೇತಿ, ಉದ್ಯೋಗ, ಉದ್ಯಮಶೀಲತೆ, ಆರೋಗ್ಯ ಮತ್ತು ಯೋಗಕ್ಷೇಮ, ಕ್ರೀಡೆ ಮತ್ತು ದೈಹಿಕ ಸದೃಢತೆ, ಕಲೆ ಮತ್ತು ಸಂಸ್ಕೃತಿ ಹಾಗೂ ಮೌಲ್ಯಾಧಾರಿತ ನಾಯಕತ್ವದ ಅಭಿವೃದ್ಧಿ ಸೇರಿದಂತೆ ವಿವಿಧ ಅಂಶಗಳ ಮೇಲೆ ಗಮನ ಹರಿಸುತ್ತಿದ್ದು 15 ರಿಂದ 29 ರ ವಯೋಮಾನದ ಯುವಕರಿಗೆ ಒತ್ತು ನೀಡುತ್ತದೆ. 

ಇಲಾಖೆ ಹಂಚಿಕೊಂಡಿರುವ ಅಂಕಿ ಅಂಶಗಳ ಪ್ರಕಾರ, ಕರ್ನಾಟಕದಲ್ಲಿ ಪ್ರಸ್ತುತ 7.5 ಕೋಟಿ ಜನಸಂಖ್ಯೆಯಲ್ಲಿ ಶೇಕಡಾ 30ರಷ್ಟು ಯುವಕರು ಅಂದರೆ 2.11 ಕೋಟಿ ಮಂದಿ ಇದ್ದಾರೆ. ಶಿಕ್ಷಣ, ಕ್ರೀಡೆ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಮತ್ತು ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಯುವಕರಿಗಾಗಿ 500 ಕ್ಕೂ ಹೆಚ್ಚು ಯೋಜನೆಗಳಿವೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

ಬಜೆಟ್ ಒಂದು ಕ್ರೋಢೀಕೃತವಾಗಿದ್ದು, ಈ ಎಲ್ಲಾ ಅಂಶಗಳನ್ನು ಒಟ್ಟಿಗೆ ತರುತ್ತದೆ ಎಂದು ಮೂಲಗಳು ತಿಳಿಸಿವೆ. ಪ್ರೌಢಶಾಲಾ ಹಂತದಲ್ಲಿ ಶಾಲೆ ಬಿಡುವವರ ಪ್ರಮಾಣ ಹೆಚ್ಚಿದ್ದು, ಕೇವಲ ಶೇಕಡಾ 21ರಷ್ಟು ಯುವಕರು ಮಾತ್ರ ಪದವಿ ಮತ್ತು ಸ್ನಾತಕೋತ್ತರ ಹಂತ ತಲುಪುತ್ತಿದ್ದಾರೆ ಎಂದು ಇಲಾಖೆ ಹಂಚಿಕೊಂಡಿರುವ ದಾಖಲೆಗಳು ಹೇಳುತ್ತವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com