ಉಡುಪಿ: ಕರ್ನಾಟಕದಲ್ಲಿ ಕಳ್ಳತನ ಮಾಡಿ ತಲೆಮರೆಸಿಕೊಂಡಿದ್ದ ಪಶ್ಚಿಮ ಬಂಗಾಳದ ವ್ಯಕ್ತಿಯ ಬಂಧನ

ಉಡುಪಿ ಜಿಲ್ಲೆಯಲ್ಲಿ ಈ ಹಿಂದೆ ಕೆಲಸ ಮಾಡುತ್ತಿದ್ದ ಆಭರಣ ಉತ್ಪಾದನಾ ಘಟಕದಿಂದ ಸುಮಾರು 7 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಮಂಗಳೂರು: ಉಡುಪಿ ಜಿಲ್ಲೆಯಲ್ಲಿ ಈ ಹಿಂದೆ ಕೆಲಸ ಮಾಡುತ್ತಿದ್ದ ಆಭರಣ ಉತ್ಪಾದನಾ ಘಟಕದಿಂದ ಸುಮಾರು 7 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಬಂಧಿತ ವ್ಯಕ್ತಿಯನ್ನು ಪಶ್ಚಿಮ ಬಂಗಾಳದ ಮೇದಿನಿಪುರ ಜಿಲ್ಲೆಯ ಸುಭಾಶಿಶ್ ಬೇರಾ (38) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲೆಯ ಕೆಳಾರ್ಕಲಬೆಟ್ಟು ಎಂಬಲ್ಲಿ ನವೆಂಬರ್ 25 ರಂದು ಕಳ್ಳತನ ನಡೆದಿತ್ತು. ಆಭರಣ ತಯಾರಿಕಾ ಘಟಕದ ಮಾಜಿ ಕೆಲಸಗಾರನಾಗಿದ್ದ ಬೇರಾ ಮುಖ್ಯ ಬಾಗಿಲು ಒಡೆದು ಒಳಗಿದ್ದ ಬೆಲೆಬಾಳು ವಸ್ತುಗಳನ್ನು ತೆಗೆದುಕೊಂಡು ಪರಾರಿಯಾಗಿದ್ದ.

ಆರೋಪಿಯನ್ನು ಬಂಧಿಸಿದಾಗ ತಯಾರಿಕಾ ಘಟಕದಲ್ಲಿ ಇರಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾವನ್ನು ಬಾವಿಗೆ ಎಸೆದಿರುವುದಾಗಿ ಪೊಲೀಸರ ಬಳಿ ಒಪ್ಪಿಕೊಂಡಿದ್ದಾನೆ. ನಂತರ ಅದನ್ನು ಬಾವಿಯಿಂದ ಹೊರತೆಗೆಯಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com