ಚಿಕ್ಕಬಳ್ಳಾಪುರ: ಕ್ಯಾಂಟರ್​-ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರ ದುರ್ಮರಣ

ಗೌರಿಬಿದನೂರು ತಾಲೂಕಿನ ರಂಗನಹಳ್ಳಿ ಗೇಟ್ ಬಳಿ ಕ್ಯಾಂಟರ್ ಹಾಗೂ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ್ದು  ಮೂವರು ದುರ್ಮರಣ ಹೊಂದಿದ್ದಾರೆ.
ಅಪಘಾತದ ಫೋಟೋಗಳು
ಅಪಘಾತದ ಫೋಟೋಗಳು
Updated on: 

ಚಿಕ್ಕಬಳ್ಳಾಪುರ: ಗೌರಿಬಿದನೂರು ತಾಲೂಕಿನ ರಂಗನಹಳ್ಳಿ ಗೇಟ್ ಬಳಿ ಕ್ಯಾಂಟರ್ ಹಾಗೂ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ್ದು  ಮೂವರು ದುರ್ಮರಣ ಹೊಂದಿದ್ದಾರೆ.

ಅಪಘಾತದಲ್ಲಿ ಕೊರಟಗೆರೆ ನಿವಾಸಿಗಳಾದ 25 ವರ್ಷದ ಮೀಲಾನಿ, 70 ವರ್ಷದ ಜೈರಬಿ ಸ್ಥಳದಲ್ಲೇ ಸಾವನ್ನಪ್ಪಿದ್ದು ಆಟೋ ಚಾಲಕ ಕಲಂದರ್ ಎಂಬಾತ ಗೌರಿಬಿದನೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಇನ್ನು ಅಪಘಾತದಲ್ಲಿ 5 ವರ್ಷದ ಅರ್ಪ ಹಾಗೂ 3 ವರ್ಷದ ಅಸೀತಾಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಘಟನಾ ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com