ಸಂಗ್ರಹ ಚಿತ್ರ
ರಾಜ್ಯ
ಬೀದರ್: ಕಾರಂಜಾ ಜಲಾಶಯದಲ್ಲಿ ಈಜಲು ಹೋಗಿದ್ದ ಬಾಲಕರಿಬ್ಬರು ಜಲಸಮಾಧಿ!
ಬೀದರ್ ನ ಕಾರಂಜಾ ಜಲಾಶಯದ ಕಾಲುವೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳಗಿ ಸಾವನ್ನಪ್ಪಿದ್ದಾರೆ.
ಬೀದರ್: ಬೀದರ್ ನ ಕಾರಂಜಾ ಜಲಾಶಯದ ಕಾಲುವೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳಗಿ ಸಾವನ್ನಪ್ಪಿದ್ದಾರೆ.
ಭಾಲ್ಕಿ ತಾಲೂಕಿನ ಹಾಲಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ. ಡ್ಯಾಂನ ನೀರಿನ ಸೆಳೆತಕ್ಕೆ ಸಿಲುಕಿ 16 ವರ್ಷದ ಬಸವರಾಜ್ ಭೂದೆ ಮತ್ತು 16 ವರ್ಷದ ಸಾಯಿಸಾಥ್ ಮೃತಪಟ್ಟಿದರು.
ದನ್ನೂರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಅಗ್ನಿಶಾಮಕ ಸಿಬ್ಬಂದಿಗಳು ಕಾರ್ಯಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ.

