ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪ: 73 ವರ್ಷದ ವೃದ್ಧನ ಹೊಡೆದು ಕೊಂದ ಸಂಬಂಧಿಕರು!

ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ್ದಾನೆ’ ಎಂಬ ಕಾರಣಕ್ಕೆ 73 ವರ್ಷದ ವೃದ್ಧನೊಬ್ಬನನ್ನು ಹೊಡೆದು ಹತ್ಯೆ ಮಾಡಿರುವ ಘಟನೆ ಹೆಣ್ಣೂರಿನ ಬಾಬುಸಪಾಳ್ಯದಲ್ಲಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ್ದಾನೆ’ ಎಂಬ ಕಾರಣಕ್ಕೆ 73 ವರ್ಷದ ವೃದ್ಧನೊಬ್ಬನನ್ನು ಹೊಡೆದು ಹತ್ಯೆ ಮಾಡಿರುವ ಘಟನೆ ಹೆಣ್ಣೂರಿನ ಬಾಬುಸಪಾಳ್ಯದಲ್ಲಿ ನಡೆದಿದೆ.

ವೃದ್ಧನನ್ನು ತಮಿಳುನಾಡು ಮೂಲದ ಕುಪ್ಪಣ್ಣ ಅಲಿಯಾಸ್ ಕುಪ್ಪುಸ್ವಾಮಿ ಎಂದು ಗುರುತಿಸಲಾಗಿದೆ. ಕಳೆದ ನಾಲ್ಕು ವರ್ಷಗಳಿಂದ ಬಾಬುಸಾಪಾಳ್ಯದಲ್ಲಿ ಒಂಟಿಯಾಗಿ ವಾಸವಿದ್ದ ಈತ ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಆತನ ಸಹೋದರಿ ತಮಿಳುನಾಡಿನಲ್ಲಿ ನೆಲೆಸಿದ್ದಾರೆ ಎನ್ನಲಾಗಿದೆ.

ಭಾನುವಾರ ರಾತ್ರಿ 9.30ರ ಸುಮಾರಿಗೆ ಬಾಲಕಿ ಒಣಗಲು ಹಾಕಿದ್ದ ಬಟ್ಟೆಗಳನ್ನು ತರಲು ಮಹಡಿಯ ಮೇಲೆ ಹೋಗಿದ್ದಾಳೆ. ಈ ವೇಳೆ ಆಕೆಯ ನೆರೆಹೊರೆಯವರಾದ ವೃದ್ಧ ಆಕೆಗೆ ಆಮಿಷವೊಡ್ಡಿ ತನ್ನ ಮನೆಗೆ ಕರೆದೊಯ್ದಿದ್ದು, ಬಳಿಕ ಜ್ಯೂಸ್ ನಲ್ಲಿ ನಿದ್ರೆ ಬರುವ ಔಷಧಿ ಬೆರೆಸಿ ನೀಡಿದ್ದಾನೆಂದು ಶಂಕಿಸಲಾಗಿದೆ.

ಮನೆಗೆ ಬಾರದ ಬಾಲಕಿಯನ್ನು ಕುಟುಂಬಸ್ಥರು ಸೋಮವಾರ ಬೆಳಗಿನ ಜಾವ 2 ಗಂಟೆಯವರೆಗೂ ಹುಡುಕಾಡಿದ್ದಾರೆ. ಈ ವೇಳೆ ವೃದ್ಧನ ಮನೆಯಲ್ಲಿ ಬಾಲಕಿ ಬೆತ್ತಲೆಯಾಗಿ ಮಲಗಿರುವುದು ಕಂಡು ಬಂದಿದೆ. ಕೂಡಲೇ ಬಾಲಕಿಯನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದು, ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವಾಗಿರುವುದು ಕಂಡು ಬಂದಿದೆ.

ಬಳಿಕ ಬಾಲಕಿಯ ಕುಟುಂಬಸ್ಥರು ಕುಪ್ಪಣ್ಣನ ಮನೆಗೆ ತೆರಳಿ ಮಾತಿನ ಚಕಮಕಿ ನಡೆಸಿದ್ದಾರೆ. ಬಳಿಕ ಕುಪ್ಪಣ್ಣ ಅವರಿಗೆ ಥಳಿಸಿದ್ದಾರೆಂದು ತಿಳಿದುಬಂದಿದೆ.
 
ಪ್ರಕರಣ ಸಂಬಂಧ ಡಿಸಿಪಿ (ಪೂರ್ವ) ಭೀಮಾಶಂಕರ್ ಎಸ್ ಗುಳೇದ್ ಮಾತನಾಡಿ, “ಸೋಮವಾರ ಬಾಲಕಿಯ ಮನೆಯವರು ಹೆಣ್ಣೂರು ಪೊಲೀಸ್ ಠಾಣೆಗೆ ತೆರಳಿ ವೃದ್ಧನ ವಿರುದ್ಧ ದೂರು ದಾಖಲಿಸಿದ್ದರು. ನಂಕಪ ಪೊಲೀಸರು ವ್ಯಕ್ತಿಯ ಮನೆಗೆ ಹೋಗಿ ನೋಡಿದಾಗ ಆತ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದ. ಕೂಡಲೇ ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಪರಿಶೀಲನೆ ನಡೆಸಿದ ವೈದ್ಯರು ಆತ ಮೃತಪಟ್ಟಿರುವುದಾಗಿ ತಿಳಿಸಿದರು.

ಪ್ರಕರಣ ಸಂಬಂಧ ಬಾಲಕಿಯ ಕುಟುಂಬದ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿದ್ದು, ಮೃತ ಕುಪ್ಪಣ್ಣ ವಿರುದ್ಧ ಪೋಕ್ಸೋ ಪ್ರಕರಣ ಕೂಡ ದಾಖಲಿಸಿಕೊಂಡಿದ್ದಾರೆ. ವೃದ್ಧನ ಸಾವಿಗೆ ನಿಖರ ಕಾರಣ ತಿಳಿಯಲು ಪೊಲೀಸರು ಶವಪರೀಕ್ಷೆ ವರದಿಗಾಗಿ ಕಾಯುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com