ಓಲಾ, ಉಬರ್ ಆಟೋ ಸೇವೆಗೆ ದರ ನಿಗದಿ: ಸರ್ಕಾರದ ಅಧಿಸೂಚನೆಗೆ ಕ್ಯಾಬ್ ಅಗ್ರಿಗೇಟರ್‌ಗಳ ವಿರೋಧ

ತಮ್ಮ ಮೂಲಕ ಸಂಚರಿಸುವ ಆಟೋರಿಕ್ಷಾಗಳಿಗೆ ಮಾತ್ರ ಶೇ 5ರ ವರೆಗೆ ಸೇವಾ ಶುಲ್ಕ ಸಂಗ್ರಹಿಸಲು ಸಾರಿಗೆ ಇಲಾಖೆಗೆ ನಿರ್ಬಂಧ ವಿಧಿಸಿರುವ ರಾಜ್ಯ ಸರ್ಕಾರದ ಅಧಿಸೂಚನೆಗೆ ಕ್ಯಾಬ್ ಅಗ್ರಿಗೇಟರ್‌ಗಳಾಗಿರುವ ಓಲಾ ಮತ್ತು ಉಬರ್ ತೀವ್ರ ವಿರೋಧ ವ್ಯಕ್ತಪಡಿಸಿವೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ತಮ್ಮ ಮೂಲಕ ಸಂಚರಿಸುವ ಆಟೋರಿಕ್ಷಾಗಳಿಗೆ ಮಾತ್ರ ಶೇ 5ರ ವರೆಗೆ ಸೇವಾ ಶುಲ್ಕ ಸಂಗ್ರಹಿಸಲು ಸಾರಿಗೆ ಇಲಾಖೆಗೆ ನಿರ್ಬಂಧ ವಿಧಿಸಿರುವ ರಾಜ್ಯ ಸರ್ಕಾರದ ಅಧಿಸೂಚನೆಗೆ ಕ್ಯಾಬ್ ಅಗ್ರಿಗೇಟರ್‌ಗಳಾಗಿರುವ ಓಲಾ ಮತ್ತು ಉಬರ್ ತೀವ್ರ ವಿರೋಧ ವ್ಯಕ್ತಪಡಿಸಿವೆ.

ಸರ್ಕಾರದ ಆದೇಶ ಪ್ರಶ್ನಿಸಿ ಸೋಮವಾರ, ಕ್ಯಾಬ್ ಅಗ್ರಿಗೇಟರ್‌ಗಳ ಪರ ವಕೀಲರು ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಅವರ ಮುಂದೆ ಹೊಸದಾಗಿ ಅರ್ಜಿ ಸಲ್ಲಿಸಿದರು.

ಮೋಟಾರು ವಾಹನ ಕಾಯಿದೆಯಡಿಯಲ್ಲಿ ಸಂಗ್ರಾಹಕರು ವಿಧಿಸುವ 'ಸೇವಾ ಶುಲ್ಕ'ವನ್ನು ನಿಯಂತ್ರಿಸಲು ಅಥವಾ ನಿಗದಿಪಡಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ ಎಂದು ಅರ್ಜಿದಾರರು ವಾದಿಸಿದರು.

ಸೇವಾ ಶುಲ್ಕ' ಶುಲ್ಕದ ವ್ಯಾಪ್ತಿಯಲ್ಲಿ ಬರುವುದಿಲ್ಲ ಮತ್ತು ಕಾಯಿದೆಯ ಸೆಕ್ಷನ್ 67 ರ ಅಡಿಯಲ್ಲಿ ನಿಯಂತ್ರಿಸಲಾಗುವುದಿಲ್ಲ. ಕ್ಯಾಬ್ ಅಗ್ರಿಗೇಟರ್‌ಗಳು ಒದಗಿಸುವ ಸೇವೆಯು ಸಾರಿಗೆ ಸೇವೆಗಳ ಸ್ವರೂಪದಲ್ಲಿಲ್ಲ ಮತ್ತು ಮೋಟಾರು ವಾಹನಗಳ 'ಬಾಡಿಗೆ'ಗೆ ನೇರವಾಗಿ ಸಂಪರ್ಕ ಹೊಂದಿಲ್ಲ ಎಂದು ಅರ್ಜಿದಾರರು ತಿಳಿಸಿದರು.

“ಅರ್ಜಿದಾರರ ವ್ಯಾಪಾರ ಚಟುವಟಿಕೆಗಳನ್ನು ಆರ್ಟಿಕಲ್ 19(1)(ಜಿ) (ಯಾವುದೇ ವೃತ್ತಿಯನ್ನು ಅಭ್ಯಾಸ ಮಾಡುವ ಹಕ್ಕು) ಅಡಿಯಲ್ಲಿ ರಕ್ಷಿಸಲಾಗಿದೆ. ಇದು ಅಗತ್ಯವಾಗಿ ಒಬ್ಬರ ಜೀವನೋಪಾಯವನ್ನು ಉಳಿಸಿಕೊಳ್ಳಲು ಮತ್ತು ಲಾಭಕ್ಕಾಗಿ ಹಣವನ್ನು ಗಳಿಸುವ ಅಂಶವನ್ನು ಒಳಗೊಂಡಿರುತ್ತದೆ. ಆದ್ದರಿಂದ, ರಾಜ್ಯ ಸರ್ಕಾರ ತನ್ನ ವ್ಯವಹಾರವನ್ನು ಉಳಿಸಿಕೊಳ್ಳಲು ಹಣ ಗಳಿಸಲು ವಿಧಿಸಿರುವ ನಿರ್ಬಂಧಗಳು ಆರ್ಟಿಕಲ್ 19 (1) (ಜಿ) ಅನ್ನು ಉಲ್ಲಂಘಿಸುತ್ತವೆ. ಸರ್ಕಾರ ನಮ್ಮ ಅಭಿಪ್ರಾಯ, ಒಪ್ಪಿಗೆಯನ್ನು ಪಡೆದುಕೊಳ್ಳದೆಯೇ ಅಧಿಸೂಚನೆಯನ್ನು ಹೊರಡಿಸಿದೆ ಎಂದು ಪ್ರತಿಪಾದಿಸಿದರು.

ಮತ್ತೊಂದೆಡೆ, ರಾಜ್ಯ ಸರ್ಕಾರವು ನವೆಂಬರ್ 25, 2022 ರ ಅಧಿಸೂಚನೆಯನ್ನು ಸಮರ್ಥಿಸಿಕೊಂಡಿತು. ಕೇಂದ್ರ ಸರ್ಕಾರದ ಮಾರ್ಗಸೂಚಿಗಳು ಸಲಹೆಗಳು ಮಾತ್ರವಾಗಿದ್ದು, ನಿಯಮ ರೂಪಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇದೆ. ರಾಜ್ಯ ಮಾರ್ಗಸೂಚಿಗಳ ಪ್ರಕಾರ ಮತ್ತು ಸಾರ್ವಜನಿಕ ಹಿತಾಸಕ್ತಿಯಲ್ಲಿ ದರವನ್ನು ನಿಗದಿಪಡಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿತು.

ಸಾರ್ವಜನಿಕ ಹಿತಾಸಕ್ತಿ ಮತ್ತು ರಾಜ್ಯ ಸರ್ಕಾರದ ಮಾರ್ಗಸೂಚಿಯ ಪ್ರಕಾರ ದರ ನಿಗದಿಪಡಿಸಲಾಗಿದೆ ಎಂದು ರಾಜ್ಯ ಸರ್ಕಾರ ವಾದಿಸಿತು.

ವಾದ ಮತ್ತು ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com