ಬಿಎಂಟಿಸಿ ನೌಕರರಿಗೆ ಗುಡ್ ನ್ಯೂಸ್: 5 ಲಕ್ಷ ರೂ. ಆರೋಗ್ಯ ವಿಮೆ ಘೋಷಿಸಿದ ಸಚಿವ ಶ್ರೀರಾಮುಲು

ರಾಜ್ಯ ಸರ್ಕಾರ ಬಿಎಂಟಿಸಿ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ಆರೋಗ್ಯ ರಕ್ಷಾ ಯೋಜನೆಯಡಿ ಬಿಎಂಟಿಸಿ 35 ಸಾವಿರ ನೌಕರರಿಗೆ 5 ಲಕ್ಷ ರೂ. ಆರೋಗ್ಯ ವಿಮೆ ಸೌಲಭ್ಯ ನೀಡುವುದಾಗಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರು ಬುಧವಾರ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯ ಸರ್ಕಾರ ಬಿಎಂಟಿಸಿ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ಆರೋಗ್ಯ ರಕ್ಷಾ ಯೋಜನೆಯಡಿ ಬಿಎಂಟಿಸಿ 35 ಸಾವಿರ ನೌಕರರಿಗೆ 5 ಲಕ್ಷ ರೂ. ಆರೋಗ್ಯ ವಿಮೆ ಸೌಲಭ್ಯ ನೀಡುವುದಾಗಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರು ಬುಧವಾರ ಘೋಷಿಸಿದ್ದಾರೆ. 

ಆರೋಗ್ಯ ರಕ್ಷಾ ಯೋಜನೆಯಡಿ ಬಿಎಂಟಿಸಿ ನೌಕರರು ಖಾಸಗಿ ಆಸ್ಪತ್ರೆಗಳಲ್ಲೂ ಚಿಕಿತ್ಸೆ ಪಡೆಯಬಹುದು. ಬಿಎಂಟಿಸಿಯ 35 ಸಾವಿರ ಸಿಬ್ಬಂದಿಗೆ ಆರೋಗ್ಯ ರಕ್ಷಾ ಯೋಜನೆಯಡಿ 5 ಲಕ್ಷ ರೂ. ಆರೋಗ್ಯ ವಿಮೆ ಸೌಲಭ್ಯ ನೀಡಲಾಗುವುದು ಎಂದು ಸಚಿವ ಶ್ರೀರಾಮುಲು ಮಾಹಿತಿ ನೀಡಿದ್ದಾರೆ. 

ಆಯುಷ್ಮಾನ್ ಯೋಜನೆಯಡಿಯಲ್ಲಿ ಸಾಸ್ತಾ ಎಂಬ ಯೋಜನೆ ಜಾರಿಗೆ ತರಲು ಸಾರಿಗೆ ನಿಗಮ ಮುಂದಾಗಿದೆ. ನಿಗಮದ ಸಿಬ್ಬಂದಿಗಳು ಹಾಗೂ ಕುಟುಂಬದವರು ಯಾವುದೇ ಅನಾರೋಗ್ಯಕ್ಕೊಳಗಾದ್ರೆ ಈ ಯೋಜನೆಯಡಿ ಅವರು ಖಾಸಗಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು. ಆರೋಗ್ಯ ಸಚಿವರು ಹಾಗೂ ಇಲಾಖೆ ಜೊತೆ ಈಗಾಗಲೇ ಬಿಎಂಟಿಸಿ ಅಧಿಕಾರಿಗಳು ಮಾತುಕತೆ ನಡೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com