ತ್ಯಾಜ್ಯ ನಿರ್ವಹಣೆ ಹೆಚ್ಚು ಸಂಘಟಿತವಾಗಿರಬೇಕು: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಿಲೇವಾರಿ ವಿಕೇಂದ್ರೀಕೃತ ವ್ಯವಸ್ಥೆಯನ್ನು ಜಾರಿಗೊಳಿಸುವ ಮೂಲಕ ಕಸ ತೆರವು ಸಮಸ್ಯೆಯನ್ನು ಪರಿಹರಿಸಬಹುದು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಿಲೇವಾರಿ ವಿಕೇಂದ್ರೀಕೃತ ವ್ಯವಸ್ಥೆಯನ್ನು ಜಾರಿಗೊಳಿಸುವ ಮೂಲಕ ಕಸ ತೆರವು ಸಮಸ್ಯೆಯನ್ನು ಪರಿಹರಿಸಬಹುದು.

ಬಿಬಿಎಂಪಿಯ ಘನತ್ಯಾಜ್ಯ ನಿರ್ವಹಣೆ (SWM) ಆಯೋಜಿಸಿದ್ದ ‘ಸ್ವಚ್ಛ ಸಮೀಕ್ಷೆ-2023 ಕಾರ್ಯಕ್ರಮ’ದಡಿ ಸಾರ್ವಜನಿಕರಿಗೆ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್,  ಬಿಬಿಎಂಪಿ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಿಲೇವಾರಿಯಲ್ಲಿ ವಿಕೇಂದ್ರಿಕೃತ ಪದ್ಧತಿಯನ್ನು ಜಾರಿಗೊಳಿಸಿ ಸ್ಥಳಿಯ ಮಟ್ಟದಲ್ಲಿಯೇ ಕಸವನ್ನು ಸಂಸ್ಕರಣೆ ಮಾಡುವ ಪ್ರಕ್ರಿಯೆಯನ್ನು ಜಾರಿಗೊಳಿಸಿದಾಗ ಕಸದ ಸಮಸ್ಯೆಯನ್ನು ಬಗೆಹರಿಸಬಹುದಾಗಿದೆ. ಅದಕ್ಕೆ ನಾಗರಿಕರೆಲ್ಲರೂ ಸಂಪುರ್ಣ ಸಹಕಾರ ನೀಡಬೇಕು ಎಂದು ಕರೆ ನೀಡಿದರು.

ಬೆಂಗಳೂರಿನಲ್ಲಿ ಪ್ರತಿನಿತ್ಯ 16,000ಕ್ಕೂ ಹೆಚ್ಚು ಪೌರಕಾರ್ಮಿಕರು ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದು, ಮೆಕ್ಯಾನಿಕಲ್ ಸ್ವೀಪರ್‌ಗಳು ಕೆಲಸ ಮಾಡುತ್ತಾರೆ. “ಮನೆಯಿಂದ ಮನೆಗೆ ಕಸ ಸಂಗ್ರಹಣೆಯನ್ನು ಹೆಚ್ಚು ಸಂಘಟಿತವಾಗಿ ಮಾಡಬೇಕಾಗಿದೆ. ಇದಕ್ಕೆ ಎಲ್ಲಾ ನಾಗರಿಕರ ಸಹಕಾರ ಅತ್ಯಗತ್ಯ. ರಾತ್ರಿ ವೇಳೆ ಬೀದಿ ಬದಿಯಲ್ಲಿ ಕಸ ಸುರಿಯುತ್ತಿರುವುದರಿಂದ ನಗರದ ಹಲವೆಡೆ ಬ್ಲಾಕ್ ಸ್ಪಾಟ್ ಗಳು ಸೃಷ್ಟಿಯಾಗಿವೆ. ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಾಗ ಮಾತ್ರ ಬೆಂಗಳೂರನ್ನು ಸ್ವಚ್ಛ ನಗರವನ್ನಾಗಿ ಮಾಡಲು ಸಾಧ್ಯ ಎಂದು ಬಿಬಿಎಂಪಿ ಮುಖ್ಯಸ್ಥರು ಹೇಳಿದರು.

ಪಾಲಿಕೆಯು ಸ್ವಚ್ಛ ಸರ್ವೇಕ್ಷಣಾ ಅಭಿಯಾನದಡಿ ಗುರುತಿಸಿಕೊಳ್ಳುವಲ್ಲಿ ವಿಫಲವಾಗಿದೆ ಎಂದು ಸೂಚಿಸಿದ ಆಯುಕ್ತರು, ಘನತ್ಯಾಜ್ಯ ನಿರ್ವಹಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಬಿಬಿಎಂಪಿ ಅಧಿಕಾರಿಗಳು ಶ್ರಮಿಸಬೇಕು ಎಂದರು.

ಸ್ವಚ್ಛ ತಂತ್ರಜ್ಞಾನ, ಆವಿಷ್ಕಾರಗಳು ಮತ್ತು ಉತ್ತಮ ಅಭ್ಯಾಸವನ್ನು ಒಳಗೊಂಡಿರುವ ಐದು ವಿಭಿನ್ನ ವಿಭಾಗಗಳ ಅಡಿಯಲ್ಲಿ ಸುಮಾರು 30 ವ್ಯಕ್ತಿಗಳನ್ನು ಇದೇ ಸಂದರ್ಭದಲ್ಲಿ ಬಿಬಿಎಂಪಿಯಿಂದ ಸನ್ಮಾನಿಸಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com