ಸುಲಿಗೆ ಪ್ರಕರಣ: ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಬಂಧನ
ಮಂಗಳೂರು: ಚಿನ್ನ ಮತ್ತು ಹಣ ನೀಡದಿದ್ದರೆ ಉದ್ಯಮಿಯೊಬ್ಬರ ಖಾಸಗಿ ಮಾಹಿತಿ ಸೋರಿಕೆ ಮಾಡುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಅವರನ್ನು ಸುರತ್ಕಲ್ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಕೋವೂರು ನಿವಾಸಿ ಸುರೇಶ್ ಎಂಬವರು ಪೊಲೀಸರಿಗೆ ನೀಡಿದ ದೂರಿನ ಆಧಾರದ ಮೇಲೆ ರಾಜೇಶ್ ಪವಿತ್ರನ್ ಅವರನ್ನು ಬಂಧಿಸಲಾಗಿದೆ.
ನಾನು ಮತ್ತು ಪವಿತ್ರನ್ ಇಬ್ಬರೂ ಸುರತ್ಕಲ್‌ನಲ್ಲಿ ಪಾಲುದಾರಿಕೆ ಆಧಾರದ ಮೇಲೆ ವ್ಯಾಪಾರ ಮಾಡಲು ನಿರ್ಧರಿಸಿದ್ದೇವೆ. ನಂತರ, ಪವಿತ್ರನ್ ಅವರ ಸಂಶಯಾಸ್ಪದ ವ್ಯಾಪಾರ ವ್ಯವಹಾರಗಳ ಬಗ್ಗೆ ಹೆಚ್ಚು ತಿಳಿದುಕೊಂಡ ನಂತರ ಅವರೊಂದಿಗೆ ವ್ಯಾಪಾರ ಮಾಡುವ ನಿರ್ಧಾರದಿಂದ ಹಿಂದೆ ಸರಿದೆ ಎಂದು ಸುರೇಶ್ ಅವರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
ಇದರಿಂದ ಕುಪಿತಗೊಂಡ ಪವಿತ್ರನ್, ನನ್ನ ಲ್ಯಾಪ್‌ಟಾಪ್ ಅನ್ನು ರಹಸ್ಯವಾಗಿ ಕಿತ್ತುಕೊಂಡು, ಚಿನ್ನ ಮತ್ತು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಆದರೆ ಅದಕ್ಕೆ ನಾನು ಮಣಿಯದಿದ್ದಾಗ ಕಂಪ್ಯೂಟರ್‌ನಲ್ಲಿರುವ ತಮ್ಮ ಖಾಸಗಿ ಮಾಹಿತಿಯನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಸರೇಶ್ ಆರೋಪಿಸಿದ್ದಾರೆ. ಅಲ್ಲದೆ ಆರೋಪಿ ತನ್ನ ಕೈಕಾಲುಗಳನ್ನು ಕತ್ತರಿಸುವುದಾಗಿಯೂ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ