ಮುರುಘಾ ಶ್ರೀಗಳ ವಿರುದ್ಧ ಪ್ರಕರಣ ದಾಖಲಿಸಲು ಕುಮ್ಮಕ್ಕು: ಸೌಭಾಗ್ಯ ಬಸವರಾಜನ್‌ ಬಂಧನ

ಬಸವರಾಜನ್‌ ಹಾಗೂ ಸೌಭಾಗ್ಯ ವಿರುದ್ಧ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ನ.9 ರಂದು ದೂರು ದಾಖಲಾಗಿದ್ದು, ಮರುದಿನ ಅಂದರೆ ನ.10 ರಂದು ಬಸವರಾಜನ್‌ ಅವರನ್ನು ಬಂಧಿಸಲಾಗಿತ್ತು. ಆದರೆ, ಸೌಭಾಗ್ಯ ತಲೆ ಮರೆಸಿಕೊಂಡಿದ್ದರು.
ಸೌಭಾಗ್ಯ ಬಸವರಾಜನ್
ಸೌಭಾಗ್ಯ ಬಸವರಾಜನ್

ಚಿತ್ರದುರ್ಗ: ಮುರುಘಾ ಶ್ರೀ ವಿರುದ್ಧ ಪೋಕ್ಸೋ ಪ್ರಕರಣದಲ್ಲಿ ಪಿತೂರಿ ನಡೆಸಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ, ಮಾಜಿ ಶಾಸಕ ಎಸ್‌.ಕೆ.ಬಸವರಾಜನ್‌ಪತ್ನಿ ಸೌಭಾಗ್ಯ ಬಸವರಾಜನ್‌ ಅವರನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಗುರುವಾರ ದಾವಣಗೆರೆಯಲ್ಲಿ ವಶಕ್ಕೆ ಪಡೆದಿದ್ದಾರೆ.

ಬಸವರಾಜನ್‌ ಹಾಗೂ ಸೌಭಾಗ್ಯ ವಿರುದ್ಧ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ನ.9 ರಂದು ದೂರು ದಾಖಲಾಗಿದ್ದು, ಮರುದಿನ ಅಂದರೆ ನ.10 ರಂದು ಬಸವರಾಜನ್‌ ಅವರನ್ನು ಬಂಧಿಸಲಾಗಿತ್ತು. ಆದರೆ, ಸೌಭಾಗ್ಯ ತಲೆ ಮರೆಸಿಕೊಂಡಿದ್ದರು.

ದಾವಣಗೆರೆಯಲ್ಲಿ ತಡರಾತ್ರಿ ಸೌಭಾಗ್ಯ ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು ಶುಕ್ರವಾರ ಬಂಧಿಸಿ ವಿಚಾರಣೆ ನಡೆಸಲಿದ್ದಾರೆ. ಸದ್ಯ ಸೌಭಾಗ್ಯ ಅವರನ್ನು ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿದೆ. ಮುರುಘಾ ಶ್ರೀ ವಿರುದ್ಧ ಸುಳ್ಳು ದೂರು ದಾಖಲಿಸಲು ಪಿತೂರಿ ನಡೆಸಲಾಗಿದೆ ಎಂದು ಆರೋಪಿಸಿ ಮುರುಘಾ ಮಠದ ಉಸ್ತುವಾರಿ ಬಸವಪ್ರಭು ಶ್ರೀ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. ಅದರಂತೆ ಈ ಬಂಧನ ನಡೆದಿದೆ.

ಬಂಧನ ಭೀತಿ ಎದುರಿಸುತ್ತಿದ್ದ ಸೌಭಾಗ್ಯ, ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಲಯ ಅರ್ಜಿ ವಜಾ ಮಾಡಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಸೌಭಾಗ್ಯ ಅವರ ಪತಿ ಎಸ್‌.ಕೆ. ಬಸವರಾಜನ್‌, ಶಿಕ್ಷಕ ಬಸವರಾಜೇಂದ್ರ, ಛಾಯಾಚಿತ್ರಗ್ರಾಹಕ ಮಯೂರ ಬಂಧಿತರಾಗಿದ್ದಾರೆ.

ಡಿಸೆಂಬರ್ 15ರ ತಡರಾತ್ರಿ ದಾವಣಗೆರೆಯಲ್ಲಿ ಸೌಭಾಗ್ಯ ಬಸವರಾಜನ್ ರನ್ನು ಬಂಧಿಸಲಾಗಿದೆ. ಸದ್ಯ ಸೌಭಾಗ್ಯ ಅವರನ್ನು ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿದ್ದು, ಇಂದು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ.

ಮುರುಘಾಮಠ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಠದ ಮಾಜಿ ಆಡಳಿತಾಧಿಕಾರಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಿಂದ ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಅವರ ಹೆಸರಿನಲ್ಲಿ ಕಾಂಗ್ರೆಸ ಟಿಕೆಟ್ ಗೆ ಅರ್ಜಿ ಸಲ್ಲಿಕೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com