ಕಳಪೆ ರಸ್ತೆಯಿಂದ ಅಪಘಾತ ಸಂಭವಿಸಿ ಸಾವು-ನೋವು ಆದರೆ ಪೊಲೀಸರಿಗೆ ದೂರು ನೀಡಿ: ಹೈಕೋರ್ಟ್ ಆದೇಶ

ಈ ವರ್ಷ ಹೊಂಡ-ಗುಂಡಿ ಬಿದ್ದ ಬೆಂಗಳೂರಿನ ರಸ್ತೆಗಳಲ್ಲಿ ಆಗಿರುವ ಗಂಡಾಂತರಗಳು ಒಂದೆರಡಲ್ಲ. ಈ ಸಂದರ್ಭದಲ್ಲಿ ಜನಪ್ರತಿನಿಧಿಗಳು ಏನು ಮಾಡುತ್ತಾರೆ, ಮಹಾನಗರ ಪಾಲಿಕೆ ಸರಿಯಾಗಿ ಕೆಲಸ ಮಾಡಿಸುತ್ತಿಲ್ಲ, ಗುತ್ತಿಗೆದಾರರು ಕೇವಲ ಹಣ ಮಾಡಲು ನೋಡುತ್ತಾರೆ ಎಂಬ ಆರೋಪಗಳು ಕೇಳಿಬರುತ್ತಿರುತ್ತದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಈ ವರ್ಷ ಹೊಂಡ-ಗುಂಡಿ ಬಿದ್ದ ಬೆಂಗಳೂರಿನ ರಸ್ತೆಗಳಲ್ಲಿ ಆಗಿರುವ ಗಂಡಾಂತರಗಳು ಒಂದೆರಡಲ್ಲ. ಈ ಸಂದರ್ಭದಲ್ಲಿ ಜನಪ್ರತಿನಿಧಿಗಳು ಏನು ಮಾಡುತ್ತಾರೆ, ಮಹಾನಗರ ಪಾಲಿಕೆ ಸರಿಯಾಗಿ ಕೆಲಸ ಮಾಡಿಸುತ್ತಿಲ್ಲ, ಗುತ್ತಿಗೆದಾರರು ಕೇವಲ ಹಣ ಮಾಡಲು ನೋಡುತ್ತಾರೆ ಎಂಬ ಆರೋಪಗಳು ಕೇಳಿಬರುತ್ತಿರುತ್ತದೆ.

ಗುಂಡಿಗಳು ಮತ್ತು ರಸ್ತೆಗಳ ದುಸ್ಥಿತಿಯಿಂದಾಗಿ ಜನರು ಗಂಭೀರ ಗಾಯಗೊಂಡರೆ ಅಥವಾ ಸಾವು ಸಂಭವಿಸುವುದನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್, ಈ ಬಗ್ಗೆ ಯಾವುದೇ ನಾಗರಿಕರು ನ್ಯಾಯವ್ಯಾಪ್ತಿಯ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಎಫ್ಐಆರ್ ದಾಖಲಿಸಲು ಮುಂದಾದರೆ ಪೊಲೀಸ್ ಠಾಣೆಗಳು ಕಡ್ಡಾಯವಾಗಿ ದೂರು ದಾಖಲಿಸಿಕೊಳ್ಳಿ ಎಂದು ಆದೇಶ ನೀಡಿದೆ. 

ರಸ್ತೆಗಳು ಮತ್ತು ಹೊಂಡಗಳ ಕೆಟ್ಟ ಸ್ಥಿತಿಯಿಂದಾಗಿ ಗಂಭೀರವಾದ ಗಾಯ ಅಥವಾ ಸಾವಿನ ಕಾರಣಕ್ಕಾಗಿ ನಾಗರಿಕರು ಎಫ್‌ಐಆರ್‌ಗಳನ್ನು ದಾಖಲಿಸಲು ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿದರೂ ಸಹ, ಕೆಲವು ಸುದ್ದಿ ವರದಿಗಳ ಹಿನ್ನೆಲೆಯಲ್ಲಿ ಗೃಹ ಇಲಾಖೆಯನ್ನು ಪ್ರತಿವಾದಿಯನ್ನಾಗಿ ಮಾಡಲು ನಾವು ಅನುಮತಿ ನೀಡುತ್ತೇವೆ. ಹೆಚ್ಚಿನ ಪ್ರಕರಣಗಳಲ್ಲಿ ಅಧಿಕಾರಿಗಳು ನಾಗರಿಕರಿಗೆ ಸ್ಪಂದಿಸುತ್ತಿಲ್ಲ ಅಥವಾ ಎಫ್‌ಐಆರ್‌ಗಳನ್ನು ದಾಖಲಿಸುತ್ತಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರ ವಿಭಾಗೀಯ ಪೀಠವು ಕೋರಮಂಗಲದ ವಿಜಯನ್ ಮೆನನ್ ಮತ್ತು ಇತರ ಮೂವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಆಲಿಸಿದ ನಂತರ ನೀಡಿದ ಆದೇಶದಲ್ಲಿ ಆಕ್ಷೇಪ ವ್ಯಕ್ತಪಡಿಸಿದೆ. 

ಫೆಬ್ರವರಿ 6, 2020 ರಂದು ತನ್ನ ಹಿಂದಿನ ಆದೇಶವನ್ನು ಉಲ್ಲೇಖಿಸಿದ ಹೈಕೋರ್ಟ್,  ರಸ್ತೆಗಳ ಕಳಪೆ ಸ್ಥಿತಿಯಿಂದ ಉಂಟಾದ ಜೀವಹಾನಿ ಅಥವಾ ಗಾಯಗಳಾದರೆ ನಾಗರಿಕರು ಪರಿಹಾರವನ್ನು ಪಡೆಯಲು ಅರ್ಹರಾಗಿರುತ್ತಾರೆ ಎಂದು ಹೇಳಿದೆ. ಇಂತಹ ಪರಿಹಾರ ಕೋರಿ ಅರ್ಜಿಗಳು ಬಂದಿವೆಯೇ, ಎಷ್ಟು ಬಂದಿವೆ ಹಾಗೂ ಅಂತವರಿಗೆ ಪರಿಹಾರ ನೀಡಲಾಗಿದೆಯೇ ಎಂದು ಅಂಕಿಅಂಶಗಳನ್ನು ನೀಡುವಂತೆ ಇದೇ ಸಂದರ್ಭದಲ್ಲಿ ಬಿಬಿಎಂಪಿಗೆ ಸೂಚಿಸಿತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com