ಶಿಗ್ಗಾವಿಯಲ್ಲಿ ಸಾರ್ವಜನಿಕರಿಂದ ಅಹವಾಲು ಆಲಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಶಿಗ್ಗಾವಿಯಲ್ಲಿ ಸಾರ್ವಜನಿಕರಿಂದ ಅಹವಾಲು ಆಲಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಳಗಾವಿ ಗಡಿ ವಿವಾದದಲ್ಲಿ ಎಂಇಎಸ್ ಪುಂಡಾಟಿಕೆಯನ್ನು ನಿಯಂತ್ರಿಸುವುದು ಹೇಗೆ ಎಂದು ನಮಗೆ ಗೊತ್ತಿದೆ: ಸಿಎಂ ಬೊಮ್ಮಾಯಿ

ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದದಲ್ಲಿ ಅನಗತ್ಯವಾಗಿ ಮೂಗು ತೂರಿಸಿಕೊಂಡು ಬರುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ (MES) ಪುಂಡಾಟಿಕೆಯನ್ನು ಹದ್ದುಬಸ್ತಿನಲ್ಲಿಡುವುದು ಹೇಗೆ ಎಂದು ಗೊತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
Published on

ಹಾವೇರಿ: ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದದಲ್ಲಿ ಅನಗತ್ಯವಾಗಿ ಮೂಗು ತೂರಿಸಿಕೊಂಡು ಬರುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ (MES) ಪುಂಡಾಟಿಕೆಯನ್ನು ಹದ್ದುಬಸ್ತಿನಲ್ಲಿಡುವುದು ಹೇಗೆ ಎಂದು ಗೊತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅವರು ಇಂದು ಹಾವೇರಿ ಜಿಲ್ಲೆಯ ತಮ್ಮ ಸ್ವಕ್ಷೇತ್ರ ಶಿಗ್ಗಾಂವಿಯಲ್ಲಿ ಸಾರ್ವಜನಿಕರಿಂದ ಕುಂದುಕೊರತೆಗಳನ್ನು ಆಲಿಸಿ ಅಹವಾಲು ಸ್ವೀಕರಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕಳೆದ 50 ವರ್ಷಗಳಿಂದ ಎಂಇಎಸ್ ಮಾಡಿಕೊಂಡು ಬರುತ್ತಿರುವ ದುರಭಿಮಾನವನ್ನು ನಿಯಂತ್ರಣ ಮಾಡುವುದು ಹೇಗೆ ಎಂದು ಕರ್ನಾಟಕಕ್ಕೆ ಗೊತ್ತಿದೆ. ಎಂಇಎಸ್ ಪುಂಡಾಟಿಕೆ ಇಂದು ನಿನ್ನೆಯದಲ್ಲ, ಕಳೆದ 50 ವರ್ಷಗಳಿಂದ ಮಾಡುತ್ತಾ ಬಂದಿದೆ. ಅವರ ರಾಜಕೀಯವನ್ನು ನಿಯಂತ್ರಣ ಮಾಡುವುದು ನಮಗೆ ಗೊತ್ತಿದೆ ಎಂದರು.

ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ವಿಚಾರವನ್ನು ಬಿಜೆಪಿ ರಾಜಕೀಯ ಮಾಡುತ್ತಿದೆ ಎಂಬ ಡಿ ಕೆ ಶಿವಕುಮಾರ್ ಹೇಳಿಕೆ ಸರಿಯಲ್ಲ. ಜವಾಬ್ದಾರಿಯುತ ಪ್ರತಿಪಕ್ಷದ ನಾಯಕರಾಗಿ ಅವರು ಮತ್ತು ಸಿದ್ದರಾಮಯ್ಯನವರು ಆಲೋಚನೆ ಮಾಡಿ ಮಾತನಾಡಬೇಕು. ಅದೊಂದು ಆಕಸ್ಮಿಕ ಘಟನೆ, ಪ್ರೆಶರ್ ಕುಕ್ಕರ್ ನಿಂದ ಆಗಿದ್ದು ಎಂದು ಹೇಳುತ್ತಾರೆ, ಅದನ್ನು ಸಿದ್ದರಾಮಯ್ಯ ಸಮರ್ಥಿಸುತ್ತಾರೆ, ರಾಜಕೀಯ ನಾಯಕರು ಇಂತಹ ಹೇಳಿಕೆ ಕೊಟ್ಟರೆ ಹೇಗೆ ಎಂದು ಸಿಎಂ ಬೊಮ್ಮಾಯಿ ಕೇಳಿದರು.

ನಾಳೆಯಿಂದ ಚಳಿಗಾಲ ಅಧಿವೇಶನ: ಬೆಳಗಾವಿಯ ಸುವರ್ಣ ಸೌಧದಲ್ಲಿ ನಾಳೆ ಆರಂಭವಾಗುವ ಚಳಿಗಾಲ ವಿಧಾನಮಂಡಲ ಅಧಿವೇಶನದಲ್ಲಿ ಹಲವು ಪ್ರಮುಖ ವಿಷಯಗಳು ಚರ್ಚೆಗೆ ಬರಲಿವೆ. ಎಸ್ ಸಿ-ಎಸ್ ಟಿ ಮೀಸಲಾತಿ ಜಾರಿ ಮಸೂದೆ ಚರ್ಚೆಯಾಗಲಿದೆ. ಉತ್ತರ ಕರ್ನಾಟಕ ಭಾಗದ ಪ್ರಮುಖ ವಿಚಾರಗಳು ಕೂಡ ಚರ್ಚೆಗೆ ಬರಲಿದ್ದು ಸರ್ಕಾರ ಉತ್ತರ ನೀಡಲಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com