ಮುಂದಿನ ಬಜೆಟ್‌ನಲ್ಲಿ ಮಹಿಳೆಯರಿಗಾಗಿ ವಿಶೇಷ ಕಲ್ಯಾಣ ಯೋಜನೆಗೆ ಸರ್ಕಾರ ಸಿದ್ಧತೆ!

2023ರ ವಿಧಾನಸಭಾ ಚುನಾವಣೆಗೆ ಮಹಿಳಾ ಮತದಾರರ ಓಲೈಸುವ ಉದ್ದೇಶದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಾರಿಯ ರಾಜ್ಯ ಬಜೆಟ್ ನಲ್ಲಿ ಮಹಿಳೆಯರಿಗಾಗಿ ವಿಶೇಷ ಕಲ್ಯಾಣ ಯೋಜನೆ ರೂಪಿಸಲು ಸಿದ್ಧತೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಚಿತ್ರದುರ್ಗ: 2023ರ ವಿಧಾನಸಭಾ ಚುನಾವಣೆಗೆ ಮಹಿಳಾ ಮತದಾರರ ಓಲೈಸುವ ಉದ್ದೇಶದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಾರಿಯ ರಾಜ್ಯ ಬಜೆಟ್ ನಲ್ಲಿ ಮಹಿಳೆಯರಿಗಾಗಿ ವಿಶೇಷ ಕಲ್ಯಾಣ ಯೋಜನೆ ರೂಪಿಸಲು ಸಿದ್ಧತೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ವೀರ ವನಿತೆ ಒನಕೆ ಓಬವ್ವ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಮುಖ್ಯಮಂತ್ರಿಗಳು ಸರಣಿ ಕಾರ್ಯಕ್ರಮಗಳನ್ನು ಘೋಷಿಸಿದರು. 2023ರ ಮುಂದಿನ ಬಜೆಟ್‌ನಲ್ಲಿ ಮಹಿಳೆಯರಿಗಾಗಿ ವಿಶೇಷ ಕಲ್ಯಾಣ ಯೋಜನೆ ಜಾರಿಗೊಳಿಸಿ ಒನಕೆ ಓಬವ್ವ ಹೆಸರಿನ ಅಭಿವೃದ್ಧಿ ನಿಗಮ ಆರಂಭಿಸುವುದಾಗಿ ಹೇಳಿದರು.

ಚಿತ್ರದುರ್ಗದಲ್ಲಿ ಓಬವ್ವನ ಹೆಸರಿನಲ್ಲಿ ಮಹಿಳಾ ಕಾಲೇಜು ಸ್ಥಾಪಿಸಲಾಗುವುದು, ಒನಕೆ ಓಬವ್ವ ಅವರ ಜೀವನ ಕುರಿತು ಸಂಶೋಧನೆ ಮತ್ತು ಅಧ್ಯಯನ ಕೇಂದ್ರ ಸ್ಥಾಪಿಸಲು ಒನಕೆ ಓಬವ್ವ ಟ್ರಸ್ಟ್‌ಗೆ 80 ಎಕರೆ ಭೂಮಿಯನ್ನು ಮಂಜೂರು ಮಾಡಲಾಗುವುದು ಎಂದು ಭರವಸೆ ನೀಡಿದರು.

ಛಲವಾದಿ ಸಮುದಾಯ ಎದುರಿಸುತ್ತಿರುವ ಭೂ ಮಾಲಿಕತ್ವ ಸಮಸ್ಯೆ ಹಾಗೂ ಉದ್ಯೋಗ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದರು.

"ಓಬವ್ವ ತನ್ನ ಶೌರ್ಯಕ್ಕೆ ಮಾತ್ರವಲ್ಲ, ಅವರ ತ್ಯಾಗ, ನಿಷ್ಠೆ ಮತ್ತು ತನ್ನ ರಾಜ್ಯ, ಭೂಮಿ ಮತ್ತು ಪತಿಗೆ ಗೌರವವನ್ನು ಹೊಂದಿದ್ದರು, ಇದು ಇತಿಹಾಸ ಪುಸ್ತಕಗಳಲ್ಲಿ ದಾಖಲಾಗಿದೆ. ಒನಕೆ ಓಬವ್ವನ ಜೀವನದಿಂದ ಇಂದಿನ ಯುವಜನತೆ ಪಾಠ ಕಲಿತು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ಸಮಾಜದ ಎಲ್ಲ ವರ್ಗಗಳ ಅದರಲ್ಲೂ ವಿಶೇಷವಾಗಿ ಎಸ್‌ಸಿ/ಎಸ್‌ಟಿ ಸಮುದಾಯಗಳ ಶಿಕ್ಷಣ ಮತ್ತು ಉದ್ಯೋಗಕ್ಕೆ ಸರ್ಕಾರ ಒತ್ತು ನೀಡುತ್ತಿದೆ ಎಂದು ಹೇಳಿದರು.

ಇದರ ಅಂಗವಾಗಿ 100 ಅಂಬೇಡ್ಕರ್ ವಸತಿ ನಿಲಯಗಳು ಮತ್ತು 50 ಕನಕದಾಸ ವಸತಿ ನಿಲಯಗಳನ್ನು ಸ್ಥಾಪಿಸಲಾಗಿದೆ. ಉದ್ಯೋಗ ಸೃಷ್ಟಿ ಕುರಿತು 224 ವಿಧಾನಸಭಾ ಕ್ಷೇತ್ರಗಳಲ್ಲಿ ತಲಾ 100 ಯುವಕರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಮತ್ತು ಅವರ ಸ್ವಯಂ ಉದ್ಯೋಗಕ್ಕೆ ಆರ್ಥಿಕ ನೆರವು ನೀಡಲಾಗುತ್ತಿದೆ ಎಂದರು.

ಅಂಬೇಡ್ಕರ್ ಅವರ ಬೋಧನೆಗಳನ್ನು ಅನುಸರಿಸುವವರು ನಿಜವಾದ ರಾಷ್ಟ್ರವಾದಿಗಳು, ನಾನು ಬುದ್ಧ, ಬಸವಣ್ಣ, ಅಂಬೇಡ್ಕರ್ ಮತ್ತು ವಾಲ್ಮೀಕರ ಚಿಂತನೆಗಳನ್ನು ನಂಬುತ್ತೇನೆಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com