ಮಲ್ಲಿಕಾರ್ಜುನ ಖರ್ಗೆಗೆ ಬೆಂಗಳೂರು ಪ್ರೆಸ್‍ಕ್ಲಬ್ 'ವರ್ಷದ ವ್ಯಕ್ತಿ' ಪ್ರಶಸ್ತಿ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಗಳೂರು ಪ್ರೆಸ್‌ ಕ್ಲಬ್‌ನ 2022ನೇ ಸಾಲಿನ ‘ವರ್ಷದ ವ್ಯಕ್ತಿ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಗಳೂರು ಪ್ರೆಸ್‌ ಕ್ಲಬ್‌ನ 2022ನೇ ಸಾಲಿನ ‘ವರ್ಷದ ವ್ಯಕ್ತಿ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಇನ್ನು ಬೆಂಗಳೂರು ಪ್ರೆಸ್‍ಕ್ಲಬ್ ವರ್ಷದ ವ್ಯಕ್ತಿ ‘ವಿಶೇಷ ಪ್ರಶಸ್ತಿ’ಗೆ ಬೃಹತ್‌ ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿ ಹಾಗೂ ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಭಾಜನರಾಗಿದ್ದಾರೆ.

2022ನೇ ಸಾಲಿನ ಪ್ರೆಸ್‌ಕ್ಲಬ್‌ ‘ವಾರ್ಷಿಕ ಪ್ರಶಸ್ತಿ’ಗೆ ಶಿವಾನಂದ ತಗಡೂರು ಹಾಗೂ ಓಂಕಾರ ಕಾಕಡೆ ಸೇರಿದಂತೆ 33 ಮಂದಿಯನ್ನು ಆಯ್ಕೆ ಮಾಡಲಾಗಿದೆ.

ಡಿಸೆಂಬರ್ 31 ರಂದು ಕಬ್ಬನ್ ಪಾರ್ಕ್ ನಲ್ಲಿರುವ ಪ್ರೆಸ್ ಕ್ಲಬ್ ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com