ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಮಗಳನ್ನು ಕೊಂದು ತಾಯಿ ಆತ್ಮಹತ್ಯೆ ಯತ್ನ

ಅಂಗವೈಕಲ್ಯತೆಯಿಂದ ಬಳಲುತ್ತಿದ್ದ 10 ವರ್ಷದ ಮಗಳನ್ನು ಕೊಂದು ತಾಯಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬ್ಯಾಡರಹಳ್ಳಿಯಲ್ಲಿ ನಡೆದಿದೆ.
Published on

ಬೆಂಗಳೂರು: ಅಂಗವೈಕಲ್ಯತೆಯಿಂದ ಬಳಲುತ್ತಿದ್ದ 10 ವರ್ಷದ ಮಗಳನ್ನು ಕೊಂದು ತಾಯಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬ್ಯಾಡರಹಳ್ಳಿಯಲ್ಲಿ ನಡೆದಿದೆ.

ಪ್ರಿಯಾಂಕಾ (10) ಕೊಲೆಯಾದ ಬಾಲಕಿ. ಆತ್ಮಹತ್ಯೆಗೆ ಯತ್ನಿಸಿರುವ ತಾಯಿ ಸುಮಾ (28) ಅವರನ್ನು  ಸಹೋದರಿ ಮತ್ತು ನೆರೆಹೊರೆಯವರು  ರಕ್ಷಿಸಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸುಂಕದಕಟ್ಟೆ ಪ್ರಸನ್ನ ಬಡಾವಣೆಯ ಸುಮಾ, ನಂಜಪ್ಪ ಅವರನ್ನು ಮದುವೆಯಾಗಿದ್ದರು. ದಂಪತಿಗೆ ಪ್ರಿಯಾಂಕಾ ಸೇರಿ ಇಬ್ಬರು ಮಕ್ಕಳಿದ್ದರು. ಎರಡು ವರ್ಷದ ಹಿಂದೆ ಮಗ ತೀರಿಕೊಂಡಿದ್ದ. ನಂತರ, ಪತಿ ಸಹ ಸಾವನ್ನಪ್ಪಿದ್ದರು

ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಸುಮಾ, ಅದರಿಂದ ಬಂದ ವೇತನದಲ್ಲಿ ಜೀವನ ನಿರ್ವಹಣೆ ಮಾಡುತ್ತಿದ್ದರು. ಮಗಳು ಪ್ರಿಯಾಂಕಾಗೆ ಅಂಗವೈಕಲ್ಯವಿತ್ತು, ಹೀಗಾಗಿ ಆಕೆಯನ್ನು ಯಾರಾದರೂ ಒಬ್ಬರು ನೋಡಿಕೊಳ್ಳಬೇಕಾಗಿತ್ತು. ಇದರಿಂದ ಸುಮಾ ಕೆಲಸಕ್ಕೆ ಹೋಗುವುದು ಕಷ್ಟವಾಗಿತ್ತು ಎನ್ನಲಾಗಿದೆ.

ಸಂಬಂಧಿಕರು ಹಾಗೂ ಸ್ಥಳೀಯರ ಹೇಳಿಕೆ ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸುಮಾ ಅವರು ಸದ್ಯ ಹೇಳಿಕೆ ನೀಡುವ ಸ್ಥಿತಿಯಲ್ಲಿಲ್ಲ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ನಂತರ ವೈದ್ಯರ ಸಲಹೆ ಪಡೆದು ಹೇಳಿಕೆ ಪಡೆಯಲಾಗುವುದು’ ಎಂದು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com