34 ಸಕ್ಕರೆ ಕಾರ್ಖಾನೆಗಳು 45 ಲಕ್ಷ ಲೀಟರ್ ಎಥೆನಾಲ್ ಉತ್ಪಾದಿಸಿವೆ: ಸಚಿವ ಶಂಕರ ಪಾಟೀಲ

ರಾಜ್ಯದ 34 ಸಕ್ಕರೆ ಕಾರ್ಖಾನೆಗಳು 45 ಲಕ್ಷ ಲೀಟರ್ ಎಥೆನಾಲ್ ಉತ್ಪಾದಿಸಿವೆ. ಕಾರ್ಖಾನೆಗಳು ಇಂತಹ ಉಪ ಉತ್ಪನ್ನಗಳಿಂದ ಬರುವ ಲಾಭದ ಶೇಕಡವಾರು ಮೊತ್ತವನ್ನು ಕಬ್ಬು ರೈತರಿಗೆ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಸಕ್ಕರೆ ಮತ್ತು ಜವಳಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಮಂಗಳವಾರ ಹೇಳಿದರು.
ಸಚಿವ ಶಂಕರ ಪಾಟೀಲ ಮುನೇನಕೊಪ್ಪ
ಸಚಿವ ಶಂಕರ ಪಾಟೀಲ ಮುನೇನಕೊಪ್ಪ

ಬೆಳಗಾವಿ: ರಾಜ್ಯದ 34 ಸಕ್ಕರೆ ಕಾರ್ಖಾನೆಗಳು 45 ಲಕ್ಷ ಲೀಟರ್ ಎಥೆನಾಲ್ ಉತ್ಪಾದಿಸಿವೆ. ಕಾರ್ಖಾನೆಗಳು ಇಂತಹ ಉಪ ಉತ್ಪನ್ನಗಳಿಂದ ಬರುವ ಲಾಭದ ಶೇಕಡವಾರು ಮೊತ್ತವನ್ನು ಕಬ್ಬು ರೈತರಿಗೆ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಸಕ್ಕರೆ ಮತ್ತು ಜವಳಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಮಂಗಳವಾರ ಹೇಳಿದರು.

ವಿಧಾನಪರಿಷತ್ತಿನಲ್ಲಿ ಎಂಎಲ್‌ಸಿ ರಮೇಶ್ ಮತ್ತು ಪ್ರಕಾಶ್ ರಾಥೋಡ್ ಅವರು, ಪಂಜಾಬ್, ಮಹಾರಾಷ್ಟ್ರ, ತೆಲಂಗಾಣ, ಉತ್ತರ ಪ್ರದೇಶ ಸೇರಿದಂತೆ ಇತರೆ ರಾಜ್ಯಗಳಲ್ಲಿ ಟನ್ ಕಬ್ಬಿಗೆ 3,500 ರೂ. ನೀಡಲಾಗುತ್ತಿದೆ. ಕರ್ನಾಟಕದಲ್ಲಿ 3,000 ರೂ.ಗಿಂತ ಕಡಿಮೆ ಬೆಲೆ ಇರುವುದು ಏಕೆ ಎಂದು ಪ್ರಶ್ನಿಸಿದರು. ಕಾರ್ಖಾನೆಗಳು ಕಬ್ಬು ಅಳೆಯುವಾಗಲೂ ರೈತರಿಗೆ ಮೋಸ ಮಾಡುತ್ತಿವೆ ಎಂದು ರಾಥೋಡ್ ಹೇಳಿದರು.

ಈ ವಿಚಾರದಲ್ಲಿ ಪಕ್ಷಾತೀತವಾಗಿ ಹಿರಿಯ ಎಂಎಲ್ಸಿಗಳಾದ ಲಕ್ಷ್ಮಣ ಸವದಿ, ಪ್ರಕಾಶ್ ಹುಕ್ಕೇರಿ, ಮರಿತಿಬ್ಬೇಗೌಡ, ಬಿ.ಕೆ.ಹರಿಪ್ರಸಾದ್ ಚರ್ಚೆಯಲ್ಲಿ ಪಾಲ್ಗೊಂಡರು.

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಅವರಿಗೆ ವಿಷಯದ ಕುರಿತು ಮಾತನಾಡಲು ಸಭಾಪತಿ ರಘುನಾಥ ರಾವ್ ಮಲ್ಕಾಪುರೆ ಅವಕಾಶ ನೀಡದಿದ್ದಾಗ ಪ್ರತಿಪಕ್ಷದ ಸದಸ್ಯರು ಸದನದ ಬಾವಿಗೆ ಇಳಿದರು.

ಈ ವೇಳೆ ಮಾತನಾಡಿದ ಸಚಿವ ಶಂಕರ ಪಾಟೀಲ ಅವರು, ರಾಜ್ಯದಲ್ಲಿಯೇ ಪ್ರಥಮ ಬಾರಿಗೆ 21 ಕಾರ್ಖಾನೆಗಳ ತೂಕದ ವ್ಯತ್ಯಾಸ ಪರಿಶೀಲಿಸಿ ಪಾರದರ್ಶಕತೆ ಕಾಪಾಡಲು ಇತ್ತೀಚೆಗೆ ದಾಳಿ ನಡೆಸಿದ್ದೇವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಬೆಳೆಗಾರರನ್ನು ವಂಚಿಸುತ್ತಿರುವ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆರಂಭಿಸಿದ್ದೇವೆ. ಕಡಿಮೆ ಬೆಲೆಯ ಮೇಲೆ, ಇತರ ರಾಜ್ಯಗಳು ರಾಜ್ಯ ಸಲಹಾ ಬೆಲೆ (ಎಸ್‌ಎಪಿ) ಬಿಲ್‌ಗಳನ್ನು ಜಾರಿಗೆ ತಂದಿದ್ದು, ಅದು ಬೆಳೆಗಾರರಿಗೆ ಹೆಚ್ಚಿನ ಬೆಲೆಯನ್ನು ನೀಡಲು ಅನುವು ಮಾಡಿಕೊಡುತ್ತದೆ ಎಂದು ಹೇಳಿದರು.

ಕರ್ನಾಟಕದಲ್ಲಿ ಇದೇ ರೀತಿಯ ಮಸೂದೆಯನ್ನು ಇನ್ನೂ ಅಂಗೀಕರಿಸದ ಕಾರಣ, ರಾಜ್ಯವು ನ್ಯಾಯಯುತ ಮತ್ತು ಲಾಭದಾಯಕ ಬೆಲೆಯನ್ನು (ಎಫ್‌ಆರ್‌ಪಿ) ಜಾರಿಗೆ ತಂದಿದೆ ಅದನ್ನು ಎಲ್ಲಾ ಕಾರ್ಖಾನೆಗಳು ಪಾಲಿಸುತ್ತಿವೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com