ಬೆಂಗಳೂರು: ಅಕಾಲಿಕ ಮರಣ ಕಂಡ ಕನ್ನಡದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಜೀವನಚರಿತ್ರೆ, ಸಮಾಜ ಸೇವೆಯ ಮೌಲ್ಯಗಳನ್ನು ಸಾರುವ ಪಠ್ಯವನ್ನು ಶಾಲಾ ಮಕ್ಕಳ ಪಠ್ಯಕ್ರಮದಲ್ಲಿ ಅಳವಡಿಸಿಕೊಳ್ಳಬೇಕೆಂಬ ಬೇಡಿಕೆ ಕಳೆದೊಂದು ವರ್ಷದಿಂದ ಕೇಳಿಬರುತ್ತಲೇ ಇದೆ.
ಈ ನಿಟ್ಟಿನಲ್ಲಿ ಸರ್ಕಾರ ಇನ್ನೂ ತೀರ್ಮಾನ ತೆಗೆದುಕೊಂಡಿಲ್ಲ. ಇದೀಗ ಬೆಂಗಳೂರು ವಿಶ್ವವಿದ್ಯಾಲಯ ಈಗ 3ನೇ ವರ್ಷದ ಬಿ.ಕಾಂ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯ ಪಠ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಅವರಿಗೆ ಸಂಬಂಧಪಟ್ಟ ಪಠ್ಯವೊಂದನ್ನು ಅಳವಡಿಸುತ್ತಿದೆ. ಈ ಮೂಲಕ ಕನ್ನಡ ನಾಡಿನ ನಟನೊಬ್ಬನಿಗೆ ಗೌರವ ಸಂದಿದೆ.
Bangalore University BCom third year students will now study a chapter (Kannada language text book) on #PuneethRajkumar . pic.twitter.com/4a8m9aj2NW
— Ashwini M Sripad/ಅಶ್ವಿನಿ ಎಂ ಶ್ರೀಪಾದ್
Advertisement