ಮತ್ತೆ ಶುರುವಾಯ್ತು ಕೋವಿಡ್ ಆತಂಕ: ಮುಖ್ಯಮಂತ್ರಿ ನೇತೃತ್ವದಲ್ಲಿಂದು ತುರ್ತು ಸಭೆ, ಕ್ರಿಸ್'ಮಸ್, ಹೊಸ ವರ್ಷಾಚರಣೆಗೆ ನಿರ್ಬಂಧ?

ಹೊರ ರಾಷ್ಟ್ರಗಳಲ್ಲಿ ಕೊರೋನಾ ಸೋಂಕು ಉಲ್ಬಣಗೊಂಡಿದ್ದು, ಈ ಬೆಳವಣಿಗೆ ರಾಜ್ಯದಲ್ಲೂ ಆತಂಕವನ್ನು ಹೆಚ್ಚಿಸಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉನ್ನತ ಮಟ್ಟದ ಸಭೆ ಕರೆದಿದ್ದಾರೆ.
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ
Updated on

ಬೆಂಗಳೂರು: ಹೊರ ರಾಷ್ಟ್ರಗಳಲ್ಲಿ ಕೊರೋನಾ ಸೋಂಕು ಉಲ್ಬಣಗೊಂಡಿದ್ದು, ಈ ಬೆಳವಣಿಗೆ ರಾಜ್ಯದಲ್ಲೂ ಆತಂಕವನ್ನು ಹೆಚ್ಚಿಸಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉನ್ನತ ಮಟ್ಟದ ಸಭೆ ಕರೆದಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವ ಡಾ.ಕೆ.ಸುಧಾಕರ್ ಅವರು, ಮುಖ್ಯಮಂತ್ರಿಗಳ ನೇತೃತ್ವದಲ್ಲಿ ತುರ್ತು ಸಭೆ ಕರೆಯಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೂಡ ಎಲ್ಲಾ ರಾಜ್ಯಗಳ ಆರೋಗ್ಯಾಧಿಕಾರಿಗಳು ಮತ್ತು ತಾಂತ್ರಿಕ ಸಮತಿ ಸದಸ್ಯರೊಂದಿಗೆ ಸಭೆ ಕರೆದಿದ್ದಾರೆ. ಅವರ ನಿರ್ದೇಶನಗಳ ಆಧಾರದ ಮೇಲೆ ನಮ್ಮ ಸರ್ಕಾರ ಎಲ್ಲಾ ಶಿಫಾರಸು ಹಾಗೂ ಮಾರ್ಗಸೂಚಿನಗಳನ್ನು ಅನುಸರಿಸುತ್ತದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಕೋವಿಡ್ ಸೋಂಕನ್ನು ಯಾವ ರೀತಿ ನಿಯಂತ್ರಣ ಮಾಡಬೇಕು. ಯಾವ ರೀತಿಯ ಟೆಸ್ಟ್ ಗಳನ್ನು ಹೆಚ್ಚಳ ಮಾಡಬೇಕು ಎನ್ನುವ ಕುರಿತು ಚರ್ಚಿಸಲು ಇಂದು ಸುವರ್ಣ ವಿಧಾನಸೌಧದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆ ಕರೆಯಲಾಗಿದೆ. ಸಭೆಯಲ್ಲಿ ರಾಜ್ಯದಲ್ಲಿ ಕೋವಿಡ್ ಸೋಂಕು ಹರಡುವಿಕೆ ತಡೆಗಟ್ಟುವ ಕ್ರಮಗಳ ಕುರಿತು ವಿಸ್ತೃತವಾಗಿ ಚರ್ಚೆ ನಡೆಸಲಾಗುತ್ತದೆ ಎಂದು ತಿಳಿಸಿದರು.

ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ಸುಧಾಕರ್ ಅವರು, ವಿಶ್ವದಾದ್ಯಂತ ಕೆಲ ದೇಶಗಳಲ್ಲಿ ಕೋವಿಡ್ ಪ್ರಕರಣಗಳು ದಿಢೀರ್ ಹೆಚ್ಚಾಗುತ್ತಿರುವುದು ನಮಗೆ ಎಚ್ಚರಿಕೆಯ ಗಂಟೆಯಾಗಿದೆ. ರಾಜ್ಯದಲ್ಲಿ ಈವರೆಗೂ ಕೇವಲ ಶೇ.20ರಷ್ಟು ಜನರು ಮಾತ್ರ ಮುನ್ನೆಚ್ಚರಿಕೆ ಡೋಸ್ ಲಸಿಕೆ ಪಡೆದುಕೊಂಡಿದ್ದು, ಎಲ್ಲರೂ ತಪ್ಪದೇ ಮುನ್ನೆಚ್ಚರಿಕೆ ಡೋಸ್ ಲಸಿಕೆ ಪಡೆದುಕೊಂಡು ಈ ಹೋರಾಟದಲ್ಲಿ ಸರ್ಕಾರದ ಜೊತೆ ಕೈಜೋಡಿಸಬೇಕಾಗಿ ಮನವಿ ಮಾಡುತ್ತೇನೆಂದು ಹೇಳಿದ್ದರು.

ಕೋವಿಡ್ ನಿಂದ ಭಾರತೀಯರು ಸುರಕ್ಷಿತವಾಗಿದ್ದಾರೆ. ನಮ್ಮ ದೇಶದ ಶೇ.100ರಷ್ಟು ಜನಸಂಖ್ಯೆಯೂ ಎರಡು ಡೋಸ್ ಲಸಿಕೆಯನ್ನು ತೆಗೆದುಕೊಂಡಿದ್ದಾರೆ. ಬೂಸ್ಟರ್ ಡೋಸ್ ತೆಗೆದುಕೊಳ್ಳುವಂತೆ ನಾನು ಜನರಿಗೆ ಮನವಿ ಮಾಡುತ್ತೇನೆ. ಎಲ್ಲಾ ವಿಮಾನ ನಿಲ್ದಾಣಗಳಲ್ಲಿಯೂ ಮೇಲ್ವಿಚಾರಣೆ ಮಾಡಲಾಗುತ್ತಿದೆ. ಎಲ್ಲಾ ಸಕಾರಾತ್ಮಕ ಪ್ರಕರಣಗಳನ್ನು INSACOG ಗೆ ಕಳುಹಿಸಲಾಗುತ್ತಿದ್ದು, ಯಾವ ರೂಪಾಂತರಿ ವೈರಸ್ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com