ಶಿಕ್ಷಣದ ಡಿಜಿಟಲೀಕರಣಕ್ಕೆ ಸರ್ಕಾರ ಮುಂದು, ಕಳವಳ ವ್ಯಕ್ತಪಡಿಸಿದ ವಿದ್ಯಾರ್ಥಿಗಳು!

ನವೀಕೃತ ಮತ್ತು ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಶಿಕ್ಷಣ ಕ್ಷೇತ್ರವನ್ನು ಡಿಜಿಟಲೀಕಾರಣಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಶಿಕ್ಷಣದಲ್ಲಿ ತಂತ್ರಜ್ಞಾನದ ಅವಲಂಬನೆಯ ಬಗ್ಗೆ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರು ಕಳವಳ ವ್ಯಕ್ತಪಡಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ನವೀಕೃತ ಮತ್ತು ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಶಿಕ್ಷಣ ಕ್ಷೇತ್ರವನ್ನು ಡಿಜಿಟಲೀಕಾರಣಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಶಿಕ್ಷಣದಲ್ಲಿ ತಂತ್ರಜ್ಞಾನದ ಅವಲಂಬನೆಯ ಬಗ್ಗೆ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರು ಕಳವಳ ವ್ಯಕ್ತಪಡಿಸಿದ್ದಾರೆ.

ಆನ್'ಲೈನ್ ಹಾಗೂ ತಂತ್ರಜ್ಞಾನಗಳಿಗೆ ಹೋಲಿಸಿದರೆ ದೈಹಿಕ ತರಗತಿಗಳು ಅತ್ಯುತ್ತಮವಾಗಿದೆ ಎಂದು ವಿದ್ಯಾರ್ಥಿಗಳು ಹೇಳಿದ್ದು, ಶಾಲೆಯ ಸಮಯದಲ್ಲಿ ದೀರ್ಘಕಾಲದವರೆಗೆ ತಂತ್ರಜ್ಞಾನವನ್ನು ಬಳಸುವುದರಿಂದ ಮಕ್ಕಳ ಆರೋಗ್ಯದ ಪರಿಣಾಮಗಳ ಬಗ್ಗೆ ಪೋಷಕರು ಕಳವಳ ವ್ಯಕ್ತಪಡಿಸಿದ್ದಾರೆ.ಇದಲ್ಲದೆ, ತಂತ್ರಜ್ಞಾನವು ಮಕ್ಕಳ ಗಮನವನ್ನು ಕಡಿಮೆಗೊಳಿಸುತ್ತದೆ ಎಂದು ಶಿಕ್ಷಕರು ಹೇಳಿದ್ದಾರೆ,

ಇದು ಮಕ್ಕಳನ್ನು ಹೆಚ್ಚು ಅಶಿಸ್ತಿನ ಕಡೆಗೆ ಕರೆದೊಯ್ಯುತ್ತದೆ. ಡಿಜಿಟಲೀಕರಣದ ಕ್ರಮವು ಬಡ ಸಾಮಾಜಿಕ-ಆರ್ಥಿಕ ಹಿನ್ನೆಲೆಯಳ್ಳ ವಿದ್ಯಾರ್ಥಿಗಳು ಹಿಂದುಳಿಯುವಂತೆ ಮಾಡಲಿದೆ ಎಂದು ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮವು ಮಕ್ಕಳಿಗೆ ಮನರಂಜನೆ ಮತ್ತು ಸಂವಹನದ ಪ್ರಾಥಮಿಕ ಮೂಲವಾಗಿದೆ. ಇದು ವಿದ್ಯಾರ್ಥಿಗಳ ಯೋಗಕ್ಷೇಮ ಮತ್ತು ಶೈಕ್ಷಣಿಕ ಕಾರ್ಯಕ್ಷಮತೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂಬುದು ಈಗಾಗಲೇ ಸಾಬೀತಾಗಿದೆ. ಮಕ್ಕಳಲ್ಲಿ ಗಮನ ಕೊರತೆ, ಅನುಚಿತ ಭಾಷೆಯ ಬಳಕೆ, ವಯಸ್ಸಿಗೆ ಸೂಕ್ತವಲ್ಲದ ವಿಷಯಗಳಿಗೆ ಒಡ್ಡಿಕೊಳ್ಳುವುದು, ಸೈಬರ್-ಬೆದರಿಕೆ ಮಕ್ಕಳಲ್ಲಿ ಮಿತಿಮೀರಿದೆ ಎಂದು ಜೆ.ಪಿ.ನಗರದ ಏಕ್ಯ ಶಾಲೆಯ ಮುಖ್ಯಸ್ಥೆ ಶ್ರೀಪ್ರಿಯಾ ಉನ್ನಿಕೃಷ್ಣನ್ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com