ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಸದಿದ್ದಲ್ಲಿ ಸಿಎಂ ಮನೆಗೆ ಮುತ್ತಿಗೆ- ಕುರುಬೂರು ಶಾಂತಕುಮಾರ್

ಡಿಸೆಂಬರ್ 30ಕ್ಕೂ ಮುಂಚಿತವಾಗಿ ಪ್ರತಿ ಟನ್ ಕಬ್ಬಿಗೆ ರೂ. 3,500 ದರ ಸರ್ಕಾರ ಘೋಷಿಸಬೇಕು, ಇಲ್ಲವಾದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬೆಂಗಳೂರು ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಶನಿವಾರ ಎಚ್ಚರಿಕೆ ನೀಡಿದರು.
ಕುರುಬೂರು ಶಾಂತಕುಮಾರ್
ಕುರುಬೂರು ಶಾಂತಕುಮಾರ್

ಬೆಳಗಾವಿ: ಡಿಸೆಂಬರ್ 30ಕ್ಕೂ ಮುಂಚಿತವಾಗಿ ಪ್ರತಿ ಟನ್ ಕಬ್ಬಿಗೆ ರೂ. 3,500 ದರ ಸರ್ಕಾರ ಘೋಷಿಸಬೇಕು, ಇಲ್ಲವಾದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬೆಂಗಳೂರು ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಶನಿವಾರ ಎಚ್ಚರಿಕೆ ನೀಡಿದರು.

ಕಬ್ಬು ಬೆಳೆಗಾರರಿಗೆ ನ್ಯಾಯಯುತವಾಗಿ ಬೆಲೆ ಹೆಚ್ಚಳ ಮಾಡಲಾಗುವುದು ಮತ್ತು ಸಾಗಣೆ ವೆಚ್ಚ ಕಡಿಮೆಗೊಳಿಸಲಾಗುವುದು ಎಂದು ಮುಖ್ಯಮಂತ್ರಿ 10 ದಿನಗಳ ಹಿಂದೆ ನೀಡಿದ್ದ ಭರವಸೆಯನ್ನು ಪೂರ್ಣಗೊಳಿಸಬೇಕು, ಬೆಂಗಳೂರಿನಲ್ಲಿ ಕಳೆದ 33 ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಡಿಸೆಂಬರ್ 26 ರಿಂದ ಉಪವಾಸ ಸತ್ಯಾಗ್ರಹ ಆರಂಭಿಸಲು ನಿರ್ಧರಿಸಿದ್ದೇವೆ ಎಂದು ಅವರು ತಿಳಿಸಿದರು. 

ಕಳೆದ ನಾಲ್ಕು ತಿಂಗಳಿಂದ ಕಬ್ಬು ಅರೆಯುತ್ತಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಎಫ್‌ಆರ್‌ಪಿ ಪಾವತಿಸಿಲ್ಲ, ಅದನ್ನು 14 ದಿನಗಳಲ್ಲಿ ತೆರವುಗೊಳಿಸಬೇಕು, ಕೆಲವರು ಭಾಗಶಃ ಬಿಲ್ ಪಾವತಿಸಿ ಸಾವಿರಾರು ಕೋಟಿ ಬಾಕಿ ಉಳಿಸಿಕೊಂಡಿದ್ದಾರೆ. ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು. 

ಕಬ್ಬು ತೂಕ ಮಾಡುವಲ್ಲಿ ಸಕ್ಕರೆ ಕಾರ್ಖಾನೆಗಳಿಂದ ವಂಚನೆಯಾಗಿದೆ ಎಂದು ರೈತರು ನೀಡಿದ ದೂರುಗಳ ಆಧಾರದ ಮೇಲೆ ಸಕ್ಕರೆ ಆಯುಕ್ತರ ಕಚೇರಿ 21 ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ ನಡೆಸಿದ್ದು, ದಾಳಿ ಕುರಿತು ವರದಿಯನ್ನು ಬಿಡುಗಡೆ ಮಾಡಬೇಕು ಎಂದು ಅವರು ಹೇಳಿದರು. ಕಟಾವು ಮಾಡಿದ ಕಬ್ಬಿನ ಒಟ್ಟು ತೂಕದಲ್ಲಿ ಸಕ್ಕರೆ ಕಾರ್ಖಾನೆಗಳು ಅಕ್ರಮವಾಗಿ ಶೇ. 7ರಷ್ಟು ಕಡಿತಗೊಳಿಸುತ್ತಿವೆ. ಇಂತಹ ಅಕ್ರಮದ ವಿರುದ್ಧ  ಸಕ್ಕರೆ ಮತ್ತು ಕಬ್ಬು ಅಭಿವೃದ್ಧಿ ಆಯುಕ್ತರು  ಕ್ರಮ ಕೈಗೊಳ್ಳಬೇಕು ಎಂದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com