ಸುರತ್ಕಲ್ ನಲ್ಲಿ ವರ್ತಕ ಜಲೀಲ್ ಕೊಲೆ ಪ್ರಕರಣ: ಶೀಘ್ರದಲ್ಲೇ ಆರೋಪಿಗಳ ಬಂಧನ- ಸಿಎಂ ಬೊಮ್ಮಾಯಿ

ಸುರತ್ಕಲ್‌ನಲ್ಲಿ ಶನಿವಾರ ತಡರಾತ್ರಿ ನಡೆದ ಜಲೀಲ್ ಕೊಲೆ ಪ್ರಕರಣದ ತನಿಖೆಯನ್ನು ಪೊಲೀಸರು ಕೈಗೆತ್ತಿಕೊಂಡಿದ್ದು, ಘಟನೆಯ ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆ ಆಧಾರದಲ್ಲಿ ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ

ಮಂಗಳೂರು: ಸುರತ್ಕಲ್‌ನಲ್ಲಿ ಶನಿವಾರ ತಡರಾತ್ರಿ ನಡೆದ ಜಲೀಲ್ ಕೊಲೆ ಪ್ರಕರಣದ ತನಿಖೆಯನ್ನು ಪೊಲೀಸರು ಕೈಗೆತ್ತಿಕೊಂಡಿದ್ದು, ಘಟನೆಯ ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆ ಆಧಾರದಲ್ಲಿ ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೊಲೆ ನಡೆದಿರುವುದು ದುರದೃಷ್ಟಕರ. ಪ್ರಕರಣದ ಬಗ್ಗೆ ಪೊಲೀಸರು ಸೂಕ್ತ ಕ್ರಮ ಕೈಕೊಂಡಿದ್ದು, ತನಿಖೆ ಪ್ರಗತಿಯಲ್ಲಿದೆ. ಆರೋಪಿಗಳನ್ನು ಶೀಘ್ರ ಬಂಧಿಸಿ ವಿಚಾರಣೆಗೆ ಒಳಪಡಿಸಲಾಗುವುದು. ಬಳಿಕ ಘಟನೆಯ ಕಾರಣ, ಹಿನ್ನೆಲೆ ತಿಳಿಯಲಿದೆ ಎಂದರು.

ದಕ್ಷಿಣ ಕನ್ನಡ ಜಿಲ್ಲೆ ಸಹಿತ ಕರಾವಳಿಯಾದ್ಯಂತ ಜನತೆ ಶಾಂತಿ ಕಾಪಾಡಿಕೊಳ್ಳಬೇಕು. ಯಾವುದೇ ಊಹಾಪೋಹಗಳಿಗೆ ಕಿವಿಗೊಡಬಾರದು. ಪೊಲೀಸರು ಸ್ವತಂತ್ರವಾಗಿ ತನಿಖೆ ನಡೆಸುತ್ತಿದ್ದಾರೆ. ಈ ವೇಳೆ ಪೊಲೀಸರ ಮೇಲೆ ಯಾವುದೇ ಒತ್ತಡ ಹಾಕಬಾರದು ಎಂದು ಮುಖ್ಯಮಂತ್ರಿ ಹೇಳಿದರು.

ಸಮಾಜದಲ್ಲಿ ಹಿಂಸೆ ಪ್ರಾರಂಭ ಮಾಡುವವರನ್ನು ಹತ್ತಿಕ್ಕುವ ಅವಶ್ಯಕತೆ ಇದೆ. ಹಿಂಸೆಗೆ ಪ್ರಚೋದನೆ ನೀಡುವವರನ್ನು ಹತ್ತಿಕ್ಕುವುದು ಸಮಾಜ ಹಾಗೂ ಸರಕಾರದ ಕರ್ತವ್ಯವಾಗಿದೆ. ಪೊಲೀಸರು ಕೂಲಂಕಷವಾಗಿ ತನಿಖೆ ನಡೆಸುತ್ತಿದ್ದು, ತನಿಖೆಯಿಂದ ಸತ್ಯಾಸತ್ಯತೆ ಹೊರಬರಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com