
ವಿಜಯನಗರ: ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆಯೊಂದು ಸಾವನ್ನಪ್ಪಿರುವ ಘಟನೆ ವಿಜಯನಗರದಲ್ಲಿ ಭಾನುವಾರ ವರದಿಯಾಗಿದೆ.
ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಹೊಳಲು ಗ್ರಾಮದ ಸಮೀಪದ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಗಂಡು ಚಿರತೆ ಅಪಘಾತದಲ್ಲಿ ಸಾವನ್ನಪ್ಪಿದೆ.
ಚಿರತೆ ದೇಹ ನೋಡಿದ ಸ್ಥಳೀಯರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಚಿರತೆಯನ್ನು ಅಧಿಕಾರಿಗಳು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ತಿಂಗಳಲ್ಲಿ 2ನೇ ಚಿರತೆ ಸಾವು
ಈ ಹಿಂದೆ ಇದೇ ವಿಜಯನಗರದಲ್ಲಿ ಅಪರಿಚಿತ ವಾಹನ ಢಿಕ್ಕಿಯಾಗಿ ಮತ್ತೊಂದು ಚಿರತೆ ಸಾವನ್ನಪ್ಪಿತ್ತು. ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಶಿವಪುರ ಗ್ರಾಮದ ಹತ್ತಿರ ರಾಷ್ಟ್ರೀಯ ಹೆದ್ದಾರಿ 50ರ ರಸ್ತೆಯಲ್ಲಿ ರಸ್ತೆ ದಾಟಲು ಮುಂದಾಗಿದ್ದ ಚಿರತೆಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡ ಚಿರತೆ ಸ್ಥಳದಲ್ಲೇ ಸಾವನ್ನಪ್ಪಿತ್ತು.
ಶಿವಪುರ ಭಾಗದ ಕೂಡ್ಲಿಗಿ ಅರಣ್ಯ ವಲಯದಲ್ಲಿ ಎನ್ಆರ್ಇಜಿ ಕಾಮಗಾರಿ ಮಾಡಿಸಲು ಗಾರ್ಡ್ ನಾಗರಾಜ ಎಂಬುವರು ಕೂಲಿ ಕಾರ್ಮಿಕರನ್ನು ಕರೆದುಕೊಂಡು ಹೋಗುವಾಗ ಹೆದ್ದಾರಿ 50ರ ರಸ್ತೆಯಲ್ಲಿ ಚಿರತೆ ಸತ್ತು ಬಿದ್ದಿರುವುದನ್ನು ಕಂಡು ತಕ್ಷಣ ಕೂಡ್ಲಿಗಿ ವಲಯ ಅರಣ್ಯಾಧಿಕಾರಿಗಳ ಗಮನಕ್ಕೆ ತಂದಿದ್ದರು.
Advertisement