40% ಕಮಿಷನ್ ಆರೋಪ: ದಾಖಲೆ ಒದಗಿಸದಿದ್ದರೇ ಮುಂದಿನ ದಿನಗಳಲ್ಲಿ ಇನ್ನೂ ಕಷ್ಟವಾಗುತ್ತೆ: ಕೆಂಪಣ್ಣಗೆ ಮುನಿರತ್ನ ಎಚ್ಚರಿಕೆ

40% ಕಮಿಷನ್ ಆರೋಪಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಎದುರಿಸುತ್ತಿರುವ ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (Kempanna) ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆ ಒದಗಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಕಷ್ಟವಾಗುತ್ತೆ. ದಾಖಲೆ ಕೊಡಲಿಲ್ಲವೆಂದರೆ ಎರಡು ವರ್ಷ ಶಿಕ್ಷೆ ಆಗುತ್ತದೆ ಎಂದು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಎಚ್
ಗುತ್ತಿಗೆದಾರ ಸಂಘದ ಅಧ್ಯಕ್ಷ ಕೆಂಪಯ್ಯ, ತೋಟಗಾರಿಕೆ ಸಚಿವ ಎನ್ ಮುನಿರತ್ನ (ಸಂಗ್ರಹ ಚಿತ್ರ)
ಗುತ್ತಿಗೆದಾರ ಸಂಘದ ಅಧ್ಯಕ್ಷ ಕೆಂಪಯ್ಯ, ತೋಟಗಾರಿಕೆ ಸಚಿವ ಎನ್ ಮುನಿರತ್ನ (ಸಂಗ್ರಹ ಚಿತ್ರ)

ಕೋಲಾರ: 40% ಕಮಿಷನ್ ಆರೋಪಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಎದುರಿಸುತ್ತಿರುವ ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (Kempanna) ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆ ಒದಗಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಕಷ್ಟವಾಗುತ್ತೆ. ದಾಖಲೆ ಕೊಡಲಿಲ್ಲವೆಂದರೆ ಎರಡು ವರ್ಷ ಶಿಕ್ಷೆ ಆಗುತ್ತದೆ ಎಂದು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಎಚ್ಚರಿಕೆ ಕೊಟ್ಟಿದ್ದಾರೆ.

ಕೋಲಾರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುನಿರತ್ನ ಅವರು, ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (Kempanna) ಆರೋಪ ಮಾಡಿದ ಮೇಲೆ ದಾಖಲೆ ಒದಗಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಇನ್ನೂ ಕಷ್ಟವಾಗುತ್ತೆ. ದಾಖಲೆ ಕೊಡಲಿಲ್ಲವೆಂದರೆ ಎರಡು ವರ್ಷ ಶಿಕ್ಷೆ ಆಗುತ್ತದೆ. ಆರೋಪ ಮಾಡಿ ಒಂದು ವರ್ಷ ಆಗಿದೆ, ಅದಕ್ಕೆ ದಾಖಲೆ ನೀಡಬೇಕು, ಆದರೆ ಒದಗಿಸಿಲ್ಲ. ಹೀಗಾಗಿ ನ್ಯಾಯಾಲಯದಿಂದ ಸಮನ್ಸ್ ಬಂತು, ಸಮನ್ಸ್ ಬಂದು ದಾಖಲೆ ಕೊಡದಿದ್ದರಿಂದ ವಾರೆಂಟ್ ಬಂತು. ಅದನ್ನು ಅರ್ಥ ಮಾಡಿಕೊಳ್ಳಬೇಕು. ಆರೋಪ ಮಾಡಿದ ಮೇಲೆ ಜೀರ್ಣ ಮಾಡಿಕೊಳ್ಳುವ ಶಕ್ತಿ ಇರಬೇಕು ಎಂದರು.

ರಾಜರಾಜೇಶ್ವರಿ ಕ್ಷೇತ್ರದಲ್ಲಿ 10 ಸಾವಿರ ಕೋಟಿ ಖರ್ಚು, ಹಾಗೂ 40% ಕಮಿಷನ್ ಎಲ್ಲಿ ಆಗಿದೆ ತೋರಿಸಬೇಕು. ದಾಖಲೆ ತೋರಿಸುವವರೆಗೂ ನಾನು ಬಿಡುವುದಿಲ್ಲ. ಆದಷ್ಟು ಬೇಗ ಈ ಪ್ರಕರಣ ಮುಗಿಸಲು ಕೋರ್ಟಿಗೆ ಅರ್ಜಿ ಸಲ್ಲಿಕೆ ಮಾಡುವೆ. ಇದು ಇಷ್ಟಕ್ಕೆ ನಿಲ್ಲುವುದಿಲ್ಲ, ಇನ್ನು ಮುಂದೆ ಇದೆ. ಖಂಡಿತವಾಗಲೂ ಹೇಳುತ್ತಿರುವೆ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ಅವರು ಸಿದ್ದರಾಮಯ್ಯ ಅವರ ಮಾತು ಕೇಳುತ್ತಾರೆ. ಹಾಗಿದ್ದರೆ ಅಸೆಂಬ್ಲಿ ನಡೆಯುತ್ತಿದೆ ಸಿದ್ದರಾಮಯ್ಯ ಅವರಿಗೆ ದಾಖಲೆಗಳ ಕೊಟ್ಟು ಅಸೆಂಬ್ಲಿಯಲ್ಲಿ ಧ್ವನಿ ಎತ್ತಲಿ. ಕಾನೂನು ಚೌಕಟ್ಟಿನಲ್ಲಿ ಏನೂ ಕ್ರಮ ಕೈಗೊಳ್ಳಬೇಕು ಅದೆಲ್ಲ ಮಾಡುವೆ ಎಂದು ಮುನಿರತ್ನ ತಿಳಿಸಿದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com