ಇಂದು ಮಧ್ಯಾಹ್ನ ದೆಹಲಿಗೆ ತೆರಳಿ ವರಿಷ್ಠರ ಭೇಟಿ, ಜನಜೀವನಕ್ಕೆ ತೊಂದರೆಯಾಗದ ರೀತಿ ಹೊಸವರ್ಷಕ್ಕೆ ಮಾರ್ಗಸೂಚಿ: ಸಿಎಂ ಬೊಮ್ಮಾಯಿ 

ಬೆಂಗಳೂರಿನಲ್ಲಿ ಇದುವರೆಗೆ 12 ಮಂದಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದ್ದು, ರಾಜ್ಯದಲ್ಲಿ ಕೂಡ ಕೋವಿಡ್ ಸೋಂಕಿನ ಹೆಚ್ಚಳ ಆತಂಕ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ನೇತೃತ್ವದಲ್ಲಿ ಸುವರ್ಣ ವಿಧಾನ ಸೌಧದಲ್ಲಿ ಸೋಮವಾರ ಸಚಿವ ಸಂಪುಟ ಸಭೆ ಮುಕ್ತಾಯಗೊಂಡಿತು. 
ಮಾಧ್ಯಮ ಪ್ರತಿನಿಧಿಗಳ ಮುಂದೆ ಸಿಎಂ ಬೊಮ್ಮಾಯಿ
ಮಾಧ್ಯಮ ಪ್ರತಿನಿಧಿಗಳ ಮುಂದೆ ಸಿಎಂ ಬೊಮ್ಮಾಯಿ

ಬೆಳಗಾವಿ: ಬೆಂಗಳೂರಿನಲ್ಲಿ ಇದುವರೆಗೆ 12 ಮಂದಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದ್ದು, ರಾಜ್ಯದಲ್ಲಿ ಕೂಡ ಕೋವಿಡ್ ಸೋಂಕಿನ ಹೆಚ್ಚಳ ಆತಂಕ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ನೇತೃತ್ವದಲ್ಲಿ ಸುವರ್ಣ ವಿಧಾನ ಸೌಧದಲ್ಲಿ ಸೋಮವಾರ ಸಚಿವ ಸಂಪುಟ ಸಭೆ ಮುಕ್ತಾಯಗೊಂಡಿತು. 

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಇಂದು ಮಧ್ಯಾಹ್ನ ದೆಹಲಿಗೆ ಹೋಗುತ್ತಿದ್ದೇನೆ. ಕಳೆದ ಬಾರಿ ಹೋದಾಗ ಸಭೆಗಳು ಅಪೂರ್ಣ ಆಗಿದ್ದವು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಇತರ ನಾಯಕರನ್ನು ಭೇಟಿ ಮಾಡಿ ವಿಧಾನಸಭೆ ಚುನಾವಣೆ ತಯಾರಿ, ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸುತ್ತೇನೆ ಎಂದಿದ್ದಾರೆ. 

ಬೆಳಗಾವಿ ಅಧಿವೇಶನ ಫಲಪ್ರದ ಆಗಬೇಕು. ಉತ್ತರ ಕರ್ನಾಟಕದ ಬಗ್ಗೆ ಸಮಗ್ರ ಚರ್ಚೆ ಆಗಬೇಕು. ಯಾವುದೇ ವಿಚಾರಗಳ ಮೇಲೆ ಚರ್ಚೆ ನಡೆಸಲು ನಾವು ಸಿದ್ಧರಿದ್ದೇವೆ. ಮಧ್ಯಾಹ್ನ ದೆಹಲಿಗೆ ತೆರಳಿ ಎಲ್ಲದರ ಬಗ್ಗೆಯೂ ಚರ್ಚೆ ನಡೆಸಲಾಗುತ್ತದೆ. ಕಳೆದ ಬಾರಿ ಹೋದಾಗ ಸಭೆಗಳು ಅಪೂರ್ಣ ಆಗಿದ್ದವು. ಈ ಬಾರಿ ಚುನಾವಣೆ ತಯಾರಿ, ಸಂಪುಟ ವಿಸ್ತರಣೆ ಇತ್ಯಾದಿಗಳ ಬಗ್ಗೆ ಚರ್ಚೆ ನಡೆಯಲಿದೆ. ಸಾಧ್ಯವಾದರೆ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದರು.

ಇಂದು ಮಧ್ಯಾಹ್ನ ಉನ್ನತ ಮಟ್ಟದ ತಜ್ಞರ ಸಭೆ
ಸಚಿವ ಸಂಪುಟ ಸಭೆಯಲ್ಲಿ ಕೊರೋನಾ ನಿಯಂತ್ರಣದ ಬಗ್ಗೆ ಚರ್ಚೆ ಆಗಿದೆ. ಕೋವಿಡ್ ಬಗ್ಗೆ ಜಾಗೃತಿ ಮೂಡಿಸುವುದು, ಬೂಸ್ಟರ್ ಡೋಸ್ ಕಡ್ಡಾಯ ಬಗ್ಗೆಯೂ ಚರ್ಚೆ ನಡೆದಿದೆ. ಮಧ್ಯಾಹ್ನ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಮತ್ತು ಕಂದಾಯ ಸಚಿವ ಆರ್ ಅಶೋಕ್ ನೇತೃತ್ವದಲ್ಲಿ ಉನ್ನತ ಮಟ್ಟದ ತಜ್ಞರ ಸಭೆ ಇದೆ. ಜನಜೀವನಕ್ಕೆ ಯಾವುದೇ ತೊಂದರೆ ಆಗದಂತೆ ಹೊಸ ವರ್ಷಕ್ಕೆ ಮಾರ್ಗಸೂಚಿ ಪ್ರಕಟಿಸಲಾಗುವುದು. ಕೆಲವು ನಿಯಮಗಳನ್ನ ಸೇರಿಸಲಾಗುತ್ತದೆ. ಆರ್ಥಿಕತೆ ಮೇಲೆ ಪರಿಣಾಮ ಬೀರದ ರೀತಿ ಪ್ರಕಟಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com