ಕೋವಿಡ್-19 ಬಗ್ಗೆ ಸರ್ಕಾರ ತೆಗೆದುಕೊಳ್ಳುವ ಮುನ್ನೆಚ್ಚರಿಕೆ ಕ್ರಮಗಳಿಂದ ಸಾಮಾನ್ಯ ಬದುಕಿಗೆ ತೊಂದರೆಯಾಗುವುದಿಲ್ಲ: ಸಿಎಂ ಬೊಮ್ಮಾಯಿ

ಕೋವಿಡ್-19 ಸಾಂಕ್ರಾಮಿಕ ಹರಡುವಿಕೆಯನ್ನು ತಡೆಗಟ್ಟಲು ಸಾಮಾನ್ಯ ಜನಜೀವನಕ್ಕೆ ಯಾವುದೇ ಧಕ್ಕೆಯುಂಟಾಗದಂತೆ ಮತ್ತು ಆರ್ಥಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಹಂತಹಂತವಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಆರೋಗ್ಯ ಕಾರ್ಯಕರ್ತೆಯೊಬ್ಬರು ವ್ಯಕ್ತಿಯೊಬ್ಬನಿಗೆ ಕೋವಿಡ್-19 ಲಸಿಕೆ ನೀಡುತ್ತಿರುವುದು
ಆರೋಗ್ಯ ಕಾರ್ಯಕರ್ತೆಯೊಬ್ಬರು ವ್ಯಕ್ತಿಯೊಬ್ಬನಿಗೆ ಕೋವಿಡ್-19 ಲಸಿಕೆ ನೀಡುತ್ತಿರುವುದು
Updated on

ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕ ಹರಡುವಿಕೆಯನ್ನು ತಡೆಗಟ್ಟಲು ಸಾಮಾನ್ಯ ಜನಜೀವನಕ್ಕೆ ಯಾವುದೇ ಧಕ್ಕೆಯುಂಟಾಗದಂತೆ ಮತ್ತು ಆರ್ಥಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಹಂತಹಂತವಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನಿನ್ನೆ ಬೆಳಗಾವಿಯಲ್ಲಿ ಸಚಿವ ಸಂಪುಟ ಸಭೆಯ ನಂತರ ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಬೊಮ್ಮಾಯಿ, ಈಗಿರುವ ಕೋವಿಡ್ ಸಾಂಕ್ರಾಮಿಕ ಪರಿಸ್ಥಿತಿ ಮತ್ತು ಅದರ ಹರಡುವಿಕೆಯನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ ಎಂದರು. 

ಜನರಲ್ಲಿ ಜಾಗೃತಿ ಮೂಡಿಸಲು ತಾಂತ್ರಿಕ ಸಲಹಾ ಸಮಿತಿ (TAC) ಯೊಂದಿಗೆ ಚರ್ಚಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಕೋವಿಡ್ ಮುನ್ನೆಚ್ಚರಿಕೆಯ ಡೋಸ್ ನ್ನು ಹೆಚ್ಚಿಸುವುದು, ಕೊರೋನಾ ಪರೀಕ್ಷೆಯನ್ನು ತ್ವರಿತಗೊಳಿಸುವುದು, ವಿಶೇಷವಾಗಿ ತೀವ್ರವಾದ ಉಸಿರಾಟದ ಸೋಂಕಿನಿಂದ ಬಳಲುತ್ತಿರುವವರಿಗೆ ವಿಶೇಷ ಮುನ್ನೆಚ್ಚರಿಕೆ ಕ್ರಮಗಳು (SARI) (ಇನ್ಫ್ಲುಯೆನ್ಸ ಲೈಕ್ ಇಲ್ನೆಸ್ (ILI) ನಿಂದ ಬಳಲುತ್ತಿರುವವರಿಗೆ), ಸಾರ್ವಜನಿಕವಾಗಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮತ್ತು ಇತರ ತಡೆಗಟ್ಟುವ ಕ್ರಮಗಳನ್ನು ಹಂತಹಂತವಾಗಿ ಜಾರಿಗೆ ತರಲಾಗುವುದು ಎಂದು ಹೇಳಿದರು. 

ಹೊಸ ವರ್ಷಾಚರಣೆಗೆ ಪ್ರತ್ಯೇಕ ಮಾರ್ಗಸೂಚಿಗಳನ್ನು ಹೊರಡಿಸಿದ ಬೊಮ್ಮಾಯಿ, ಕಳೆದ ವರ್ಷದಂತೆಯೇ ಇರುತ್ತದೆ ಎಂದರು. ಕೆಲವು ದೇಶಗಳಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಕೆಲವು ಹೆಚ್ಚುವರಿ ಕ್ರಮಗಳನ್ನು ಅಳವಡಿಸಿಕೊಳ್ಳಲಾಗುವುದು ಎಂದರು. 

ಪ್ರಸ್ತುತ ನಡೆಯುತ್ತಿರುವ ಬೆಳಗಾವಿ ಅಧಿವೇಶನವು ಫಲಪ್ರದವಾಗಬೇಕೆಂದು ಸರ್ಕಾರ ಬಯಸುತ್ತದೆ. ಉತ್ತರ ಕರ್ನಾಟಕಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ವಿವರವಾಗಿ ಚರ್ಚಿಸಬೇಕು. ಪ್ರತಿಪಕ್ಷಗಳು ತೆಗೆದುಕೊಳ್ಳುವ ಯಾವುದೇ ವಿಷಯವನ್ನು ಚರ್ಚಿಸಲು ಸರ್ಕಾರ ಸಿದ್ಧವಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com