ಸಾರಿಗೆ ಸೇವಾ ನಿಗಮವನ್ನು ಲಾಭದಾಯಕವಾಗಿಸಲು ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ: ಸಿಎಂ ಬೊಮ್ಮಾಯಿ

ಸಾರಿಗೆ ಸೇವಾ ನಿಗಮವನ್ನು ಲಾಭದಾಯಕವಾಗಿಸಲು ಕರ್ನಾಟಕ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಮತ್ತು ಖಾಸಗಿ ಸಾರಿಗೆ ನಿರ್ವಾಹಕರಿಗೆ ತೀವ್ರ ಪೈಪೋಟಿ ನೀಡಲು ರಾಜ್ಯ ಸಾರಿಗೆ ಸಂಸ್ಥೆಯಲ್ಲಿ ಸುಧಾರಣೆಗಳನ್ನು ತರಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಹೇಳಿದರು.
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ

ಬೆಳಗಾವಿ: ಸಾರಿಗೆ ಸೇವಾ ನಿಗಮವನ್ನು ಲಾಭದಾಯಕವಾಗಿಸಲು ಕರ್ನಾಟಕ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಮತ್ತು ಖಾಸಗಿ ಸಾರಿಗೆ ನಿರ್ವಾಹಕರಿಗೆ ತೀವ್ರ ಪೈಪೋಟಿ ನೀಡಲು ರಾಜ್ಯ ಸಾರಿಗೆ ಸಂಸ್ಥೆಯಲ್ಲಿ ಸುಧಾರಣೆಗಳನ್ನು ತರಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಹೇಳಿದರು.

ನೂತನವಾಗಿ ನಿರ್ಮಿಸಿರುವ ಬೆಳಗಾವಿ ಕೇಂದ್ರ ಬಸ್ ನಿಲ್ದಾಣವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಕೆಎಸ್‌ಆರ್‌ಟಿಸಿಯಲ್ಲಿ ಸುಧಾರಣೆ ತರಲು ಹಿರಿಯ ನಿವೃತ್ತ ಐಎಎಸ್ ಅಧಿಕಾರಿ ಶ್ರೀನಿವಾಸಮೂರ್ತಿ ಅಧ್ಯಕ್ಷತೆಯಲ್ಲಿ ರಚಿಸಿದ್ದ ಸಮಿತಿ ತನ್ನ ವರದಿಯಲ್ಲಿ ತಿಳಿಸಿದ್ದು, ಅನುಷ್ಠಾನದ ಜವಾಬ್ದಾರಿ ನನ್ನ ಮೇಲಿದೆ ಎಂದು ಹೇಳಿದರು.

ಸಾರಿಗೆ ಸೇವೆಯಲ್ಲಿನ ಲೋಪದೋಷಗಳನ್ನು ನಿವಾರಿಸಲಾಗುವುದು ಮತ್ತು ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕಲಾಗುವುದು. ಮುಂಬರುವ ದಿನಗಳಲ್ಲಿ ಬಿಎಂಟಿಸಿ ಸೇರಿದಂತೆ ಕೆಎಸ್‌ಆರ್‌ಟಿಸಿಯ ವಿವಿಧ ನಿಗಮಗಳಲ್ಲಿ ಬದಲಾವಣೆಗಳನ್ನು ಕಾಣಬಹುದು. ಮುಂಬರುವ ದಿನಗಳಲ್ಲಿ ಶಾಲೆಗೆ ಹೋಗುವ ಮಕ್ಕಳಿಗೆ ಕೆಲ ಘೋಷಣೆಗಳನ್ನು ಮಾಡಲು ಚರ್ಚೆ ನಡೆಸಲಾಗುವುದು. ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ (ಎನ್‌ಡಬ್ಲ್ಯುಕೆಆರ್‌ಟಿಸಿ) ಬೆಳ್ಳಿಹಬ್ಬವನ್ನು ಆಚರಿಸುತ್ತಿರುವುದರಿಂದ ಮುಂಬರುವ ಬಜೆಟ್‌ನಲ್ಲಿ 500 ಹೊಸ ಬಸ್‌ಗಳನ್ನು ಖರೀದಿಸಲು ಮತ್ತು 500 ಹೊಸ ಸಿಬ್ಬಂದಿ ನೇಮಕಕ್ಕೆ ಅನುಮತಿ ನೀಡುವ ಕುರಿತು ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು..

ಕೆಎಸ್‌ಆರ್‌ಟಿಸಿ ಜನರಿಗೆ ಉತ್ತಮ ಸೇವೆಯನ್ನು ನೀಡುತ್ತಿದೆ ಆದರೆ, ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಭಾರಿ ನಷ್ಟವನ್ನು ಅನುಭವಿಸಿದೆ, ರಾಜ್ಯ ಸರ್ಕಾರವು ಎರಡು ವರ್ಷಗಳಲ್ಲಿ ನಿಗಮಕ್ಕೆ 2,000 ಕೋಟಿ ರೂಪಾಯಿಗಳ ಆರ್ಥಿಕ ನೆರವು ನೀಡಿದೆ. ಅಲ್ಲದೆ, ಕೆಎಸ್‌ಆರ್‌ಟಿಸಿಯ ವಿವಿಧ ನಿಗಮಗಳಿಗೆ ಹೊಸ ಬಸ್‌ಗಳನ್ನು ಖರೀದಿಸಲು ಮತ್ತು ಸಾಲ ಪಡೆಯಲು ಅನುಮತಿ ನೀಡಲಾಗಿದೆ. ರಾಜ್ಯ ಸಾರಿಗೆ ಸಂಸ್ಥೆಯು ಗ್ರಾಮೀಣ ಜನರಿಗೆ ಹಾಗೂ ಬಡ ಮಕ್ಕಳಿಗೆ ಸೇವೆಯನ್ನು ನೀಡುತ್ತಿದೆ. ಸರ್ಕಾರವು ಕಾಲಕಾಲಕ್ಕೆ ನಿಗಮಗಳನ್ನು ವಿಸ್ತರಿಸುತ್ತಿದೆ ಎಂದರು.

ಬೆಳಗಾವಿ ಬಸ್ ನಿಲ್ದಾಣ ಉತ್ತಮವಾಗಿ ಕಾರ್ಯನಿರ್ವಹಿಸಬೇಕು. ಪ್ರಧಾನಿ ಮೋದಿಯವರ ಸರ್ಕಾರದಲ್ಲಿ ಬಹಳಷ್ಟು ವಿಷಯಗಳು ಸುಧಾರಣೆಯಾಗುತ್ತಿವೆ. ವಿವಿಧ ಸ್ಥಳಗಳಿಗೆ ಸಂಪರ್ಕವನ್ನು ಒದಗಿಸುವ ಈ ಬಸ್ ನಿಲ್ದಾಣವು ಮುಖ್ಯವಾಗಿದೆ. ನಗರವು ವೇಗವಾಗಿ ಬೆಳೆಯುತ್ತಿದೆ ಮತ್ತು ಸುತ್ತಮುತ್ತಲಿನ ಎಲ್ಲಾ ಸ್ಥಳಗಳಿಗೆ ಸಂಪರ್ಕವನ್ನು ಒದಗಿಸಿದೆ. ಬೆಳಗಾವಿ ಬಸ್ ನಿಲ್ದಾಣ 30 ಕೋಟಿ ರೂಪಾಯಿ ವೆಚ್ಚದಲ್ಲಿ ನವೀಕರಣಗೊಂಡಿದ್ದು, ಪ್ರಯಾಣಿಕರಿಗೆ ಅನುಕೂಲವಾಗಬೇಕು ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com