ರಾಜ್ಯದಲ್ಲಿ ಕಾಂಗ್ರೆಸ್ ನಿಂದ ಹಾಥ್ ಜೋಡೋ ಯಾತ್ರೆ: ಪೃಥ್ವಿರಾಜ್ ಚವಾಣ್ ನೇತೃತ್ವ!

ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ 'ಹಾಥ್ ಸೆ ಹಾಥ್ ಜೋಡೋ' ಅಭಿಯಾನದ ಮೇಲ್ವಿಚಾರಣೆಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಮಂಗಳವಾರ 26 ಹಿರಿಯ ಕಾಂಗ್ರೆಸ್ ನಾಯಕರನ್ನು ವೀಕ್ಷಕರನ್ನಾಗಿ ನೇಮಿಸಿದೆ.
ಪೃಥ್ವಿರಾಜ್ ಚವಾಣ್
ಪೃಥ್ವಿರಾಜ್ ಚವಾಣ್
Updated on

ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ 'ಹಾಥ್ ಸೆ ಹಾಥ್ ಜೋಡೋ' ಅಭಿಯಾನದ ಮೇಲ್ವಿಚಾರಣೆಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಮಂಗಳವಾರ 26 ಹಿರಿಯ ಕಾಂಗ್ರೆಸ್ ನಾಯಕರನ್ನು ವೀಕ್ಷಕರನ್ನಾಗಿ ನೇಮಿಸಿದೆ.

ಆದರೆ, ಈ ಪಟ್ಟಿಯಲ್ಲಿ ರಾಜ್ಯದ ಒಬ್ಬರು ನಾಯಕರೂ ಇಲ್ಲದಿರುವುದು ಅಚ್ಚರಿಯ ವಿಚಾರವಾಗಿದೆ. ಮಹಾರಾಷ್ಟ್ರದ ಪೃಥ್ವಿರಾಜ್ ಚವಾಣ್ ಅವರಿಗೆ ಕರ್ನಾಟಕದಲ್ಲಿ ಯಾತ್ರೆಯ ಯೋಜನೆ ಮತ್ತು ಅನುಷ್ಠಾನದ ಉಸ್ತುವಾರಿ ವಹಿಸಲಾಗಿದ್ದು, ಇನ್ನೊಂದು ವಾರದಲ್ಲಿ ಯಾತ್ರೆ ಆರಂಭವಾಗಲಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರ್ನಾಟಕದವರಾಗಿರುವುದರಿಂದ ಉದ್ದೇಶಪೂರ್ವಕವಾಗಿಯೇ ರಾಜ್ಯದ ನಾಯಕರ ಹೆಸರನ್ನು ಕೈಬಿಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಮಾತನಾಡಿ, ರಾಜ್ಯದ ಚುನಾವಣೆಯತ್ತ ಕಾಂಗ್ರೆಸ್ ಮುಖಂಡರು ಮುಖ ಮಾಡಿದ್ದು, ಮೂರು ತಿಂಗಳಲ್ಲಿ ಚುನಾವಣಾ ಅಧಿಸೂಚನೆ ಹೊರಬೀಳುವ ನಿರೀಕ್ಷೆ ಇದೆ. ಹೀಗಾಗಿ ಪ್ರತಿಯೊಬ್ಬ ನಾಯಕರ ಉಪಸ್ಥಿತಿಯೂ ಇಲ್ಲಿ ಮಹತ್ವದ್ದಾಗಿದೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದ ಗಡಿ ವಿವಾದ ತಾರಕಕ್ಕೇರಿರುವಾಗಲೇ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿಯೊಬ್ಬರನ್ನು ಕರ್ನಾಟಕದ ಉಸ್ತುವಾರಿಯನ್ನಾಗಿ ನೇಮಿಸಿರುವುದು ಕುತೂಹಲ ಕೆರಳಿಸಿದೆ.

ಈ ಬೆಳವಣಿಗೆ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಮೂಲಗಳು, ಚವಾಣ್ ಅವರು ಕರ್ನಾಟಕದ ರಾಜ್ಯ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದರು. ಎಐಸಿಸಿ ಮಹಾರಾಷ್ಟ್ರ ರಾಜ್ಯ ಉಸ್ತುವಾರಿ ಎಚ್‌ಕೆ ಪಾಟೀಲ್ ಕೂಡ ಕರ್ನಾಟಕದವರೇ ಆಗಿದ್ದಾರೆಂದು ಹೇಳಿದೆ.

ಪ್ರಿಯಾಂಕಾ ಮತ್ತು ಅವರ ತಂಡ ರಾಜ್ಯಕ್ಕೆ ಆಗಮಿಸಿ ಪಾದಯಾತ್ರೆ ನಡೆಸಿ ಏಕತೆಯ ಸಂದೇಶವನ್ನು ಸಾರಲಿದ್ದಾರೆ. ಅಲ್ಲದೆ, ನಿರುದ್ಯೋಗ ಮತ್ತು ಹಣದುಬ್ಬರದಂತಹ ಮಹಿಳೆಯರಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ದನಿ ಎತ್ತಲಿದ್ದಾರೆಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಮಾತನಾಡಿ, ಚುನಾವಣೆ ಹತ್ತಿರವಾಗಿರುವುದರಿಂದ ಜನವರಿಯಲ್ಲಿ ಯಾತ್ರೆ ಆರಂಭಿಸುತ್ತೇವೆ. ಭಾರತ್ ಜೋಡೋ ಯಾತ್ರೆ ಇದೀಗ ಶ್ರೀನಗರದಲ್ಲಿ ನಡೆಯುತ್ತಿದ್ದು, ಗಣರಾಜ್ಯೋತ್ವ ದಿನದಂದು ಅಲ್ಲಿ ಯಾತ್ರೆಯು ಮುಕ್ತಾಯಗೊಳ್ಳಲಿದೆ ಎಂದು ಮಾಹಿತಿ ನೀಡಿದ್ದಾರೆ.

ಹಾಥ್ ಸೆ ಹಾಥ್ ಜೋಡೋ ಯಾತ್ರೆಯು ಭಾರತ್ ಜೋಡೋ ಯಾತ್ರೆಯ ಭಾಗವಾಗಿದೆ ಎಂದು ಎಐಸಿಸಿ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com