ಬೆಂಗಳೂರು: ಕೇಂದ್ರ ಸರ್ಕಾರ ಉತ್ತರ ಕರ್ನಾಟಕದ ಧಾರವಾಡ, ಬೆಳಗಾವಿ ಹಾಗೂ ಗದಗ ಸೇರಿದಂತೆ ಹಲವು ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ್ದು, ರಾಜ್ಯ ಸರ್ಕಾರ ಸಲ್ಲಿಸಿದ್ದ ಕಳಸಾ ಬಂಡೂರಿ ನಾಲಾ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಜಲ ಆಯೋಗ ಅನುಮತಿ ನೀಡಿದೆ.
ಕಳಸಾ ಬಂಡೂರಿ ವಿಸ್ತೃತ ಯೋಜನೆ ರಾಜ್ಯ ಸರ್ಕಾರ ಕಳುಹಿಸಿದ್ದ ಡಿಪಿಆರ್‌ಗೆ ಜಲ ಆಯೋಗದ ಅನುಮತಿ ಸಿಕ್ಕಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಯೋಜನೆಗೆ ಅನುಮೋದನೆ ನೀಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಧನ್ಯವಾದಗಳು ತಿಳಿಸಿದ್ದಾರೆ.
ಕಳಸಾ ಬಂಡೂರಿ ಯೋಜನೆಗೆ ಈ ಹಿಂದೆ ನಾವು ಕೂಡಾ ಹೋರಾಟ ಮಾಡಿದ್ವಿ. ಇದೀಗ ವಿಸ್ತೃತ ಯೋಜನಾ ವರದಿಗೆ ಸರ್ಕಾರ ಒಪ್ಪಿಗೆ ನೀಡಿದೆ ಎಂದಿರುವ ಜೋಶಿ, ಬೊಮ್ಮಾಯಿ ಸರ್ಕಾರವೂ ಅತ್ಯಂತ ಶ್ರಮ ಹಾಕಿದೆ. ನಾನು ಬೊಮ್ಮಾಯಿ, ಗೋವಿಂದ್ ಕಾರಜೋಳ ಅವರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ಇನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಸಹ ಯೋಜನೆಗೆ ಅನುಮೋದನೆ ನೀಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಸದನದಲ್ಲಿ ರಾಜ್ಯ ಸರ್ಕಾರದ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇತ್ತೀಚೆಗೆ ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಶೇಖಾವತ್ ಅವರನ್ನ ಭೇಟಿಯಾಗಿದ್ದರು.
Advertisement