ಬೆಂಗಳೂರು; ಕ್ರೈಸ್ತ ಧರ್ಮಕ್ಕೆ ಮತಾಂತರ ಯತ್ನ ಆರೋಪ; ಆಂಧ್ರ ಪ್ರದೇಶದ ಮೂವರ ವಿರುದ್ಧ FIR

ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಯತ್ನಿಸುತ್ತಿದ್ದ ಆರೋಪದ ಮೇರೆಗೆ ಆಂಧ್ರ ಪ್ರದೇಶ ಮೂಲದ ಮೂವರ ವಿರುದ್ಧ ಬೆಂಗಳೂರು ಪೊಲೀಸರು FIR ದಾಖಲಿಸಿಕೊಂಡಿದ್ದಾರೆ.
ಆರೋಪಿ ಬಂಧನ (ಸಾಂದರ್ಭಿಕ ಚಿತ್ರ)
ಆರೋಪಿ ಬಂಧನ (ಸಾಂದರ್ಭಿಕ ಚಿತ್ರ)

ಬೆಂಗಳೂರು: ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಯತ್ನಿಸುತ್ತಿದ್ದ ಆರೋಪದ ಮೇರೆಗೆ ಆಂಧ್ರ ಪ್ರದೇಶ ಮೂಲದ ಮೂವರ ವಿರುದ್ಧ ಬೆಂಗಳೂರು ಪೊಲೀಸರು FIR ದಾಖಲಿಸಿಕೊಂಡಿದ್ದಾರೆ.

ಬೆಂಗಳೂರಿನ ಜೆ.ಜೆ.ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಹಿಂದೂಗಳನ್ನು ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಯತ್ನಿಸಿದ ಆರೋಪ ಮೇರೆಗೆ ಆಂಧ್ರ ಪ್ರದೇಶ ಮೂಲದ ವಿಜಯ್​​, ಶೃತಿ, ನೆಲ್ಸನ್ ವಿರುದ್ಧ ಜೆ.ಜೆ.ನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಮೂಲಗಳ ಪ್ರಕಾರ ವಿ.ಎಸ್​. ಗಾರ್ಡನ್​ನಲ್ಲಿ ಹಿಂದೂಗಳಿಗೆ ತೆಲುಗು ಭಾಷೆಯಲ್ಲಿದ್ದ ಏಸುಕ್ರಿಸ್ತನ ಕರಪತ್ರ ಹಂಚಿ ಹಣದ ಆಮಿಷವೊಡ್ಡಿ ಹಿಂದೂ ಧರ್ಮದ ಬಗ್ಗೆ ಅಪಪ್ರಚಾರ ಮಾಡಿ ಮತಾಂತರ ಮಾಡಲು ಯತ್ನ ನಡೆದಿದೆ ಎಂದು ಆರೋಪಿಸಲಾಗಿದೆ. 

ಈ ಬಗ್ಗೆ ವಿಚಾರ ತಿಳಿಯುತ್ತಿದ್ದಂತೆ ಹಿಂದೂ ಮುಖಂಡರಾದ ಎಮ್​ಎಲ್ ಶಿವಕುಮಾರ್, ಪವನ್ ಮತ್ತು ಹರ್ಷ ಮುತಾಲಿಕ್ ಮುಂತದಾವರು ದೂರು ನೀಡಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿದವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com